ಸಾರಾಂಶ
ರೋಟರಿ ಕ್ಲಬ್ ಸಹಯೋಗದ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟನೆ
ಕನ್ನಡ ಪ್ರಭ ವಾರ್ತೆ, ಕಡೂರುಸ್ವಾರ್ಥ ರಹಿತ ಸಮಾಜ ನಿರ್ಮಾಣ ಮಾಡಲು ರೋಟರಿ ಅಂತಾರಾಷ್ಟ್ರೀಯ ಸಂಸ್ಥೆ ವಿವಿಧ ಆಯಾಮಗಳಲ್ಲಿ ಶ್ರಮಿಸುತ್ತಿದೆ ಎಂದು ರೋಟರಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಬಿ. ಶಿವಕುಮಾರ್ ತಿಳಿಸಿದರು.ಪಟ್ಟಣದ ರೋಟರಿ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ರೋಟರಿ ಕ್ಲಬ್ ಸಹಯೋಗದ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜನರಲ್ಲಿರುವ ಕಲುಷಿತ ಮನಸ್ಸು ತಿಳಿಗೊಳಿಸಿ ಉತ್ತಮ ಮನಸ್ಸುಗಳನ್ನು ಕಟ್ಟುವ ಕೆಲಸ ಆಗಬೇಕಿದೆ. ನಿಸ್ವಾರ್ಥ ಸೇವೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು ಎಂದರುಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಜೆ ಸಿ ಕ್ಲಬ್ ಇನ್ನರ್ ವ್ಹೀಲ್ ಕ್ಲಬ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಸಹ ನಿಸ್ವಾರ್ಥ ಸೇವೆ ಮಾಡುತ್ತಾ ಸಮಾಜದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಕಡೂರು ರೋಟರಿ ಕ್ಲಬ್ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ಸ್ಥಾಪಿಸಿದ್ದು, ಭಾಷೆ ಬೆಳವಣಿಗೆಗೆ ಪೂರಕ ವಾತಾವರಣ ಸೃಷ್ಟಿಯಾಗಿದೆ ಎಂದು ತಿಳಿಸಿದರು.ದತ್ತಿ ಉಪನ್ಯಾಸ ನೀಡಿದ ಬೀರೂರು ಕೆಎಲ್ ಕೆ ಪದವಿಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕರಾದ ಜಿ. ವಿ. ಭಾಗ್ಯಮ್ಮ ಮಾತನಾಡಿ, ಸಂಸ್ಕಾರಯುತ ಸಮಾಜ ಕಟ್ಟಲು ನಮ್ಮಭಾಷೆ ಅಂತರಾಳದ ಭಾಷೆಯಾಗಬೇಕು. ಜನರ ಸೇವೆ ಜನಾರ್ಧನನ ಸೇವೆ ಎಂಬುದು ಮುಖ್ಯವಾಗಿ ಇರಬೇಕಾಗುತ್ತದೆ. ಆಗ ಮಾತ್ರ ಸೇವೆ ಕಾಣಲು ಸಾಧ್ಯ ಎಂದರು.ಇದೇ ಸಂದರ್ಭದಲ್ಲಿ ಹಿರಿಯ ನಟ ದ್ವಾರಕೀಶ್ ಅವರ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ಕೆ. ಪಿ. ರಾಘವೇಂದ್ರ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಕಸಾಪ ಅಧ್ಯಕ್ಷ ಸಿದ್ದಪ್ಪ ರೋಟರಿ ಕ್ಲಬ್ ಕಾರ್ಯದರ್ಶಿ ಸವಿತಾ ಸತ್ಯನಾರಾಯಣ, ರೋಟರಿ ಸದಸ್ಯರಾದ ಎಚ್. ವಿ. ಗಿರೀಶ್, ಟಿ. ಡಿ ಸತ್ಯನ್, ರಘುರಾಮ್, ತಾಲೂಕು ಕಸಾಪ ಕಾರ್ಯದರ್ಶಿ ಶಾಂತಮೂರ್ತಿ, ಚಂದ್ರಶೇಖರ್ ಉಪಸ್ಥಿತರಿದ್ದರು.
19ಕೆಕೆಡಿಯು3.ಕಡೂರು ಪಟ್ಟಣದ ರೋಟರಿ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ರೋಟರಿ ಕ್ಲಬ್ ಇವರ ಸಹಯೋಗದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಭಾಗ್ಯಮ್ಮನವರನ್ನು ಸನ್ಮಾನಿಸಲಾಯಿತು.