ಹೆಲ್ಮೆಟ್​ ಹಾಕಿದ್ರೆ ಗುಲಾಬಿ, ಇಲ್ಲದಿದ್ರೆ ದಂಡ: ಪೊಲೀಸ ಜಾಗೃತಿ

| Published : Sep 24 2024, 01:59 AM IST

ಹೆಲ್ಮೆಟ್​ ಹಾಕಿದ್ರೆ ಗುಲಾಬಿ, ಇಲ್ಲದಿದ್ರೆ ದಂಡ: ಪೊಲೀಸ ಜಾಗೃತಿ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಹೆಲ್ಮೆಟ್ ಧರಿಸಿದ ಸವಾರರಿಗೆ ಗುಲಾಬಿ ಹೂ ನೀಡಿ ಮುದ್ದೇಬಿಹಾಳ ಪೊಲೀಸರು ಹೆಲ್ಮೆಟ್ ಕಡ್ಡಾಯ ಧರಿಸುವ ಬಗ್ಗೆ ಜಾಗೃತಿ ಮೂಡಿಸಿ ಗಮನ ಸೆಳೆದರು. ಪಟ್ಟಣದ ಬಸವೇಶ್ವರ ವೃತ್ತ ಸೇರಿ ವಿವಿಧೆಡೆ ಕಾರ್ಯಾಚರಣೆ ನಡೆಸಿ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದರು.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ:

ಹೆಲ್ಮೆಟ್ ಧರಿಸಿದ ಸವಾರರಿಗೆ ಗುಲಾಬಿ ಹೂ ನೀಡಿ ಮುದ್ದೇಬಿಹಾಳ ಪೊಲೀಸರು ಹೆಲ್ಮೆಟ್ ಕಡ್ಡಾಯ ಧರಿಸುವ ಬಗ್ಗೆ ಜಾಗೃತಿ ಮೂಡಿಸಿ ಗಮನ ಸೆಳೆದರು. ಪಟ್ಟಣದ ಬಸವೇಶ್ವರ ವೃತ್ತ ಸೇರಿ ವಿವಿಧೆಡೆ ಕಾರ್ಯಾಚರಣೆ ನಡೆಸಿ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದರು.

ಈ ವೇಳೆ ಕ್ರೈಂ ಆರ್.ಐ ಮನ್ನಾಬಾಯಿ, ಎಎಸ್ಐ ಎ.ಬಿ.ಟಕ್ಕಳಕ್ಕಿ, ಅಮರೇಶ ಸಾಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಂಭವಿಸುತ್ತಿರುವ ಬೈಕ್ ಅಪಘಾತಗಳಲ್ಲಿ ಬೈಕ್ ಸವಾರರು ಹೆಚ್ಚಿನ ಸಂಖ್ಯೆಯಲ್ಲಿ ಜೀವಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಇದರಲ್ಲಿ ಬಹುತೇಕರಿಗೆ ತಲೆಗೆ ಪೆಟ್ಟಾಗಿ ಹೆಚ್ಚಿನ ತೊಂದರೆ ಎದುರಿಸುತ್ತಿದ್ದಾರೆ. ಹೆಲ್ಮೆಟ್ ಧರಿಸದೇ ಇರುವುದರಿಂದ ಆಗುವ ಅನಾಹುತದ ಪರಿಣಾಮದ ಬಗ್ಗೆ ಬೈಕ್‌ ಸವಾರರಿಗೆ ತಿಳಿಸಿದರು.

ಆರಂಭದಲ್ಲಿ ಹೆಲ್ಮೆಟ್ ಇಲ್ಲದೆ ಬರುತ್ತಿದ್ದ ಸವಾರರಿಗೆ ಎಚ್ಚರಿಕೆ ನೀಡಿ ಕಳಿಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ, ನಂತರ ಹೆಲ್ಮೆಟ್ ಇಲ್ಲದ ಸವಾರರಿಗೆ ದಂಡದ ಬಿಸಿ ಮುಟ್ಟಿಸಿದರು. ವಿಶೇಷವಾಗಿ ಹೆಲ್ಮೆಟ್ ಹಾಕಿಕೊಂಡು ಬರುವ ಬೈಕ್​ ಸವಾರರಿಗೆ ಗುಲಾಬಿ ಹೂ ನೀಡುವ ಮೂಲಕ ಅಭಿನಂದನೆ ಸಲ್ಲಿಸಿದರು. ಈ ವೇಳೆ ಪೊಲೀಸ್ ಸಿಬ್ಬಂದಿಗಳಾದ ಪಿ.ಎಸ್ ಬಿರಾದಾರ್, ಕೆ.ಐ ದಿಡ್ಡಿಮನಿ ಇದ್ದರು.