ಸಾರಾಂಶ
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ತಾಲೂಕಿನ ಬಾಬುರಾಯನಕೊಪ್ಪಲು ಗ್ರಾಮದಲ್ಲಿ ರೋಟರಿ ಕ್ಲಬ್‌ನಿಂದ 30ಕ್ಕೂ ಹೆಚ್ಚು ಗರ್ಭಿಣಿಯರಿಗೆ ಪೌಷ್ಟಿಕಾಂಶ ಕಿಟ್ ವಿತರಣೆ ಮಾಡಿದರು.ನಂತರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯೆ ಡಾ.ರಜನಿ ಹೆಗಡೆ ಮಾತನಾಡಿ, ಗರ್ಭಿಣಿಯರು ಉತ್ತಮ ಪೌಷ್ಟಿಕಾಂಶದಿಂದ ಕೂಡಿರುವ ಆಹಾರ ಸೇವಿಸಬೇಕು. ದಿನನಿತ್ಯ ವ್ಯಾಯಾಮ ಮಾಡುವ ಮೂಲಕ ಆರೋಗ್ಯವನ್ನು ಸುಧಾರಣೆಯಲ್ಲಿಟ್ಟುಕೊಳ್ಳುವಂತೆ ಸಲಹೆ ನೀಡಿದರು.
ಇದಕ್ಕೂ ಮುನ್ನ ಪುರಸಭಾ ಮಾಜಿ ಸದಸ್ಯೆ ಕಾವೇರಮ್ಮ ಕಾರ್ಯಕ್ರಮ ಉದ್ಘಾಟಿಸಿದರು. ಕಿರಂಗೂರು ಗ್ರಾಪಂ ಅಧ್ಯಕ್ಷೆ ರೂಪ, ಸದಸ್ಯ ಶ್ರೀನಿವಾಸ್, ರೋಟರಿ ಸಂಸ್ಥೆ ನಿರ್ಗಮಿತ ಅಧ್ಯಕ್ಷ ಮಂಜುರಾಮ್ ಪುಟ್ಟೇಗೌಡ, ಪಿಡಿಒ ಪ್ರಶಾಂತ್ ಬಾಬು, ರೋಟರಿ ತಾಲೂಕು ಅಧ್ಯಕ್ಷ ಡಾ.ರಾಘವೇಂದ್ರ, ಗೌರವ ಕಾರ್ಯದರ್ಶಿ ಎನ್.ನಾಗೇಂದ್ರ, ಸಹ ಕಾರ್ಯದರ್ಶಿ ರಾಜೇಶ್, ನಿರ್ದೇಶಕ ಶ್ರೀಧರ್, ಅಂಗನವಾಡಿ ಕಾರ್ಯಕರ್ತರಾದ ಆಶಾ, ಧನಲಕ್ಷ್ಮಿ, ನಂದಿನಿ, ಛಾಯಾ, ಕಿರಂಗೂರು ಗ್ರಾಪಂ ಸಿಬ್ಬಂದಿ ಸೇರಿದಂತೆ ಇತರರು ಇದ್ದರು.ರಸಗೊಬ್ಬರ ವಿತರಿಸಲು ಯೋಗ್ಯತೆ ಇಲ್ಲದ ಸರ್ಕಾರ: ಸಚ್ಚಿದಾನಂದ
ಕನ್ನಡಪ್ರಭ ವಾರ್ತೆ ಮಂಡ್ಯರಾಜ್ಯದಲ್ಲಿ ಕೃಷಿ ಚಟುವಟಿಕೆ ಪ್ರಾರಂಭವಾಗಿ ಹಲವು ದಿನಗಳೇ ಕಳೆದಿವೆ. ಆದರೂ ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ವಿತರಿಸಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಬದಲಿಗೆ ಕೇಂದ್ರ ಸರ್ಕಾರದ ವಿರುದ್ಧ ಸುಖಾಸುಮ್ಮನೆ ಆರೋಪ ಮಾಡಿಕೊಂಡು ಕಾಲ ಕಳೆಯುತ್ತಿದೆ ಎಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಎಸ್.ಸಚ್ಚಿದಾನಂದ ಟೀಕಿಸಿದ್ದಾರೆ.
ಅಧಿಕಾರಕ್ಕೆ ಬಂದಾಗಿನಿಂದಲೂ ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರ, ಇದೀಗ ಮತ್ತೊಮ್ಮೆ ರೈತರನ್ನು ಶೋಷಣೆ ಮಾಡುವ ಕೆಲಸಕ್ಕೆ ಮುಂದಾಗಿದೆ. ರೈತರ ಮಕ್ಕಳಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹ ಧನವನ್ನು ಸ್ಥಗಿತಗೊಳಿಸಿದರು. ಕೃಷಿ ಸಮ್ಮಾನ್ ಯೋಜನೆ ನಿಲ್ಲಿಸಿದರು. ಕೃಷಿ ಪಂಪ್‌ಸೆಟ್‌ಗೆ ಕಡಿಮೆ ವೆಚ್ಚದಲ್ಲಿ ವಿದ್ಯುತ್ ಸಂಪರ್ಕ ಪಡೆದುಕೊಳ್ಳುತ್ತಿದ್ದುದನ್ನು ಲಕ್ಷಾಂತ ರು. ರೈತರೇ ಕೊಡುವಂತೆ ಮಾಡಿರುವುದೇ ರಾಜ್ಯಸರ್ಕಾರದ ದೊಡ್ಡ ಸಾಧನೆ ಎಂದು ವ್ಯಂಗ್ಯವಾಡಿದ್ದಾರೆ.ಕೇಂದ್ರ ಸರ್ಕಾರದಿಂದ ಪೂರೈಕೆ ಮಾಡಿದ್ದ ರಸಗೊಬ್ಬರವನ್ನು ರಾಜ್ಯ ಸರ್ಕಾರ ಕಾಳಸಂತೆಯಲ್ಲಿ ಮಾರಾಟ ಮಾಡಿಕೊಂಡಿದೆ. ಈ ಮೂಲಕ ರೈತರಿಗೆ ಅನ್ಯಾಯ ಮಾಡಿದ್ದಾರೆ. ಈ ವರ್ಷ ಕೆಆರ್‌ಎಸ್ ಜಲಾಶಯ ಭರ್ತಿಯಾಗಿದ್ದು, ರೈತರು ನೆಮ್ಮದಿಯಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಆದರೀಗ ರಸಗೊಬ್ಬರ ಪೂರೈಕೆ ಮಾಡಲಾಗದ ಪರಿಣಾಮ ಅನ್ನದಾತರು ಆತಂಕದಲ್ಲಿದ್ದಾರೆ. ಇಷ್ಟಾದರೂ ಸಾಧನಾ ಸಮಾವೇಶ ಮಾಡಿಕೊಳ್ಳುತ್ತಿರುವುದು ಕಾಂಗ್ರೆಸ್ ಸರ್ಕಾರದ ದುರಂತ. ಮಾತ್ರವಲ್ಲದೆ ಮುಂದಿನ ದಿನದಲ್ಲಿ ಇದಕ್ಕೆ ತಕ್ಕ ಪಾಠ ಕಲಿಯಬೇಕಾಗುತ್ತದೆ. ಕೂಡಲೇ ರೈತರಿಗೆ ರಸಗೊಬ್ಬರ ಪೂರೈಕೆ ಮಾಡದಿದ್ದರೆ ಬಿಜೆಪಿಯಿಂದ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.