ಸಾರಾಂಶ
- ಭಾನುವಾರ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ
ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ.ಭಾರತದಲ್ಲಿ ಪೋಲಿಯೊ ಸಂಪೂರ್ಣ ನಿರ್ಮೂಲನೆ ಮಾಡುವಲ್ಲಿ ರೋಟರಿ ಸಂಸ್ಥೆ ಪಾತ್ರ ಪ್ರಮುಖವಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಭಾನುವಾರ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಇಂದು ದೇಶದಾದ್ಯಂತ ಏಕಕಾಲದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಹಾಕಲಾಗುತ್ತಿದೆ. ಭಾರತದಲ್ಲಿ ಪೋಲಿಯೊ ಸಂಪೂರ್ಣ ನಿರ್ಮೂಲನೆಯಾಗಿದೆ.ಆದರೂ ಮುಂಜಾಗೃತಾ ಕ್ರಮವಾಗಿ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದೆ. ಪ್ರತಿ ಯೊಬ್ಬರು ತಮ್ಮ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಬೇಕು. ಯಾವುದೇ ಸರ್ಕಾರಿ ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ಸಂಘ, ಸಂಸ್ಥೆಗಳ ಸಹಕಾರ ಅಗತ್ಯವಾಗಿದೆ ಎಂದರು.
ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ವಿಜಯಕುಮಾರ್ ಮಾತನಾಡಿ, ತಾಲೂಕಿನಲ್ಲಿ 5 ವರ್ಷದೊಳಗಿನ 4,414 ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. 97 ಲಸಿಕಾ ಕೇಂದ್ರಗಳಲ್ಲಿ 21 ಮೇಲ್ವಿಚಾರಕರು, 388 ಲಸಿಕಾ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಎರಡನೇ ದಿನ ಮನೆ,ಮನೆಗೆ ಭೇಟಿ ನೀಡಿ ಉಳಿದ ಮಕ್ಕಳಿಗೆ ಲಸಿಕೆ ಹಾಕಲಾಗುವುದು ಎಂದರು.ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಎಂ.ಶ್ರೀನಿವಾಸ್, ತಹಸೀಲ್ದಾರ್ ತನುಜಾ ಟಿ.ಸವದತ್ತಿ, ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಸರ್ಕಾರಿ ಆಸ್ಪತ್ರೆಯ ರಕ್ಷಾ ಸಮಿತಿ ಸದಸ್ಯರಾದ ಶ್ರೀಧರ್, ರತನ್ ಗೌಡ, ಧನಲಕ್ಷ್ಮಿ, ಏಲಿಯಾಸ್, ಅಭಿಲಾಷ್, ರೋಟರಿ ಅಧ್ಯಕ್ಷ ಕಿರಣ್ ನೆಲಗದ್ದೆ, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಈ.ಸಿ.ಜೋಯಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಆರ್.ಸದಾಶಿವ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ ಉಪಸ್ಥಿತರಿದ್ದರು.