ನೆಲಮೂಲದ ಚಿಂತನೆಗಳು ದ್ರಾವಿಡ ಅಸ್ಮಿತೆಯ ಪ್ರತೀಕ

| Published : Nov 12 2024, 01:30 AM IST

ಸಾರಾಂಶ

ದೊಡ್ಡಬಳ್ಳಾಪುರ: ಕನ್ನಡಿಗರೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಜನರು ದ್ರಾವಿಡ ಅಸ್ಮಿತೆಯ ಪ್ರತೀಕವಾಗಿದ್ದು, ನೆಲಮೂಲದ ಚಿಂತನೆಗಳ ಮೂಲಕ ನಾಡಿನ ಅನನ್ಯತೆಯನ್ನು ಪ್ರತಿಪಾದಿಸುತ್ತಿದ್ದಾರೆ ಎಂದು ನಾವು ದ್ರಾವಿಡ ಕನ್ನಡಿಗರು ಚಳವಳಿಯ ಸಂಸ್ಥಾಪಕ ಅಭಿಗೌಡ ಅಭಿಪ್ರಾಯಪಟ್ಟರು.

ದೊಡ್ಡಬಳ್ಳಾಪುರ: ಕನ್ನಡಿಗರೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಜನರು ದ್ರಾವಿಡ ಅಸ್ಮಿತೆಯ ಪ್ರತೀಕವಾಗಿದ್ದು, ನೆಲಮೂಲದ ಚಿಂತನೆಗಳ ಮೂಲಕ ನಾಡಿನ ಅನನ್ಯತೆಯನ್ನು ಪ್ರತಿಪಾದಿಸುತ್ತಿದ್ದಾರೆ ಎಂದು ನಾವು ದ್ರಾವಿಡ ಕನ್ನಡಿಗರು ಚಳವಳಿಯ ಸಂಸ್ಥಾಪಕ ಅಭಿಗೌಡ ಅಭಿಪ್ರಾಯಪಟ್ಟರು.

ಇಲ್ಲಿನ ಶ್ರೀ ದೇವರಾಜ್‌ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಸೋಮವಾರ ಭಾಗ್ಯವಿಧಾತ ಕ್ರೆಡಿಟ್‌ ಸೌಹಾರ್ದ ಸಹಕಾರಿ ನಿಯಮಿತ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕನ್ನಡ ಉಪನ್ಯಾಸ ಮಾಲಿಕೆಯಲ್ಲಿ "ದ್ರಾವಿಡ ನುಡಿ ಕುಟುಂಬ ಮತ್ತು ಕನ್ನಡ ನುಡಿ " ವಿಚಾರದ ಕುರಿತು ಉಪನ್ಯಾಸ ನೀಡಿದರು.

ಮಾತೃಪ್ರಧಾನ ವ್ಯವಸ್ಥೆಯನ್ನು ಪ್ರತಿಪಾದಿಸುವ ದ್ರಾವಿಡ ಪರಂಪರೆಯೇ ಭಾರತದ ಸಾಂಸ್ಕೃತಿಕ ಇತಿಹಾಸದ ಅಡಿಪಾಯವಾಗಿದೆ. ಇಂದು ಒಂದು ದೇಶ ಒಂದು ಭಾಷೆ, ಒಂದು ಸಂಸ್ಕೃತಿ, ಒಂದು ಚಿಂತನೆ ಹೆಸರಿನಲ್ಲಿ ಈ ನಾಡಿನ ವೈವಿಧ್ಯತೆಯನ್ನು ನಾಶ ಮಾಡುವ ಪ್ರಯತ್ನಗಳು ನಡೆಯುತ್ತಿರುವುದು ಅಪಾಯಕಾರಿ. ಬಹುತ್ವವನ್ನು ಪ್ರತಿಪಾದಿಸುವುದೇ ಭಾರತ ಒಕ್ಕೂಟದ ಮಂತ್ರವಾಗಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಭಾಗ್ಯವಿಧಾತ ಕ್ರೆಡಿಟ್‌ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಪ್ರೊ.ಚಂದ್ರಪ್ಪ ಮಾತನಾಡಿ, ಕನ್ನಡ ನಾಡು, ನುಡಿಯ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಜಾಗೃತಗೊಳಿಸುವ ಉದ್ದೇಶದಿಂದ ಕಾಲೇಜು ಹಂತದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು ಕನ್ನಡದ ಆಲೋಚನೆಗಳನ್ನು ರೂಢಿಸಿಕೊಳ್ಳುವುದರೊಂದಿಗೆ ಸಾಹಿತ್ಯ, ಸಾಂಸ್ಕೃತಿಕ ಮೌಲ್ಯಗಳ ಬಗ್ಗೆ ಅವಲೋಕಿಸುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.

ಪ್ರಾಂಶುಪಾಲ ಡಾ.ಆರ್.ನಾಗರಾಜು ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್, ಕನ್ನಡ ವಿಭಾಗ ಮುಖ್ಯಸ್ಥ ಡಾ.ಎಂ.ಚಿಕ್ಕಣ್ಣ ಮಾತನಾಡಿದರು. ಉಪಪ್ರಾಂಶುಪಾಲ ಪ್ರೊ.ದಕ್ಷಿಣಾಮೂರ್ತಿ, ಭಾಗ್ಯವಿಧಾತ ಕ್ರೆಡಿಟ್‌ ಸೌಹಾರ್ದ ಸಹಕಾರಿ ನಿಯಮಿತದ ಉಪಾಧ್ಯಕ್ಷ ದೊಡ್ಡರಂಗಪ್ಪ, ನಿವೃತ್ತ ಉಪನ್ಯಾಸಕ ಮಂಜುನಾಥಯ್ಯ, ವಿಭಾಗಗಳ ಮುಖ್ಯಸ್ಥರಾದ ಪಿ.ಚೈತ್ರ, ಸಿ.ಪಿ.ಪ್ರಕಾಶ್‌, ಡಾ.ತಾವರೆನಾಯ್ಕ್‌, ಉದ್ಯೋಗಾಧಿಕಾರಿ ಬಾಬು ಸಾಬಿ, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ್, ಉಪನ್ಯಾಸರಾದ ಅಭಿಷೇಕ್, ಉಷಾಶ್ರೀ ಮತ್ತಿತರರು ಉಪಸ್ಥಿತರಿದ್ದರು.11ಕೆಡಿಬಿಪಿ1- ದೊಡ್ಡಬಳ್ಳಾಪುರದ ಶ್ರೀ ದೇವರಾಜ್‌ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಭಾಗ್ಯವಿಧಾತ ಕ್ರೆಡಿಟ್‌ ಸೌಹಾರ್ದ ಸಹಕಾರಿ ನಿಯಮಿತ ಸಹಯೋಗದಲ್ಲಿ ಕನ್ನಡ ಉಪನ್ಯಾಸ ಮಾಲೆ ಕಾರ್ಯಕ್ರಮ ನಡೆಯಿತು.