ಸಾರಾಂಶ
ಆಹಾರ ಸುರಕ್ಷತೆ ಮತ್ತು ಸಂರಕ್ಷಣೆ ಕುರಿತು ತಾಲೂಕು ಆಹಾರ ಅಧಿಕಾರಿ ಶಿವಕುಮಾರ್ , ವೈಯಕ್ತಿಕ ಸ್ವಚ್ಛತೆ, ಮಕ್ಕಳು ಮತ್ತು ಅಡುಗೆ ಸಿಬ್ಬಂದಿಯ ಆರೋಗ್ಯ ನಿರ್ವಹಣೆ ಕುರಿತು ಆರೋಗ್ಯ ಇಲಾಖೆಯ ಮಹದೇವರಾವ್, ಆಹಾರ ತಯಾರಿಕೆ ವೇಳೆ ಅಗ್ನಿ ಅವಘಡಗಳು ಸಂಭವಿಸಿದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅಗ್ನಿಶಾಮಕ ಠಾಣೆ ಅಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದರು.
ಕನ್ನಡಪ್ರಭ ವಾರ್ತೆ ಅರಕಲಗೂಡು
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉತ್ತಮ ಆಹಾರ ತಯಾರಿಸಿ ನೀಡುವ ಮೂಲಕ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ ನೀಗಿಸುತ್ತಿರುವ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಯ ಕಾರ್ಯ ಶ್ಲಾಘನೀಯ ಎಂದು ಶಾಸಕ ಎ.ಮಂಜು ತಿಳಿಸಿದರು.ಪಟ್ಟಣದ ಶಿಕ್ಷಕರ ಭವನದಲ್ಲಿ ತಾಲೂಕು ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಸಹಯೋಗದಲ್ಲಿ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಿಸಲು ಬಿಸಿಯೂಟ ಕಾರ್ಯಕ್ರಮ ಸಹಕಾರಿಯಾಗಿದೆ. ಶಾಲೆಗಳಲ್ಲಿ ಪಾಠದ ಜತೆಗೆ ಮಧ್ಯಾಹ್ನದ ಬಿಸಿ ಊಟ ನೀಡುತ್ತಿರುವುದು ಮಕ್ಕಳಿಗೆ ತಾಯಂದಿರ ರೀತಿಯಲ್ಲಿ ಅಡುಗೆಮಾಡಿ ಬಡಿಸುತ್ತಿರುವ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಯ ಕಾರ್ಯ ಪ್ರಶಸಂನೀಯವಾಗಿದೆ ಎಂದರು.
ಆಹಾರ ಸುರಕ್ಷತೆ ಮತ್ತು ಸಂರಕ್ಷಣೆ ಕುರಿತು ತಾಲೂಕು ಆಹಾರ ಅಧಿಕಾರಿ ಶಿವಕುಮಾರ್ , ವೈಯಕ್ತಿಕ ಸ್ವಚ್ಛತೆ, ಮಕ್ಕಳು ಮತ್ತು ಅಡುಗೆ ಸಿಬ್ಬಂದಿಯ ಆರೋಗ್ಯ ನಿರ್ವಹಣೆ ಕುರಿತು ಆರೋಗ್ಯ ಇಲಾಖೆಯ ಮಹದೇವರಾವ್, ಆಹಾರ ತಯಾರಿಕೆ ವೇಳೆ ಅಗ್ನಿ ಅವಘಡಗಳು ಸಂಭವಿಸಿದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅಗ್ನಿಶಾಮಕ ಠಾಣೆ ಅಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ. ನಾರಾಯಣ್, ಪಂಚಾಯತ್ ರಾಜ್ ಉಪ ನಿರ್ದೇಶಕ ಶೇಖರ್, ಅಕ್ಷರದಾಸೋಹ ಸಹಾಯಕ ನಿರ್ದೇಶಕ ರಂಗಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಸರಸ್ವತಿ, ಉಪಾಧ್ಯಕ್ಷೆ ಮಮತ, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಮೋಹನ್, ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ವರ್ಗಗಳ ಶಿಕ್ಷಕರ ಸಂಘದ ಅಧ್ಯಕ್ಷ ದೇವರಾಜ್ ಉಪಸ್ಥಿತರಿದ್ದರು.ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯು ತರಗತಿಗಳಲ್ಲಿ ಹೆಚ್ಚಿನ ಅಂಕಪಡೆದ ಅಡುಗೆ ಸಿಬ್ಬಂದಿ ಮತ್ತು ಸಹಾಯಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.