ಸಾರಾಂಶ
ಸತ್ಯ ಸಾಯಿ ಆಸ್ಪತ್ರೆಯಲ್ಲಿ ರೋಬೊಟಿಕ್ ಸರ್ಜರಿ ಪರಿಚಯಿಸಲಾಗುತ್ತಿದೆ. ಇದಕ್ಕಾಗಿ ಶಸ್ತ್ರಚಿಕಿತ್ಸಕರಿಗೆ ರೋಬೊಟಿಕ್ ಶಸ್ತ್ರಚಿಕಿತ್ಸೆ ಬಗ್ಗೆ ತರಬೇತಿಗಳನ್ನು ಸಹ ಆಯೋಜಿಸಲಾಗುತ್ತಿದೆ. ಅತ್ಯಾಧುನಿಕ ವಿಧಾನವನ್ನು ಆಸ್ಪತ್ರೆಯಲ್ಲಿ ಅಳವಡಿಸಿಕೊಂಡ ನಂತರ ಒಂದೇ ದಿನ ಅತಿ ಹೆಚ್ಚು ರೋಗಿಗಳಿಗೆ ವೇಗವಾಗಿ ಚಿಕಿತ್ಸೆ ನೀಡಲು ನೆರವಾಗುತ್ತದೆ.
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಪ್ರದೇಶದ ಬಡವರ ಮಕ್ಕಳಿಗೆ ಉಚಿತ ವೈದ್ಯಕೀಯ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಒಂದು ವಿಶಿಷ್ಟ ವೈದ್ಯಕೀಯ ಕಾಲೇಜನ್ನು ಸತ್ಯ ಸಾಯಿ ಗ್ರಾಮದಲ್ಲಿ ಆರಂಭಿಸಲಾಗಿದೆ. ಇಲ್ಲಿ ವೈದ್ಯಕೀಯ ಶಿಕ್ಷಣ ಪಡೆದವರು ಮಾನವ ಕುಲಕ್ಕೆ ಸೇವೆ ಸಲ್ಲಿಸಲು ಪೂರಕ ಮನಸ್ಥಿತಿ ಬೆಳೆಸಿಕೊಂಡಿರುತ್ತಾರೆ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದರು. ತಾಲೂಕಿನ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದಲ್ಲಿ ಆಶೀರ್ವಚನ ನೀಡಿದ ಸದ್ಗುರು, ವೈದ್ಯಕೀಯ ಕಾಲೇಜು ಆರಂಭವಾಗಿ 3 ವರ್ಷಗಳು ಕಳೆದಿವೆ. ಶೀಘ್ರದಲ್ಲಿಯೇ ಆರಂಭವಾಗಲಿರುವ ಹೊಸ ಆಸ್ಪತ್ರೆಯಲ್ಲಿ ಪಿಜಿ ಕೋರ್ಸ್‌ಗಳನ್ನು ಪ್ರಾರಂಭಿಸುತ್ತೇವೆ ಎಂದರು.ರೋಬೊಟಿಕ್ ಸರ್ಜರಿ
ಆಸ್ಪತ್ರೆಯಲ್ಲಿ ರೋಬೊಟಿಕ್ ಸರ್ಜರಿ ಪರಿಚಯಿಸುತ್ತಿದ್ದೇವೆ. ಇದಕ್ಕಾಗಿ ಶಸ್ತ್ರಚಿಕಿತ್ಸಕರಿಗೆ ರೋಬೊಟಿಕ್ ಶಸ್ತ್ರಚಿಕಿತ್ಸೆ ಬಗ್ಗೆ ತರಬೇತಿಗಳನ್ನು ಸಹ ಆಯೋಜಿಸುತ್ತಿದ್ದೇವೆ. ಈ ಅತ್ಯಾಧುನಿಕ ವಿಧಾನವನ್ನು ಆಸ್ಪತ್ರೆಯಲ್ಲಿ ಅಳವಡಿಸಿಕೊಂಡ ನಂತರ ಒಂದೇ ದಿನ ಅತಿ ಹೆಚ್ಚು ರೋಗಿಗಳಿಗೆ ವೇಗವಾಗಿ ಚಿಕಿತ್ಸೆ ನೀಡಲು ನೆರವಾಗುತ್ತದೆ. ಕೆಲವೇ ಕೆಲವು ಸವಲತ್ತು ಪಡೆದ ವೈದ್ಯರು ಮಾತ್ರ ಕಾರ್ಪೊರೇಟ್ ಆಸ್ಪತ್ರೆಗಳಿಗೆ ಹೋಗಿ ತರಬೇತಿ ಪಡೆಯಬಹುದು. ಹೀಗಾಗಿ ಈ ಸಂಬಂಧ ಕೆಲವು ಕಾರ್ಯಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದರು.ನಿಸ್ವಾರ್ಥ ಸೇವೆಗೆ ಶ್ಲಾಘನೆವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಸತ್ಯ ಸಾಯಿ ಬಾಬಾ ಅವರ ಸಾರ್ವಕಾಲಿಕ ಸೇವೆಯು ಯಾವುದೇ ಧರ್ಮ, ಜಾತಿ ಅಥವಾ ರಾಷ್ಟ್ರೀಯತೆಗೆ ಸೀಮಿತವಾಗಿರಲಿಲ್ಲ. ನಿಜವಾದ ಪ್ರಗತಿಯು ನಿಸ್ವಾರ್ಥ ಸೇವೆಯಿಂದ ಪ್ರಾರಂಭವಾಗುತ್ತದೆ. ಸಾಮಾಜಿಕ ಕಾರ್ಯಕ್ರಮಗಳ ಪ್ರಮಾಣವು ಜನರನ್ನು ನಿಸ್ವಾರ್ಥರನ್ನಾಗಿಸಲು ನೆರವಾಗುತ್ತದೆ ಎಂದು ಹೇಳಿದರು.