ಸಾರಾಂಶ
ಚನ್ನಪಟ್ಟಣ: ಕೃಷಿ, ಅರಣ್ಯ ಅಭಿವೃದ್ಧಿಯಲ್ಲಿ ಇಂದಿನ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು ಎಂದು ಕೇರಳ ಅರಣ್ಯ ಸಂಶೋಧನಾ ಸಂಸ್ಥೆ ಉಪನಿರ್ದೇಶಕ ಡಾ.ಯು.ಎಂ.ಚಂದ್ರಶೇಖರ್ ಸಲಹೆ ನೀಡಿದರು.
ಪಟ್ಟಣದ ಹೊರವಲಯದ ಸಂಪೂರ್ಣ ಸಮೂಹ ವಿದ್ಯಾಸಂಸ್ಥೆಗಳು ಆಯೋಜಿಸಿದ್ದ ವಿಶ್ವಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದೆ. ನಾಶವಾಗಿರುವ ಹಸಿರು ಭೂಮಿಯನ್ನು ಮರು ಸ್ಥಾಪಿಸಲು ಕೃಷಿ, ಅರಣ್ಯವನ್ನು ಅಭಿವೃದ್ಧಿಪಡಿಸಲು ಒತ್ತು ಕೊಡಲು ಮುಂದಾಗಬೇಕು ಎಂದು ಹೇಳಿದರು.ತ್ಯಾಜ್ಯ ನಿರ್ವಹಣೆ, ಪ್ಲಾಸ್ಟಿಕ್ ನಿರ್ಮೂಲನೆ ಮಾಡುವುದು ಎಲ್ಲರ ಕರ್ತವ್ಯ ಹಾಗೂ ಜವಾಬ್ದಾರಿ. ಇದು ಭೂಮಿ, ನಮ್ಮ ಭವಿಷ್ಯ ಎಂಬ ಘೋಷವಾಕ್ಯದೊಂದಿಗೆ ಸರ್ವರೂ ತಮ್ಮ ಆದ್ಯಕರ್ತವ್ಯವನ್ನು ನಿರ್ವಹಿಸಬೇಕು ಎಂದು ಕರೆ ನೀಡಿದರು.
ಪರಿಸರ ಅಭಿವೃದ್ಧಿ ಸಂಸ್ಥೆ ಕಾರ್ಯದರ್ಶಿ ಅರುಣಾಕುಮಾರಿ ಮಾತನಾಡಿ, ಪರಿಸರ ಕಾಪಾಡಿಕೊಳ್ಳುವುದು ನಮ್ಮ ಮೂಲ ಕರ್ತವ್ಯವಾಗಿದೆ. ಅರಣ್ಯ ಸಂರಕ್ಷಣೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕಾಗಿದೆ. ವಿದ್ಯಾರ್ಥಿಗಳಿಗೆ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮತ್ತು ಅದರ ಮಹತ್ವವನ್ನು ಎಲ್ಲರು ತಿಳಿದುಕೊಳ್ಳಬೇಕಾದ ಅವಶ್ಯಕತೆ ಬಹಳ ಇದೆ ಎಂದು ಹೇಳಿದರು.ಸಂಸ್ಥೆ ಉಪಾಧ್ಯಕ್ಷ ಡಾ.ಸಂಪೂರ್ಣ ನಾಯ್ಡು ಮಾತನಾಡಿ, ಪಂಚಭೂತಗಳಲ್ಲಿ ಮುಖ್ಯವಾಗಿ ಗಾಳಿ, ನೀರು, ಮಣ್ಣು ಇವುಗಳ ನೈರ್ಮಲ್ಯವನ್ನು ತಡೆಯುವಲ್ಲಿ ಎಲ್ಲರು ಒಗ್ಗಟ್ಟಾಗಿ ಶ್ರಮಿಸಬೇಕು. ಮಣ್ಣಿನ ಸಂರಕ್ಷಣೆ ಹಾಗೂ ಆರೋಗ್ಯ ಕಾಪಾಡಿ ಮುಂದಿನ ಪೀಳಿಗೆಗೆ ಒಳ್ಳೆಯ ಪರಿಸರ ಬಿಟ್ಟು ಹೋಗುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಪೂರ್ಣ ಕೃಷಿ ಕಾಲೇಜಿನ ಡೀನ್ ಡಾ.ಎಸ್.ಎನ್.ವಾಸುದೇವನ್, ಪ್ರಾಂಶುಪಾಲ ಡಾ.ವಿನಯ್ ಬಿ. ರಾಘವೇಂದ್ರ, ಇಂಜಿನಿಯರಿಂಗ್ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಟಿ.ಪಿ. ಭರತೇಶ, ಮಹಾವಿದ್ಯಾಲಯಗಳ ಎಲ್ಲಾ ಬೋಧಕ, ಬೋಧಕೇತರ ಸಿಂಬ್ಬದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪೋಟೊ8ಸಿಪಿಟಿ6 : ಚನ್ನಪಟ್ಟಣದ ಸಂಪೂರ್ಣ ಸಮೂಹ ವಿದ್ಯಾಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ವಿಶ್ವಪರಿಸರ ದಿನಾಚರಣೆಯನ್ನು ಕೇರಳ ಅರಣ್ಯ ಸಂಶೋಧನಾ ಸಂಸ್ಥೆ ಉಪನಿರ್ದೇಶಕ ಡಾ.ಯು.ಎಂ.ಚಂದ್ರಶೇಖರ ಉದ್ಘಾಟಿಸಿದರು.