ರಸ್ತೆ ಅಗಲೀಕರಣಕ್ಕೆ ಪಪಂನಿಂದ ಪೂರ್ಣ ಸಹಕಾರ ಅಗತ್ಯ: ಶ್ರೀನಿವಾಸ್

| Published : Aug 09 2025, 02:04 AM IST

ರಸ್ತೆ ಅಗಲೀಕರಣಕ್ಕೆ ಪಪಂನಿಂದ ಪೂರ್ಣ ಸಹಕಾರ ಅಗತ್ಯ: ಶ್ರೀನಿವಾಸ್
Share this Article
  • FB
  • TW
  • Linkdin
  • Email

ಸಾರಾಂಶ

ರಸ್ತೆ ಅಗಲೀಕರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 60 ಕೋಟಿ ರುಪಾಯಿ ಮಂಜೂರು ಮಾಡಿದ್ದು ರಸ್ತೆ ಅಗಲೀಕರಣ ಕಾಮಗಾರಿಗೆ ಪಟ್ಟಣ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕು ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಮನವಿ ಮಾಡಿದರು.

ನರಸಿಂಹರಾಜಪುರ: ರಸ್ತೆ ಅಗಲೀಕರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 60 ಕೋಟಿ ರುಪಾಯಿ ಮಂಜೂರು ಮಾಡಿದ್ದು ರಸ್ತೆ ಅಗಲೀಕರಣ ಕಾಮಗಾರಿಗೆ ಪಟ್ಟಣ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕು ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಮನವಿ ಮಾಡಿದರು.

ಪಟ್ಟಣದಲ್ಲಿ ಶುಕ್ರವಾರ ಪ್ರವಾಸಿ ಮಂದಿರದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದರು. ವರ್ತಕರ ಸಂಘದವರು ಹಲವಾರು ವರ್ಷಗಳಿಂದ ರಸ್ತೆ ಅಗಲೀಕರಣಕ್ಕಾಗಿ ಬೇಡಿಕೆ ಇಟ್ಟಿದ್ದರು. 100 ವರ್ಷದ ನಂತರ ರಸ್ತೆ ಅಗಲೀಕರಣವಾಗುತ್ತಿದೆ. ಈಗ ಪಟ್ಟಣ ಪಂಚಾಯಿತಿ ಸದಸ್ಯರ ಹಾಗೂ ಅಧಿಕಾರಿಗಳ ಜವಾಬ್ದಾರಿ ಹೆಚ್ಚಾಗಿದೆ. ಪ್ರತಿಯೊಬ್ಬರಿಗೂ ಪರಿಹಾರ ನೀಡಿ ರಸ್ತೆ ಅಗಲೀಕರಣ ಮಾಡಲಾಗುವುದು. ಆಯಾ ಸದಸ್ಯರು ತಮ್ಮ ಭಾಗದಲ್ಲಿ ಬರುವ ಮನೆಯ ಮಾಲೀಕರಿಗೆ ಮನ ಒಲಿಸಬೇಕಾಗಿದೆ.ಯಾವುದೇ ಅಪಸ್ವರ ಬಾರದಂತೆ ರಸ್ತೆ ಅಗಲೀಕರಣ ಮಾಡಬೇಕಾಗಿದೆ. ಮುಂದಿನ ದಿನಗಳಲ್ಲಿ ನಾನು, ಶಾಸಕರು ಸಹ ಮನೆ ಮಾಲೀಕರ ಸಭೆ ನಡೆಸಲಿದ್ದೇವೆ ಎಂದರು.

ವರ್ತಕರ ಸಂಘದ ಅಧ್ಯಕ್ಷ ಜಗದೀಶ್ ಮಾತನಾಡಿ, ವರ್ತಕರ ಬಹಳ ದಿನಗಳ ಬೇಡಿಕೆ ಈಡೇರಿದೆ.ಜನರ ಭಾವನೆಗೆ ಸ್ಪಂದಿಸಿ ಮುಖ್ಯಮಂತ್ರಿಗಳಿಂದ ರಸ್ತೆ ಅಗಲೀಕರಣಕ್ಕಾಗಿ 60 ಕೋಟಿ ರುಪಾಯಿ ಮಂಜೂರು ಮಾಡಿಸಿಕೊಂಡಿರುವುದಕ್ಕೆ ವರ್ತಕರ ಸಂಘದಿಂದ ಕೃತಜ್ಞತೆ ತಿಳಿಸುತ್ತೇವೆ ಎಂದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತಶೆಟ್ಟಿ, ಉಪಾಧ್ಯಕ್ಷೆ ಉಮಾ, ಸದಸ್ಯರಾದ ಮನೋಹರ್ ಪಾಷಾ, ವಸೀಂ, ಮುಕಂದ, ಸುರೈಯಾ ಭಾನು, ಸೋಜ,ಕುಮಾರಸ್ವಾಮಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್, ರೆವಿನ್ಯೂ ಇನ್‌ಸ್ಪೆಕ್ಟರ್ ವಿಜಯಕುಮಾರ್, ಪಟ್ಟಣದ ಪಂಚಾಯಿತಿ ಮಾಜಿ ಅಧ್ಯಕ್ಷರುಗಳಾದ ಪಿ.ಆರ್.ಸದಾಶಿವ,ಲಕ್ಷ್ಮಣಶೆಟ್ಟಿ, ಮುಖಂಡರಾದ ಮಾಳೂರು ದಿಣ್ಣೆ ರಮೇಶ್, ನಾರಾಯಣಮೂರ್ತಿ, ವರ್ಥಕರ ಸಂಘದ ಖಜಾಂಚಿ ವಾಸಪ್ಪಗೌಡ ಇದ್ದರು.

ಪಟ್ಟಣ ಪಂಚಾಯಿತಿ ಸದಸ್ಯರು ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಅವರನ್ನು ಗೌರವಿಸಿದರು.ನಂತರ ಪಟ್ಟಣ ಪಂಚಾಯಿತಿ ಸದಸ್ಯರು, ಮುಖಂಡರು ಹೊಸದಾಗಿ ನಿರ್ಮಾಣವಾಗುತ್ತಿರುವ ಹೊನ್ನೇಕೊಡಿಗೆ ಸಂಪರ್ಕ ಸೇತುವೆಗೆ ಬೇಟಿ ನೀಡಿ ವೀಕ್ಷಣೆ ಮಾಡಿದರು.