ಸಾರಾಂಶ
ಮಹಿಳೆಯರು ಸಮಾಜದ ಶಕ್ತಿ, ಕುಟುಂಬದ ಕಣ್ಣು ಆಗಿದ್ದಾರೆ. ಸಮಾಜ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ತಾಪಂ ಇಒ ಮಧು ಹೇಳಿದರು.
ಸೋಂಪುರ ಗ್ರಾಪಂ, ಸಂಜೀವಿನಿ ಸ್ತ್ರೀಶಕ್ತಿ ಒಕ್ಕೂಟದ ಸಹಯೋಗದಲ್ಲಿ ಮಹಿಳಾ ದಿನಾಚರಣೆ
ಕನ್ನಡಪ್ರಭ ವಾರ್ತೆ ದಾಬಸ್ಪೇಟೆಮಹಿಳೆಯರು ಸಮಾಜದ ಶಕ್ತಿ, ಕುಟುಂಬದ ಕಣ್ಣು ಆಗಿದ್ದಾರೆ. ಸಮಾಜ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ತಾಪಂ ಇಒ ಮಧು ಹೇಳಿದರು. ಪಟ್ಟಣದ ಸಿದ್ದಗಂಗಾ ಸಮುದಾಯ ಭವನದಲ್ಲಿ ಸೋಂಪುರ ಗ್ರಾಪಂ ಹಾಗೂ ಸಂಜೀವಿನಿ ಸ್ತ್ರೀಶಕ್ತಿ ಒಕ್ಕೂಟದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗ್ರಾಪಂ ಅಧ್ಯಕ್ಷೆ ಪ್ರೇಮಾ ಮಾತನಾಡಿ, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಸಾಧನೆಯ ಛಾಪು ಮೂಡಿಸಿದ್ದು ಗಡಿ ಕಾಯುವುದರಿಂದ ಹಿಡಿದು ಕುಟುಂಬದ ಪ್ರತಿ ಕೆಲಸವನ್ನೂ ಅತ್ಯಂತ ಸಮರ್ಥವಾಗಿ ಮಹಿಳೆ ನಿರ್ವಹಿಸುತ್ತಿದ್ದಾರೆ ಎಂದರು. ಪಿಡಿಒ ರವಿಶಂಕರ್ ಮಾತನಾಡಿ, ಶಾಲೆ ಕಾಲೇಜುಗಳ ಶಿಕ್ಷಣ, ಫಲಿತಾಂಶಗಳಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿರುವುದಲ್ಲದೆ ಎಲ್ಲ ರಂಗದಲ್ಲೂ ಸಾಧನೆ ಮೆರೆದು ರಾಷ್ಟ್ರ ಮಟ್ಟದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ಮೂಲಕ ಅಬಲೆ ಅಲ್ಲ ಸಬಲೆ ಎಂಬುದನ್ನು ಸಾಬೀತು ಮಾಡಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಸುಮತಿಜಯಪ್ಪ, ಗ್ರಾಪಂ ಉಪಾಧ್ಯಕ್ಷೆ ಲಾವಣ್ಯ ಜಗದೀಶ್, ಸದಸ್ಯರು ಸೇರಿದಂತೆ ಸ್ತ್ರೀಶಕ್ತಿ ಒಕ್ಕೂಟದ ಜಿಲ್ಲಾಧ್ಯಕ್ಷೆ ವೇದಾವತಿ, ತಾಲೂಕು ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಮಂಜುಳ, ಹೋಬಳಿ ಘಟಕದ ಒಕ್ಕೂಟದ ಅಧ್ಯಕ್ಷೆ ಶಶಿಕಲಾ, ಮುಖ್ಯ ಪುಸ್ತಕ ಬರಹಗಾರ್ತಿ ಪದ್ಮ, ಗ್ರಾಪಂ ಕಾರ್ಯದರ್ಶಿ ಹನುಮಂತರಾಜು, ಸಿಬ್ಬಂದಿ ಮಂಜುನಾಥ್ ಮತ್ತಿತರರಿದ್ದರು.