ಸಾರಾಂಶ
ಕೈಗಾರಿಕೆಗಳ ಅಭಿವೃದ್ಧಿಯಲ್ಲಿ ಐಟಿಐ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಇಲ್ಲಿಯ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ಸುನೀಲ ಹೊನವಾಡ ಹೇಳಿದರು.
ಕನ್ನಡಪ್ರಭ ವಾರ್ತೆ ಗೋಕಾಕ
ಕೈಗಾರಿಕೆಗಳ ಅಭಿವೃದ್ಧಿಯಲ್ಲಿ ಐಟಿಐ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಇಲ್ಲಿಯ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ಸುನೀಲ ಹೊನವಾಡ ಹೇಳಿದರು.ಮಂಗಳವಾರ ನಗರದ ಕೆಎಲ್‌ಇ ಐಟಿಐನ ಪ್ರಸಕ್ತ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸತ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಐಟಿಐ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಸಾಕಷ್ಟು ಉದ್ಯೋಗವಕಾಶಗಳಿವೆ. ಸರ್ಕಾರಿ, ಖಾಸಗಿ ಹಾಗೂ ಸ್ವಯಂ ಉದ್ಯೋಗ ಮಾಡಲು ಅವಕಾಶಗಳಿದ್ದು, ಅವುಗಳ ಸದುಪಯೋಗದಿಂದ ತಮ್ಮ ಬದುಕನ್ನು ರೂಪಿಸಿಕೊಳ್ಳಿ. ಆಧುನಿಕ ತಂತ್ರಜ್ಞಾನದ ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.ಅಧ್ಯಕ್ಷತೆ ವಹಿಸಿದ್ದ ಕೆಎಲ್‌ಇ ನಿರ್ದೇಶಕ ಜಯಾನಂದ ಮುನವಳ್ಳಿ ಮಾತನಾಡಿ, ನಗರದಲ್ಲಿ ಹಲವಾರು ವಿದ್ಯಾಸಂಸ್ಥೆಗಳನ್ನು ಪ್ರಾರಂಭಿಸಿ ಈ ಭಾಗದ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ನಗರದಲ್ಲಿ ₹50ಕೋಟಿ ವೆಚ್ಚದ ಆಯುರ್ವೇದ ಕಾಲೇಜು ಪ್ರಾರಂಭಿಸುವ ಗುರಿ ಹೊಂದಲಾಗಿದೆ ಎಂದರು.
ವೇದಿಕೆಯ ಮೇಲೆ ಹೆಸ್ಕಾಂನ ಈರಣ್ಣ ಚಿಪ್ಪಲಕಟ್ಟಿ, ಶರಣಗೌಡ ಬಿರಾದಾರ, ಕೆಎಲ್‌ಇ ಪಿಯು ಕಾಲೇಜಿನ ಆಡಳಿತಾಧಿಕಾರಿ ಜಿ.ಎಂ. ಅಂದಾನಿ, ಪ್ರಾಚಾರ್ಯರಾದ ಕೆ.ಬಿ. ಮೇವುಂಡಿಮಠ, ಮಂಜುನಾಥ ಕಂಬಾರ ಇದ್ದರು.