ಸಾರಾಂಶ
ಸರ್ಕಾರಿ ಶಾಲೆಗಳಲ್ಲೂ ಸಹ ಖಾಸಗಿ ಶಾಲೆ ಮಾದರಿಯಲ್ಲಿ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ಮನುಷ್ಯನಿಗೆ ಶಿಕ್ಷಣ ಎಷ್ಟು ಮುಖ್ಯವೋ, ಅಷ್ಟೆ ಸಹ ಪಠ್ಯೇತರ ಚಟುವಟಿಕೆಗಳು ಸಹ ಮುಖ್ಯ. ಶಾಸಗಿ ವಿದ್ಯಾಸಂಸ್ಥೆಗಳನ್ನು ಕಟ್ಟುವುದು ಸುಲಭವಲ್ಲ, ಗುಣಾತ್ಮಕ ಶಿಕ್ಷಣ ನೀಡಿದಾಗ ಮಾತ್ರ ಶಿಕ್ಷಣ ಸಂಸ್ಥೆಗಳು ನಿಲ್ಲುತ್ತವೆ.
ಕನ್ನಡಪ್ರಭ ವಾರ್ತೆ ಪಾಂಡವಪುರ
ಗಣಿಗಾರಿಕೆ ಶಬ್ಧಗಳ ನಡುವೆ ಗುಲಾಬಿ ಎಂಬ ವಿದ್ಯಾ ಸಂಸ್ಥೆಯು ಹಳ್ಳಿಗಾಡಿನಲ್ಲಿ ಸುಂದರವಾದ ಶಾಲೆ ನಿರ್ಮಿಸಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಿರುವುದು ಸಂತಸ ತಂದಿದೆ ಎಂದು ರೈತ ನಾಯಕಿ ಸುನಿತಾ ಪುಟ್ಟಣಯ್ಯ ಹೇಳಿದರು.ತಾಲೂಕಿನ ರಾಗಿಮುದ್ದನಹಳ್ಳಿಯ ಗುಲಾಬಿ ವಿದ್ಯಾನಿಕೇತನ ಶಾಲಾ ಆವರಣದಲ್ಲಿ ನಡೆದ ಗುಲಾಬಿ ವಿದ್ಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಸುಸರ್ಜಿತ ಶಾಲಾ ವಾತಾವರಣ ಇರುವುದು ಅಪರೂಪ. ಶಾಸಕ ದರ್ಶನ್ ಸಹ ಮಕ್ಕಳ ವಿದ್ಯಾಭ್ಯಾಸಗಳ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದು, ಉತ್ತಮ ಶಿಕ್ಷಣ ಕೊಡಿಸುವುದೇ ಅವರ ಮುಖ್ಯ ಉದ್ದೇಶವಾಗಿದೆ ಎಂದರು.
ಸರ್ಕಾರಿ ಶಾಲೆಗಳಲ್ಲೂ ಸಹ ಖಾಸಗಿ ಶಾಲೆ ಮಾದರಿಯಲ್ಲಿ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಹೆಜ್ಜೆ ಹಾಕುತ್ತಿದ್ದಾರೆ ಎಂದರು.ಶಾಲಾ ವ್ಯವಸ್ಥಾಪಕ ಫಾದರ್ ಶೀಜು ಮಾತನಾಡಿ, ಮನುಷ್ಯನಿಗೆ ಶಿಕ್ಷಣ ಎಷ್ಟು ಮುಖ್ಯವೋ, ಅಷ್ಟೆ ಸಹ ಪಠ್ಯೇತರ ಚಟುವಟಿಕೆಗಳು ಸಹ ಮುಖ್ಯ. ಶಾಸಗಿ ವಿದ್ಯಾಸಂಸ್ಥೆಗಳನ್ನು ಕಟ್ಟುವುದು ಸುಲಭವಲ್ಲ, ಗುಣಾತ್ಮಕ ಶಿಕ್ಷಣ ನೀಡಿದಾಗ ಮಾತ್ರ ಶಿಕ್ಷಣ ಸಂಸ್ಥೆಗಳು ನಿಲ್ಲುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಡಾ. ಸೆಬೆಸ್ಟಿನ್ ಎದಾಯತ್ರಥ್, ಶಿಕ್ಷಣಾಧಿಕಾರಿ ರವಿಕುಮಾರ್, ಫಾದರ್ ಸೋಜನ್, ವೃತ್ತ ನಿರೀಕ್ಷಕ ವಿವೇಕಾನಂದ, ಫಾದರ್ ಥಾಮಸ್ ಥೆನಾಟಿಲ್, ಶಾಲಾ ಶಿಕ್ಷಕರು, ಶಿಕ್ಷಕಿಯರು ಇದ್ದರು.ಇದೇ ವೇಳೆ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ರಾಜ್ಯ ಮಟ್ಟದ 400 ಮೀಟಿರ್ ಓಟದ ಸ್ಪರ್ಧೆಯಲ್ಲಿ ಸ್ಪರ್ಧಿಸಿದ್ದ ಎಂ.ಆರ್ ಚಲನ ಹಾಗೂ ಚಿನ್ಮಯಿ ವಿದ್ಯಾರ್ಥಿನಿಯರನ್ನು ಅಭಿನಂದಿಸಲಾಯಿತು.