ಸಾರಾಂಶ
ಗೋಪಾಲಪುರ ಜಂಕ್ಷನ್‌ನಲ್ಲಿರುವ ನಿರ್ಮಿಸಿರುವ ಸಾರ್ವಜನಿಕ ಬಸ್ಸು ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಾಯಿತು.
ಕನ್ನಡಪ್ರಭ ವಾರ್ತೆ ಶನಿವಾರಸಂತೆ
ಶನಿವಾರಸಂತೆ ರೋಟರಿ ಕ್ಲಬ್ ವತಿಯಿಂದ ಸಮೀಪದ ಗೋಪಾಲಪುರ ಜಂಕ್ಷನ್‍ನಲ್ಲಿ ನಿರ್ಮಿಸಿರುವ ಸಾರ್ವಜನಿಕ ಬಸ್ಸು ನಿಲ್ದಾಣವನ್ನು ಬುಧವಾರ ಲೋಕಾರ್ಪಣೆಗೊಳಿಸಲಾಯಿತು.ರೋಟರಿ ಕ್ಲಬ್ ಜಿಲ್ಲಾ ರಾಜ್ಯಪಾಲ ಪಿ.ಕೆ.ರಾಮಕೃಷ್ಣ ಅವರು ಶನಿವಾರಸಂತೆ ರೋಟರಿ ಕ್ಲಬ್‍ಗೆ ಭೇಟಿ ನೀಡಿದ ಸಂದರ್ಭದಲ್ಲಿ ಶನಿವಾರಸಂತೆ ರೋಟರಿ ಕ್ಲಬ್ ವತಿಯಿಂದ ನಿರ್ಮಿಸಿದ್ದ ಸಾರ್ವಜನಿಕ ಬಸ್ಸು ನಿಲ್ದಾಣವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು-ರೋಟರಿ ಸಂಸ್ಥೆಯು ಹಲವು ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆ ಮಾಡುತ್ತಿರುವ ಸಾಮಾಜಿಕ ಕಳಕಳಿಯನ್ನು ಹೊಂದಿರುವ ಸಾಮಾಜಿಕ ಸೇವಾ ಸಂಸ್ಥೆಯಾಗಿದೆ. ಈ ನಿಟ್ಟಿನಲ್ಲಿ ರೋಟರಿ ಸಂಸ್ಥೆಯ ಸದಸ್ಯರು ಸಮಾಜ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವವನ್ನು ಸಂಪಾದಿಸುತ್ತಿದ್ದಾರೆ ಎಂದು ಹೇಳಿದ ಅವರು ರೋಟರಿ ಸಂಸ್ಥೆಯ ಯೋಜನೆಗಳಲ್ಲಿ ಸಾರ್ವಜನಿಕರಿಗೆ ಉಪಯೋಗವಾಗುವ ಬಸ್ಸು ನಿಲ್ದಾಣ ನಿರ್ಮಾಣವು ಒಂದಾಗಿದ್ದು ಈ ದಿಸೆಯಲ್ಲಿ ಶನಿವಾರಸಂತೆ ರೋಟರಿ ಸಂಸ್ಥೆಯು ಬಸ್ಸು ನಿಲ್ದಾಣ ನಿರ್ಮಿಸಿಕೊಟ್ಟಿರುವುದು ಶ್ಲಾಘನಿಯ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಈ ಸಂದರ್ಭ ರೋಟರಿ ಕ್ಲಬ್ ಜಿಲ್ಲಾ ಸಹಾಯಕ ರಾಜ್ಯಪಾಲ ಉಲ್ಲಾಸ್ ಕೃಷ್ಣ, ವಲಯ ಸೇನಾನಿ ಎ.ಎಸ್.ರಾಮಣ್ಣ, ಶನಿವಾರಸಂತೆ ರೋಟರಿ ಕ್ಲಬ್ ಅಧ್ಯಕ್ಷ ಎಚ್.ಎಸ್.ಯಶ್ವಂತ್, ಕಾರ್ಯದರ್ಶಿ ಎಚ್.ಪಿ.ಚಂದನ್, ರೋಟರಿ ಸದಸ್ಯರಾದ ಎಚ್.ಎಸ್.ವಸಂತ್‍ಕುಮಾರ್, ಶ್ವೇತ ವಸಂತ್, ಕೆ.ಪಿ.ಜಯಕುಮಾರ್, ನಿಡ್ತ ಗ್ರಾ.ಪಂ.ಅಧ್ಯಕ್ಷ ಅಶೋಕ್ ಸೇರಿದಂತೆ ರೋಟರಿ ಸಂಸ್ಥೆಯ ಸದಸ್ಯರು ಹಾಜರಿದ್ದರು.;Resize=(128,128))