ಸಾರಾಂಶ
ಮಂಗಳೂರು ಕ್ಲಬ್ ಸಭಾಂಗಣದಲ್ಲಿ ರೋಟರಿ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು.
ಕನ್ನಡಪ್ರಭ ವಾರ್ತೆ ಮಂಗಳೂರು
ಅಂತಾರಾಷ್ಟ್ರೀಯ ರೋಟರಿ ಸಂಸ್ಥೆಯ ಸದಸ್ಯರು ಆರೋಗ್ಯ, ಶಿಕ್ಷಣ, ಸಮಾಜ ಸೇವೆ, ಮೂಲಭೂತ ಸೌಕರ್‍ಯಗಳನ್ನು ಒದಗಿಸಿ ಸ್ವಹಿತ ಮೀರಿದ ಸೇವೆಯನ್ನು ನೀಡಿ ಸಂಸ್ಥೆಗೆ ಗೌರವ ಸಂಪಾದಿಸಬೇಕು ಎಂದು ಮೈಸೂರಿನ ವಾಣಿಜ್ಯೋದ್ಯಮಿ ಹಾಗೂ ರೋಟರಿ ಜಿಲ್ಲಾ ೩೧೮೧ ರ ನಿಯೋಜಿತ ಗವರ್ನರ್ ಯಶಸ್ವಿ ಸೋಮಶೇಖರ್ ಸಲಹೆ ನೀಡಿದ್ದಾರೆ.ಅವರು ನಗರದ ಮಂಗಳೂರು ಕ್ಲಬ್ ಸಭಾಂಗಣದಲ್ಲಿ ರೋಟರಿ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮಾತನಾಡಿದರು.
ವಿಶ್ವದಲ್ಲಿ ಜೀವಮಾರಕವಾದ ಪೋಲಿಯೋ ರೋಗವನ್ನು ನಿರ್ಮೂಲನೆಗೊಳಿಸುವಲ್ಲಿ ರೋಟರಿ ಸಂಸ್ಥೆಯ ಪಾತ್ರ ಮಹತ್ತರ ಎಂದು ಹೇಳಿ ನೂತನ ತಂಡಕ್ಕೆ ಶುಭ ಕೋರಿದರು.ನೂತನ ಅಧ್ಯಕ್ಷೆ ಸಜ್ನ ಭಾಸ್ಕರ್ ಮಾತನಾಡಿ, ನನ್ನ ಅಧಿಕಾರವಧಿಯಲ್ಲಿ ಶಿಕ್ಷಣ, ಆರೋಗ್ಯ, ಸಮಾಜದ ಮೂಲಭೂತ ಸೌಕರ್‍ಯಗಳಿಗೆ ಆದ್ಯತೆ ನೀಡುವ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದರು.ರೋಟರಿ ಜಿಲ್ಲಾ ವಲಯ ಸಹಾಯಕ ಗವರ್ನರ್ ಡಾ. ರವಿಶಂಕರ್ ರಾವ್ ಅವರು ಡಾ. ರಂಜನ್ ಸಂಪಾದಕತ್ವದ ಗೃಹವಾರ್ತಾ ಪತ್ರಿಕೆ ‘ಬಿಟ್ಸ್ ಆಂಡ್ ಬೈಟ್ಸ್’ನ್ನು ಬಿಡುಗಡೆಗೊಳಿಸಿದರು. ವಲಯ ಅಧಿಕಾರಿ ಪ್ರಶಾಂತ್ ರೈ ಪ್ರಾಸ್ತಾವಿಕ ಮಾತನಾಡಿ, ಜಿಲ್ಲಾ ಮಟ್ಟದಲ್ಲಿ ಪಡೆದ ಗ್ಲೋಬಲ್ ಎಕ್ಸಲೆನ್ಸ್ ಪ್ರಶಸ್ತಿಯನ್ನು ಶ್ಲಾಘಿಸಿ ನೂತನ ತಂಡವನ್ನು ಅಭಿನಂದಿಸಿದರು.ನಿರ್ಗಮನ ಅಧ್ಯಕ್ಷ ಗಣೇಶ್ ಕೊಡ್ಲಮೊಗರು ಸ್ವಾಗತಿಸಿದರು. ನಿರ್ಗಮನ ಕಾರ್ಯದರ್ಶಿ ಸುದೇಶ್ ವಾರ್ಷಿಕ ವರದಿ ಮಂಡಿಸಿದರು. ನೂತನ ಕಾರ್ಯದರ್ಶಿ ಸುಜೀರ್ ಪದ್ಮನಾಭ್ ನಾಯ್ಕ್ ವಂದಿಸಿದರು.
--------------------