ಸಾರಾಂಶ
ಬೆಂಗಳೂರು ಮ್ಯಾನೇಜ್‌ಮೆಂಟ್ ಅಸೊಸಿಯೇಷನ್(ಬಿಎಂಎ) 2024-25ನೇ ಸಾಲಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ರೋಟರಿ ಅಂತಾರಾಷ್ಟ್ರೀಯ ನಿರ್ದೇಶಕ ಕೆ.ಪಿ.ನಾಗೇಶ್ ಆಯ್ಕೆಯಾಗಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಬೆಂಗಳೂರು ಮ್ಯಾನೇಜ್‌ಮೆಂಟ್ ಅಸೊಸಿಯೇಷನ್(ಬಿಎಂಎ) 2024-25ನೇ ಸಾಲಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ರೋಟರಿ ಅಂತಾರಾಷ್ಟ್ರೀಯ ನಿರ್ದೇಶಕ ಕೆ.ಪಿ.ನಾಗೇಶ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಡಾ.ಎಸ್. ನಾಗೇಂದ್ರ, ಉಪಾಧ್ಯಕ್ಷರಾಗಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್‌ಕುಮಾರ್ ಪಾಂಡೆ, ಕೆನರಾ ಬ್ಯಾಂಕ್ ನಿವೃತ್ತ ಪ್ರಧಾನ ವ್ಯವಸ್ಥಾಪಕ ಡಾ.ಎಸ್.ಟಿ. ರಾಮಚಂದ್ರ ಹಾಗೂ ಖಜಾಂಚಿಯಾಗಿ ಬಿಎಂಆರ್‌ಸಿಎಲ್ ಹಣಕಾಸು ನಿರ್ದೇಶಕ ಶಿವಮಥನ್ ನೇಮಕಗೊಂಡಿದ್ದಾರೆ. ನಗರದ ಬಿಎಂಎ ಕಚೇರಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು ಎಂದು ಬಿಎಂಎ ಪ್ರಕಟಣೆ ತಿಳಿಸಿದೆ.