ಸಾರಾಂಶ
ತರೀಕೆರೆಯಲ್ಲಿ ಪತ್ರಿಕಾ ದಿನಾಚರಣೆ । ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ
ಕನ್ನಡಪ್ರಭ ವಾರ್ತೆ, ತರೀಕೆರೆಪತ್ರಿಕಾ ರಂಗ ಸಮಾಜದಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಶಾಖೆ ತರೀಕೆರೆಯಿಂದ ಪಟ್ಟಣದ ಅರಮನೆ ಹೋಟೆಲ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ಪತ್ರಕರ್ತರ ಮಕ್ಕಳಿಗೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಟಿಸಿ ಮಾತನಾಡಿದರು.
ಮಹಾ ಪೋಷಕರಾದ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಈ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಡಿ.ವಿ.ಗುಂಡಪ್ಪ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವನ್ನು ಸ್ಥಾಪಿಸಿದ್ದಾರೆ. ಎಲ್ಲ ಪತ್ರಕರ್ತರು ಪತ್ರಿಕಾ ದಿನಾಚರಣೆ ಯಂದು ಇಬ್ಬರು ಮಹನೀಯರ ಭಾವಚಿತ್ರಕ್ಕೆ ಭಕ್ತಿಯಿಂದ ನಮಿಸುತ್ತಾರೆ, ಪತ್ರಿಕಾ ರಂಗ ಬಹಳ ಮುಖ್ಯವಾಗಿದೆ. ಪತ್ರಿಕಾ ದಿನಾಚರಣೆಯಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕೃತರಾದ ಡಾ.ಬಿ.ಆರ್.ಶೃತಿ ಅವರಿಗೆ ಸನ್ಮಾನ, ಪತ್ರಕರ್ತರ ಮಕ್ಕಳಿಗೆ, ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಉತ್ತಮ ಎಂದು ಹೇಳಿದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಎಸ್.ಸುರೇಶ್ ಚಂದ್ರ ಮಾತನಾಡಿ, ಶಾಸಕ ಜಿ.ಎಚ್.ಶ್ರೀನಿವಾಸ್ ಕಾರ್ಯಕ್ರಮ ಉದ್ಘಾಟಿಸಿದ್ದಾರೆ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಬಿ.ಆರ್.ಶೃತಿ ಅವರನ್ನು ಸನ್ಮಾನಿಸುತ್ತಿರುವುದು ಎಲ್ಲರಿಗೂ ಸಂತೋಷ ತಂದಿದೆ ಎಂದರು.ಜಿಲ್ಲಾಧ್ಯಕ್ಷ ಟಿ.ಎನ್.ಎ.ಮೊದಲಿಯಾರ್ ಮಾತನಾಡಿ, ಪ್ರತಿ ವರ್ಷ ಪತ್ರಿಕಾ ದಿನಾಚರಣೆ ಆಚಸಲಾಗುತ್ತಿದೆ, ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ, ಪತ್ರಕರ್ತರ ಮಕ್ಕಳನ್ನು ಸನ್ಮಾನಿಸಲಾಗುತ್ತಿದೆ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕಾರ್ಯ ಪತ್ರಿಕೆಗಳು ನಿರ್ವಹಿಸುತ್ತದೆ ಎಂದು ಹೇಳಿದರು. ಸ್ಥಳೀಯ ಪತ್ರಕರ್ತರಿಗೆ ದೊರಕಬಹುದಾದ ಸವಲತ್ತುಗಳನ್ನು ಕೊಡಿಸಲು ಶಾಸಕ ಜಿ.ಎಚ್.ಶ್ರೀನಿವಾಸ್ ಮುಂದಾಗಬೇಕು ಎಂದು ತಿಳಿಸಿದರು.
ಬೆಂಗಳೂರು ಕರ್ನಾಟಕ ರಾಜ್ಯ ಪಾನೀಯ ನಿಗಮ ತಹಸೀಲ್ದಾರ್, ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತರು ಡಾ.ಶೃತಿ ಬಿ.ಆರ್.ಅವರು ಮಾತನಾಡಿ, ಪ್ರಾಥಮಿಕ ವಿದ್ಯಾಭ್ಯಾಸವನ್ನು ಮುಗಿಸಿದ್ದು ತರೀಕೆರೆಯಲ್ಲಿ, ಪ್ರಾಥಮಿಕ ಹಂತದಲ್ಲಿ ತರೀಕೆರೆ ಗ್ರಂಥಾಲಯ ನನ್ನ ಸಾಹಿತ್ಯ ಕ್ಷೇತ್ರಕ್ಕೆ ಪ್ರೇರಣೆ ನೀಡಿದೆ. ನನ್ನ ಊರಿನಲ್ಲಿ ನನ್ನನ್ನು ಸನ್ಮಾನಿಸಿದ್ದಕ್ಕೆ ಸಂತೋಷವಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳಿಗೆ ಮತ್ತು ಸದಸ್ಯರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಹೇಳಿದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಕೆ.ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು.
ತಹಸೀಲ್ದಾರ್ ವಿ.ಎಸ್.ರಾಜೀವ್, ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್, ಪತ್ರಕರ್ತರ ಮಕ್ಕಳಿಗೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಮತ್ತು ತಾಲೂಕು ಘಟಕದ ಪದಾಧಿಕಾರಿಗಳು, ಸದಸ್ಯರು ಮತ್ತು ಕೆಪಿಸಿಸಿ ಸದಸ್ಯರು ಎಚ್.ವಿಶ್ವನಾಥ್, ತಾಲೂಕು ಕೆಡಿಪಿ ನಾಮನಿರ್ದೇಶನ ಸದಸ್ಯರು ಎಚ್.ಎನ್.ಮಂಜುನಾಥ್ ಲಾಡ್ , ನಿರ್ದೇಶಕ ಜಿ.ಟಿ.ರಮೇಶ್, ಸಂಘಟನಾ ಕಾರ್ಯದರ್ಶಿ ಎಸ್.ಎನ್.ಸಿದ್ರಾಮಪ್ಪ ಹಾಜರಿದ್ದರು.
21ಕೆಟಿಆರ್.ಕೆ.4ಃತರೀಕೆರೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಶಾಖೆಯಿಂದ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ, ಪತ್ರಕರ್ತರ ಮಕ್ಕಳಿಗೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದ ಉದ್ಘಾಟನೆಯನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ನೆರವೇರಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಎಸ್.ಸುರೇಶ್ ಚಂದ್ರ, ಜಿಲ್ಲಾಧ್ಯಕ್ಷ ಟಿ.ಎನ್.ಎ. ಮೊದಲಿಯಾರ್, ತಾಲೂಕು ಘಟಕದ ಅಧ್ಯಕ್ಷ ಕೆ.ನಾಗರಾಜ್ ಮತ್ತಿತರರು ಇದ್ದರು.