ಸಾರಾಂಶ
ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ರೀಲ್ಸ್ ಆಕೃತಿಯ ಮಣ್ಣಿನ ಹರಕೆಯನ್ನು ಸಲ್ಲಿಸಿದ್ದಾರೆ.
ಬೆಳ್ತಂಗಡಿ: ಮಣ್ಣಿನ ಹರಕೆಯ ಕ್ಷೇತ್ರವೆಂದೇ ಪ್ರಸಿದ್ಧವಾದ ಸುರ್ಯ ಶ್ರೀ ಸದಾಶಿವ ರುದ್ರದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತರಾಗಿ ಮಂಗಳವಾರ ಭೇಟಿ ನೀಡಿದರು.
ಪತ್ನಿ ರಾಧಿಕಾ ಪಂಡಿತ್. ಮಕ್ಕಳಾದ ಐರಾ ಹಾಗೂ ಯಥರ್ವ್ ಜೊತೆ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ರೀಲ್ಸ್ ಆಕೃತಿಯ ಮಣ್ಣಿನ ಹರಕೆಯನ್ನು ಸಲ್ಲಿಸಿದ್ದಾರೆ. ಇವರೊಂದಿಗೆ ಟಾಕ್ಸಿಕ್ ಸಿನಿಮಾ ನಿರ್ದೇಶಕ ವೆಂಕಟ್ ಇದ್ದರು.ಸದಾಶಿವರುದ್ರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರು ಯಶ್ ದಂಪತಿಯನ್ನು ಸನ್ಮಾನಿಸಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಮುನಿರಾಜ ಅಜಿ, ಪಂಚಾಯಿತಿ ಸದಸ್ಯ ಪ್ರವೀಣ್ ವಿ.ಜಿ. ಮುಂತಾದವರು ಉಪಸ್ಥಿತರಿದ್ದರು. ಸುರ್ಯ ದೇವಸ್ಥಾನದ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ನಟ ಯಶ್ ಮತ್ತು ಪತ್ನಿ ರಾಧಿಕಾ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಬಳಿಕ ಅನ್ನಪೂರ್ಣ ಅನ್ನಛತ್ರದಲ್ಲಿ ಭೋಜನ ಪ್ರಸಾದ ಸ್ವೀಕರಿಸಿದರು.