ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ವದ್ದು: ನ್ಯಾ. ಪುಷ್ಪಾಂಜಲಿ

| Published : Jan 26 2024, 01:46 AM IST

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ವದ್ದು: ನ್ಯಾ. ಪುಷ್ಪಾಂಜಲಿ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಚುನಾವಣಾ ಆಯೋಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ನಗರದ ಕುವೆಂಪು ಕಲಾ ಮಂದಿರ ದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ. ಪುಷ್ಪಾಂಜಲಿ ಭಾರತ ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ತರವಾದದು ಎಂದರು.

- ಸರ್ಕಾರ ಪ್ರಜೆಗಳ ಆಶೋತ್ತರಗಳಂತೆಯೇ ನಡೆಯಬೇಕೆಂಬುದು ಸಂವಿಧಾನದ ನಿಯಮ । ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಭಾರತ ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ತರವಾದದು ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ. ಪುಷ್ಪಾಂಜಲಿ ಹೇಳಿದರು. ಕೇಂದ್ರ ಚುನಾವಣಾ ಆಯೋಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ನಗರದ ಕುವೆಂಪು ಕಲಾ ಮಂದಿರ ದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಮತದಾನ ಪ್ರತಿಯೊಬ್ಬರ ಪ್ರಮುಖ ಹಕ್ಕು ಪ್ರಜೆಗಳಿಂದ ಆಯ್ಕೆಯಾದ ಸರ್ಕಾರ ಪ್ರಜೆಗಳ ಆಶೋತ್ತರಗಳಂತೆಯೇ ನಡೆಯ ಬೇಕೆಂಬುದು ಸಂವಿಧಾನದ ನಿಯಮ. ತಮ್ಮ ಒಳಿತು ಬಯಸುವ ಜನ ನಾಯಕನನ್ನು ಆಯ್ಕೆ ಮಾಡಲು ಮತದಾನ ಪ್ರಕ್ರಿಯೆ ನಡೆಯುತ್ತದೆ. ಮತದಾನದ ಪ್ರಾಮುಖ್ಯತೆ ಮತ್ತು ಪ್ರಜೆಗಳ ಮೇಲಿರುವ ಜವಾಬ್ದಾರಿ ಕುರಿತು ಜಾಗೃತಿ ಮೂಡಿಸುವುದಕ್ಕಾಗಿಯೇ ಪ್ರತಿ ವರ್ಷ ಜ. 25 ರಂದು ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತದೆ ಎಂದರು. ಮತದಾರರ ದಿನವನ್ನು 2011 ರಲ್ಲಿ ಮೊದಲ ಬಾರಿಗೆ ಆಚರಿಸಲಾಯಿತು, ಅಂದಿನ ರಾಷ್ಟ್ರಪತಿ ಪ್ರತಿಭಾದೇವಿ ಪಾಟೀಲ್ ಅವರು ಭಾರತದ ಚುನಾವಣಾ ಆಯೋಗದ 61 ನೇ ಸಂಸ್ಥಾಪನಾ ದಿನದಂದು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿದರು ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, 18 ವರ್ಷ ಪೂರೈಸಿದ ಪ್ರತಿ ಯೊಬ್ಬರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಅವಕಾಶ ಇದೆ. ಯಾರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸಿಲ್ಲ ಅವರು ತಾಲೂಕು ಕಚೇರಿ, ತಮ್ಮ ವ್ಯಾಪ್ತಿಯ ಮತಗಟ್ಟೆಯ ಬಿಎಲ್‌ಒಗಳನ್ನು ಸಂಪರ್ಕಿಸಿ ಸೇರಿಸಿ ಕೊಳ್ಳಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಮಾತನಾಡಿ, ಯುವ ಮತದಾರರನ್ನು ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಾಗೂ ಮತದಾನದ ಪ್ರಮಾಣ ಹೆಚ್ಚಿಸುವ ದೃಷ್ಟಿಯಿಂದ ರಾಷ್ಟ್ರೀಯ ಮತದಾರರ ದಿನದ ಮೂಲಕ ಮತದಾನದ ಮಹತ್ವ ಕುರಿತು ಅರಿವು ಮೂಡಿಸುವುದು ಇದರ ಉದ್ದೇಶವಾಗಿದೆ ಎಂದರು.ಭಾರತಕ್ಕೆ ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಬೇರೆ ರಾಷ್ಟ್ರಗಳಿಗೂ ಕೂಡ ಸ್ವಾತಂತ್ರ್ಯ ಬಂದಿತ್ತು. ಆದರೆ ಆರ್ಥಿಕ, ರಾಜಕೀಯ, ಆಡಳಿತ ಪರಿಸ್ಥಿತಿ ಅವಲೋಕಿಸಿದಾಗ ಭಾರತಕ್ಕಿಂತ ತುಂಬಾ ಹಿಂದುಳಿದಿರುವ ಕೆಲವು ರಾಷ್ಟ್ರಗಳಿವೆ. ಜಿಡಿಪಿಯಲ್ಲಿ ಇಡೀ ವಿಶ್ವದಲ್ಲಿ 3ನೇ ಸ್ಥಾನ ಹೊಂದಿರುವ ರಾಷ್ಟ್ರ ನಮ್ಮದು ಎಂದ ಅವರು, ಶಾಂತಿ, ಸಮೃದ್ಧಿ, ಸುವ್ಯವಸ್ಥೆ ನಮ್ಮ ದೇಶದಲ್ಲಿ ಮನೆ ಮಾಡಿದೆ ಇದಕ್ಕೆಲ್ಲ ಮುಖ್ಯ ಕಾರಣ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಎಂದು ಹೇಳಿದರು. ಮತದಾನ ನಮ್ಮ ಹಕ್ಕಾಗಿದ್ದು, ಪ್ರತಿಯೊಬ್ಬರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಉತ್ತಮರನ್ನು ಆಯ್ಕೆ ಮಾಡುವಂತೆ ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸೋಮ ಮಾತನಾಡಿದರು. ರಾಷ್ಟ್ರೀಯ ಮತದಾರರ ದಿನದ ಕುರಿತು ಏರ್ಪಡಿಸಿದ್ದ ಭಾಷಣ, ಪ್ರಬಂಧ ಸ್ಪರ್ಧೆ ಹಾಗೂ ಕಿರುಚಿತ್ರ, ಭಿತ್ತಿಪತ್ರ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಚಿಕ್ಕಮಗಳೂರು ತಾಲೂಕು ತಹಸೀಲ್ದಾರ್ ಡಾ. ಸುಮಂತ್ ಉಪಸ್ಥಿತರಿದ್ದರು. 25 ಕೆಸಿಕೆಎಂ 5ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಗುರುವಾರ ನಡೆದ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಬಿ. ಪುಷ್ಪಾಂಜಲಿ ಮಾತನಾಡಿದರು.