ಪಟ್ಟಣದ ಗೌಡ್ರ ಓಣಿಯ ನಿವಾಸಿ ಅನ್ನಪೂರ್ಣಮ್ಮ ಹಿರೇಮಠ(86) ಮಂಗಳವಾರ ನಿಧನರಾಗಿದ್ದು, ವಾಗ್ದಾನದಂತೆ ಮೃತದೇಹವನ್ನು ಪಟ್ಟಣದ ರಾಜೀವಗಾಂಧಿ ಶಿಕ್ಷಣ ಸಂಸ್ಥೆಯ ಆಯುರ್ವೇದಿಕ ಮಹಾವಿದ್ಯಾಲಯ, ಸ್ನಾತಕೋತ್ತರ ಸಂಶೋಧನಾ ಕೇಂದ್ರದ ಶರೀರ ರಚನಾ ವಿಭಾಗಕ್ಕೆ ಶೈಕ್ಷಣಿಕ ಸಂಶೋಧನೆ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಕುಟುಂಬಸ್ಥರು ಹಸ್ತಾಂತರ ಮಾಡಿದರು.
ಕನ್ನಡಪ್ರಭ ವಾರ್ತೆ ರೋಣ
ಪಟ್ಟಣದ ಗೌಡ್ರ ಓಣಿಯ ನಿವಾಸಿ ಅನ್ನಪೂರ್ಣಮ್ಮ ಹಿರೇಮಠ(86) ಮಂಗಳವಾರ ನಿಧನರಾಗಿದ್ದು, ವಾಗ್ದಾನದಂತೆ ಮೃತದೇಹವನ್ನು ಪಟ್ಟಣದ ರಾಜೀವಗಾಂಧಿ ಶಿಕ್ಷಣ ಸಂಸ್ಥೆಯ ಆಯುರ್ವೇದಿಕ ಮಹಾವಿದ್ಯಾಲಯ, ಸ್ನಾತಕೋತ್ತರ ಸಂಶೋಧನಾ ಕೇಂದ್ರದ ಶರೀರ ರಚನಾ ವಿಭಾಗಕ್ಕೆ ಶೈಕ್ಷಣಿಕ ಸಂಶೋಧನೆ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಕುಟುಂಬಸ್ಥರು ಹಸ್ತಾಂತರ ಮಾಡಿದರು.ದೇಹವನ್ನು ಸಂರಕ್ಷಿಸಿ ಅಂಗ ರಚನಾ ಶಾಸ್ತ್ರದ ಅಧ್ಯಯನಕ್ಕಾಗಿ ಸದುಪಯೋಗ ಪಡೆಸಿಕೊಳ್ಳುತ್ತೇವೆ ಎಂದು ವಿದ್ಯಾರ್ಥಿಗಳು, ಕಾಲೇಜ್ ಸಿಬ್ಬಂದಿ ಪ್ರತಿಜ್ಞೆ ಸ್ವೀಕರಿಸಿದರು.
ಈ ವೇಳೆ ಕಾಲೇಜಿನ ಚೇರಮನ್ ಐ.ಎಸ್. ಪಾಟೀಲ, ಡಾ. ಕೆ.ಬಿ. ಧನ್ನೂರ, ಪ್ರಾಚಾರ್ಯ ಡಾ. ಐ.ಬಿ. ಕೊಟ್ಟೂರಶೆಟ್ಟಿ ಹಾಗೂ ಆಡಳಿತ ಮಂಡಳಿಯವರಿದ್ದರು.ಬಾಲಕಿ ಮೇಲೆ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು
50 ಸಾವಿರ ದಂಡ ವಿಧಿಸಿದ ಗದಗ ಜಿಲ್ಲಾ ಸತ್ರ ನ್ಯಾಯಾಲಯಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆ ಆರೋಪಿಗೆ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.ಬೆಟಗೇರಿ ಮಂಜುನಾಥನಗರದ ನಿವಾಸಿ, ಶಿಗ್ಲಿ ಗ್ರಾಮದ ನಾರಾಯಣಪ್ಪ ತಂದೆ ಸಿದ್ದಪ್ಪ ಪೂಜಾರ ಶಿಕ್ಷೆಗೆ ಗುರಿಯಾದ ಆರೋಪಿ.ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಗದಗ ಮಹಿಳಾ ಪೊಲೀಸ್ ಠಾಣೆಯಲ್ಲಿ 2023 ರಲ್ಲಿ ಪ್ರಕರಣ ದಾಖಲಾಗಿತ್ತು. ಜ.29, 2023ರಂದು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ಪ್ರಕರಣದ ತನಿಖಾಧಿಕಾರಿಯಾಗಿದ್ದ ಗದಗ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಪ್ರದೀಪ್ ಎಸ್. ಬಿಸೆ ತನಿಖೆ ಪೂರ್ಣಗೊಳಿಸಿ, ಮಾ.13, 2023ರಂದು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.ಪ್ರಕರಣವು ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಎಸ್ಸಿ ನಂ.30/2023ರ ಅಡಿಯಲ್ಲಿ ವಿಚಾರಣೆಗೆ ಒಳಪಟ್ಟಿತ್ತು. ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯವು ಅ.12ರಂದು ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿನ್ಯಾಯಾಧೀಶೆ ಗೀತಾ ಸಿಂಧೆ ತೀರ್ಪು ಪ್ರಕಟಿಸಿದರು.ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಅಮರೇಶ ಹಿರೇಮಠ ಆರೋಪಿಗೆ ಶಿಕ್ಷೆಯಾಗುವಂತೆ ಪರಿಣಾಮಕಾರಿ ವಾದ ಮಂಡಿಸಿದ್ದರು.
ಪ್ರಕರಣವನ್ನು ತ್ವರಿತವಾಗಿ ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ ತನಿಖಾಧಿಕಾರಿ ಹಾಗೂ ಗದಗ ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಇಲಾಖೆ ಪ್ರಶಂಸಿಸಿದೆ.