ಶೈಕ್ಷಣಿಕ ಪ್ರಗತಿಗೆ ಪೋಷಕರ ಪಾತ್ರ ಗಮನಾರ್ಹ: ಶಾಸಕ ರಘುಮೂರ್ತಿ

| Published : Jan 30 2024, 02:01 AM IST

ಶೈಕ್ಷಣಿಕ ಪ್ರಗತಿಗೆ ಪೋಷಕರ ಪಾತ್ರ ಗಮನಾರ್ಹ: ಶಾಸಕ ರಘುಮೂರ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾಮೀಣ ಭಾಗಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಜವಾಬ್ದಾರಿಯನ್ನು ಪೋಷಕರೂ ಸಹ ಹೊರಬೇಕಾಗುತ್ತದೆ. ಕಾಲೇಜಿನಲ್ಲಿ ಉಪನ್ಯಾಸಕರು ಉತ್ತಮ ಶಿಕ್ಷಣ ನೀಡಿದರೂ ಸಹ ಕೆಲವು ಸಂದರ್ಭದಲ್ಲಿ ವಿದ್ಯಾರ್ಥಿಗಳ ನಿರ್ಲಕ್ಷ್ಯದಿಂದ ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಸಮಾನ ರೀತಿಯಲ್ಲಿ ಜವಾಬ್ದಾರಿ ಅರಿತು ಶಿಕ್ಷಣದ ಪ್ರಗತಿಗೆ ಶ್ರಮಿಸಬೇಕು.

ಚಳ್ಳಕೆರೆ: ಗ್ರಾಮೀಣ ಭಾಗಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಜವಾಬ್ದಾರಿಯನ್ನು ಪೋಷಕರೂ ಸಹ ಹೊರಬೇಕಾಗುತ್ತದೆ. ಕಾಲೇಜಿನಲ್ಲಿ ಉಪನ್ಯಾಸಕರು ಉತ್ತಮ ಶಿಕ್ಷಣ ನೀಡಿದರೂ ಸಹ ಕೆಲವು ಸಂದರ್ಭದಲ್ಲಿ ವಿದ್ಯಾರ್ಥಿಗಳ ನಿರ್ಲಕ್ಷ್ಯದಿಂದ ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಸಮಾನ ರೀತಿಯಲ್ಲಿ ಜವಾಬ್ದಾರಿ ಅರಿತು ಶಿಕ್ಷಣದ ಪ್ರಗತಿಗೆ ಶ್ರಮಿಸಬೇಕೆಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಪಶುರಾಮಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್ನೆಎಸ್ಸೆಸ್‌ ಶಿಬಿರ ಸಮಾರೋಪ ಸಮಾರಂಭ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಾಚಾರ್ಯ ನಿಂಗರಾಜು ಮಾತನಾಡಿ, ಪ್ರತಿವರ್ಷವೂ ಕಾಲೇಜಿನ ಫಲಿತಾಂಶದಲ್ಲಿ ಬದಲಾವಣೆಯಾಗುತ್ತಾ ಬಂದಿದೆ. ಬೋಧಕ, ಸಿಬ್ಬಂದಿ ವರ್ಗ ಪ್ರತಿ ಹಂತದಲ್ಲೂ ವಿದ್ಯಾರ್ಥಿಗಳ ಶಿಕ್ಷಣದ ಬಗ್ಗೆ ಹೆಚ್ಚು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಾ ಬಂದಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಪರಿಶ್ರಮ ಮತ್ತು ವಿನಯದಿಂದವಿದ್ಯೆ ಕಲಿಯಬೇಕಿದೆ. ನಿಮ್ಮ ಭವಿಷ್ಯವನ್ನು ನೀವೇ ರೂಪಿಸಿಕೊಳ್ಳುವಷ್ಟು ಸಮರ್ಥರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗಲೂರಸ್ವಾಮಿ, ಸದಸ್ಯರಾದ ರುದ್ರೇಶ್, ನಾಗಭೂಷಣ್, ಪ್ರಕಾಶ್, ಓಬಳೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ, ಕಾಂಗ್ರೆಸ್ ಮುಖಂಡ ಜಯವೀರಚಾರಿ, ನಾಗರಾಜು, ರಂಗಸ್ವಾಮಿ, ಉಪನ್ಯಾಸಕರಾದ ತ್ರಿವೇಣಿಲೋಕೇಶ್, ಮಂಜುನಾಥ ಮುಂತಾದವರು ಉಪಸ್ಥಿತರಿದ್ದರು.