ಸಾರಾಂಶ
ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಮಹತ್ವವಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಆನಂದಪುರ ಸಮೀಪದ ಸಿದ್ದೇಶ್ವರ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಬೆಳ್ಳಿ ಹಬ್ಬದ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಮನವಿ
ಕನ್ನಡಪ್ರಭ ವಾರ್ತೆ ಆನಂದಪುರಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಮಹತ್ವವಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಇಲ್ಲಿಗೆ ಸಮೀಪದ ಸಿದ್ದೇಶ್ವರ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಬೆಳ್ಳಿ ಹಬ್ಬದ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಬೇಕು. ರಾಜ್ಯ ಸರ್ಕಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತವಾಗಿ ಪಠ್ಯಪುಸ್ತಕ, ಸಮವಸ್ತ್ರ, ಬಿಸಿಯೂಟ, ರಾಗಿ ಮಾಲ್ಟ್, ಮೊಟ್ಟೆ, ಚಿಕ್ಕಿ ಹಾಗೂ ಬಾಳೆಹಣ್ಣುಗಳನ್ನು ನೀಡುತ್ತಿದೆ. ಉತ್ತಮ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಉತ್ತಮ ತರಬೇತಿಯನ್ನು ಪಡೆದ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು, ಪೋಷಕರು ಖಾಸಗಿ ಶಾಲೆಯ ಬಣ್ಣಕ್ಕೆ ಮಾರುಹೋಗದೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಮನವಿ ಮಾಡಿದರು.
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿ, ಮಕ್ಕಳನ್ನು ವಿದ್ಯಾವಂತರಾಗಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.ಮಾಜಿ ಜಿಪಂ ಸದಸ್ಯ ರತ್ನಾಕರ ಹೊನಗೋಡು ಮಾತನಾಡಿದರು. ಶಾಲಾ ಸಮಿತಿಯ ಅಧ್ಯಕ್ಷ ಎನ್.ಮುರಳಿ ಅಧ್ಯಕ್ಷತೆ ವಹಿಸಿದ್ದರು.
ಗ್ರಾಪಂ ಅಧ್ಯಕ್ಷ ಮೋಹನ್ ಕುಮಾರ್, ಉಪಾಧ್ಯಕ್ಷೆ ರೂಪಾ ನಾಗರಾಜ್, ಪಂಚಾಯತ್ ಸದಸ್ಯರಾದ ಶಂಕರ್ ಮೋಹನ್ ಕುಮಾರ್ ಕಾಲೋನಿ, ನೇತ್ರಾವತಿ, ಗಜೇಂದ್ರ ಯಾದವ್, ತಾಪಂ ಮಾಜಿ ಅಧ್ಯಕ್ಷೆ ಜ್ಯೋತಿ ಕೋವಿ, ಮಾಜಿ ಉಪಾಧ್ಯಕ್ಷೆ ಸರಸ್ವತಮ್ಮ, ಸ್ಥಳೀಯರಾದ ಜಗದೀಶ್, ಎನ್.ಉಮೇಶ್, ಸುಬ್ರಹ್ಮಣ್ಯ, ಕೆಳಸೆ ಚಂದ್ರಪ್ಪ, ನೌಕರ ಸಂಘದ ನಿರ್ದೇಶಕ ರಾಜಶೇಖರ್ ಶೆಟ್ಟಿ, ಪಿಆರ್‌ಪಿ ಚಂದ್ರ ನಾಯಕ್ ಮತ್ತಿತರರಿದ್ದರು.ಇದೇ ವೇಳೆ ಕಳೆದ 25 ವರ್ಷಗಳಿಂದ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸಿದಂತಹ ಶಿಕ್ಷಕರನ್ನು ಗೌರವಿಸಲಾಯಿತು. ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.