ಸಾರಾಂಶ
ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆ ಮಾನವೀಯ ಮೌಲ್ಯ ತಿಳಿಸಿಕೊಡುವುದು ಅಗತ್ಯವಾಗಿದೆ
ಲಕ್ಷ್ಮೇಶ್ವರ: ದೇಶವು ಪ್ರಗತಿ ಹೊಂದಬೇಕಾದಲ್ಲಿ ಶೈಕ್ಷಣಿಕ ಬೆಳವಣಿಗೆಯಿಂದ ಮಾತ್ರ ಸಾಧ್ಯ. ಶಿಕ್ಷಣದಲ್ಲಿ ಮನುಕುಲದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವೆಂದು ವಿಪ ಸದಸ್ಯ ಪ್ರೊ. ಎಸ್.ವಿ.ಸಂಕನೂರ ಹೇಳಿದರು.
ಇತ್ತೀಚೆಗೆ ಸಮೀಪದ ಶಿಗ್ಲಿಯ ಜಿಎಸ್‌ಎಸ್ ಶಿಕ್ಷಣ ಸಂಸ್ಥೆಗಳ ಕೆಜಿ ಮುದಗಲ್ಲ ಪ್ರೌಢಶಾಲೆ, ಜಿ.ಎಫ್. ಉಪನಾಳ ಪ್ರಾಥಮಿಕ ಶಾಲೆ, ಡವಳಗಿ ತಬ್ಬಣ್ಣಜ್ಜ ಪ್ರಾಥಮಿಕ ಶಾಲೆ ಹಾಗೂ ಎಸ್.ವಿ. ಹುಲಗೂರ ಆಂಗ್ಲ ಮಾಧ್ಯಮ ಶಾಲೆಗಳ ಶಾಲಾ ಉತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆ ಮಾನವೀಯ ಮೌಲ್ಯ ತಿಳಿಸಿಕೊಡುವುದು ಅಗತ್ಯವಾಗಿದೆ. ಮಕ್ಕಳ ಕೈಗೆ ಮೊಬೈಲ್ ಕೊಡುವುದರಿಂದ ಶಿಕ್ಷಣದಿಂದ ಮಕ್ಕಳು ವಂಚಿತರಾಗುತ್ತಿದ್ದಾರೆ. ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜತೆ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡುವ ಕಾರ್ಯ ಮಾಡುವುದು ಅಗತ್ಯವಾಗಿದೆ ಎಂದು ಹೇಳಿದರು.
ಈ ವೇಳೆ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಶಿಗ್ಲಿಯು ಶೈಕ್ಷಣಿಕವಾಗಿ ಸಾಕಷ್ಟು ಹೆಸರು ಮಾಡಿರುವುದು ಸಂತೋಷದ ಸಂಗತಿಯಾಗಿದೆ.ಕಳೆದ 30 ವರ್ಷಗಳಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರು ಫಲತಾಂಶ ಪಡೆಯುವ ಮೂಲಕ ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆ ಮಾಡಿರುವ ಸಾಧನೆ ಸಣ್ಣದಲ್ಲ. ಈ ಸಂಸ್ಥೆಯು ಇನ್ನೂ ಹೆಚ್ಚಿನ ಸಾಧನೆ ಮಾಡಲಿ ಎಂದು ಹೇಳಿದರು.ಸಭೆಯ ಅಧ್ಯಕ್ಷತೆ ರಂಜನ್ ಪಾಟೀಲ ವಹಿಸಿದ್ದರು. ಉಪಾಧ್ಯಕ್ಷ ರಾಜರತ್ನ ಹುಲಗೂರ, ಪ್ರವೀಣ ಹುಲಗೂರ, ಯಲ್ಲಪ್ಪ ತಳವಾರ. ಎಸ್.ಎಫ್, ಆದಿ, ಮುಖ್ಯೋಪಾಧ್ಯಾಯ ಎಲ್.ಎಸ್. ಅರಳಹಳ್ಳಿ, ಲಕ್ಷ್ಮೀಕಾಂತ ಹುಲಗೂರ, ಪ್ರಕಾಶ ರಜಪೂತ, ಶಿವಾನಂದ ಮೂಲಿಮನಿ, ಚಾಮರಾಜ ಹುಲಗೂರ, ಈರಣ್ಣ ಅಕ್ಕೂರ, ಮಂಜುನಾಥ ಶಂಭೋಜಿ, ಫಕ್ಕೀರೇಶ ಕುರಿ ಮೊದಲಾದವರು ಇದ್ದರು.