ಸರ್ಕಾರಿಗಳ ಶಾಲೆಗಳ ಅಭಿವೃದ್ಧಿಗೆ ಪೋಷಕರು, ಶಿಕ್ಷಕರ ಪಾತ್ರ ಮುಖ್ಯ: ಧನಂಜಯ್

| Published : May 16 2025, 01:48 AM IST

ಸರ್ಕಾರಿಗಳ ಶಾಲೆಗಳ ಅಭಿವೃದ್ಧಿಗೆ ಪೋಷಕರು, ಶಿಕ್ಷಕರ ಪಾತ್ರ ಮುಖ್ಯ: ಧನಂಜಯ್
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರಿ ಶಾಲೆಗಳಲ್ಲಿ ಗುಣ ಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಇದರ ಬಗ್ಗೆ ಗ್ರಾಮದಲ್ಲಿ ಜನರಿಗೆ ಹಿರಿಯ ವಿದ್ಯಾರ್ಥಿಗಳು ಮನವರಿಕೆ ಮಾಡಿ ಕೊಡಬೇಕು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಹಲವು ವಿಶೆಷ ಯೋಜನೆ ರೂಪಿಸಿದೆ. ಶಿಕ್ಷಕರು ಇದನ್ನು ತಿಳಿಸಿ ಗುಣಮಟ್ಟದ ಶಿಕ್ಷಣದ ಬಗ್ಗೆ ಪೋಷಕರ ಮನವೊಲಿಸಿ ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸುವಂತೆ ಪ್ರೇರೆಪಿಸಬೇಕು.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಸರ್ಕಾರಿ ಶಾಲೆ ಅಭಿವೃದ್ಧಿಗೆ ಶಿಕ್ಷಕರು, ಪೋಷಕರು ಮತ್ತು ಹಳೆಯ ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಬಿ.ಧನಂಜಯ್ ತಿಳಿಸಿದರು.

ಕಾರ್ಕಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಿದ್ದ ನಮ್ಮ ಶಾಲೆ-ನಮ್ಮ ಜವಾಬ್ದಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣ ಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಇದರ ಬಗ್ಗೆ ಗ್ರಾಮದಲ್ಲಿ ಜನರಿಗೆ ಹಿರಿಯ ವಿದ್ಯಾರ್ಥಿಗಳು ಮನವರಿಕೆ ಮಾಡಿ ಕೊಡಬೇಕು ಎಂದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಹಲವು ವಿಶೆಷ ಯೋಜನೆ ರೂಪಿಸಿದೆ. ಶಿಕ್ಷಕರು ಇದನ್ನು ತಿಳಿಸಿ ಗುಣಮಟ್ಟದ ಶಿಕ್ಷಣದ ಬಗ್ಗೆ ಪೋಷಕರ ಮನವೊಲಿಸಿ ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸುವಂತೆ ಪ್ರೇರೆಪಿಸಬೇಕು ಎಂದರು.

ಹಿರಿಯ ವಿದ್ಯಾರ್ಥಿ ಮತ್ತು ಗ್ರಾಪಂ ಸದಸ್ಯ ಮಹೇಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಶಿವಮ್ಮ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಪೋಷಣ್ ಶಿಕ್ಷಣಾಧಿಕಾರಿ ಲೋಕೇಶ್, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕಿ ರಾಜೇಶ್ವರಿ, ಶಿಕ್ಷಣ ಸಂಯೋಜಕ ಲೋಕೇಶ್, ಅಂಗನವಾಡಿ ಮೇಲ್ವಿಚಾರಕಿ ಉಮಾ ದೇವರಾಜು, ಸಮೂಹ ಸಂಪನ್ಮೂಲ ವ್ಯಕ್ತಿ ನಂದೀಶ್, ಪಿಡಿಒ ಅಶ್ವಿನಿ, ಹಿರಿಯ ವಿದ್ಯಾರ್ಥಿ ಬಳಗದ ನಂದೀಶ್, ಅಭಿಷೇಕ್, ಸುನೀಲ್, ಪ್ರದೀಪ್, ಎಸ್.ಡಿ.ಎಂಸಿ ಸದಸ್ಯರಾದ ನಂದೀಶ್, ಶಿಲ್ಪಾ, ಬಸವರಾಜ್, ರಶ್ಮಿ, ಮಮತಾ, ಮುಖ್ಯಶಿಕ್ಷಕರ ಸಂಘದ ತಾಲೂಕು ಕಾರ್ಯದರ್ಶಿ ಡಿ.ಎ. ಕೆರೆ ಚಂದ್ರಶೇಖರ್, ಮುಖ್ಯ ಶಿಕ್ಷಕರಾದ ಭಾಗ್ಯಲಕ್ಷ್ಮಿ, ಭಾನುಮತಿ, ಅನಂತನಾರಾಯಣ್, ಸುನೀತಾ, ಶಿವರಾಮು, ಎ.ಬಿ.ಹಳ್ಳಿ ಮಂಜು, ಎಲಿಜಬತ್, ಮಹದೇವಯ್ಯ, ಶೋಭಾ ಸೇರಿದಂತೆ ಮತ್ತಿತರಿದ್ದರು.