ರಸ್ತೆ ಸುರಕ್ಷತಾ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಕಾನೂನು ಪಾಲನೆ ಮಾಡ ಬೇಕೆಂದು ನಾಪೋಕ್ಲು ಪೊಲೀಸ್ ಠಾಣೆ ಅಧಿಕಾರಿ ರಾಘವೇಂದ್ರ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ನಾಪೋಕ್ಲುರಸ್ತೆ ಸುರಕ್ಷತಾ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಕಾನೂನು ಪಾಲನೆ ಮಾಡ ಬೇಕೆಂದು ನಾಪೋಕ್ಲು ಪೊಲೀಸ್ ಠಾಣೆ ಅಧಿಕಾರಿ ರಾಘವೇಂದ್ರ ಹೇಳಿದ್ದಾರೆ.
ನಾಪೋಕ್ಲು ಬಸು ನಿಲ್ದಾಣದಲ್ಲಿ ಬುಧವಾರ ಕೊಡಗು ಜಿಲ್ಲಾ ಪೊಲೀಸ್, ನಾಪೋಕ್ಲು ಠಾಣೆಯ ಪೊಲೀಸ್ ಹಾಗೂ ವಿವಿಧ ಶಾಲೆಗಳ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಆಯೋಜಿಸಲಾಗಿದ್ದ ಜನಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಮುಖ್ಯವಾಗಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಸಂಚಾರ ನಿಯಮ ಅನುಸರಿಸಬೇಕು. ಕಾರುಗಳಲ್ಲಿ ಸಂಚರಿಸುವವರು ಸೀಟ್ ಬೆಲ್ಟ್ ಧರಿಸುವುದು ಮತ್ತು ಚಾಲನ ಪರವಾನಗಿ, ವಿಮೆ ಸೇರಿದಂತೆ ದಾಖಲೆಗಳನ್ನು ಇಟ್ಟುಕೊಳ್ಳಬೇಕು ಎಂದ ಅವರು, ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ಸಾಕಷ್ಟು ಸಾವು ನೋವುಗಳನ್ನು ತಪ್ಪಿಸಬಹುದು ಎಂದರು.
ಮಾರುಕಟ್ಟೆ ಸಮೀಪದಿಂದ ಪೇಟೆಯ ಮುಖ್ಯ ಬೀದಿಯಲ್ಲಿ ರಸ್ತೆ ಸುರಕ್ಷತಾ ಕಾನೂನಿನ ಬಗ್ಗೆ ವಿವಿಧ ಘೋಷ ವಾಕ್ಯಗಳೊಂದಿಗೆ ಡ್ರಂ ಬಾರಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಶಿಕ್ಷಕರು, ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.