ಸಾರಾಂಶ
ಹಾಕಿ ಕ್ರೀಡೆಯಲ್ಲಿ ಸಾಧನೆ ತೋರಿದ ಕೊಡಗು ವಿದ್ಯಾಲಯದ ವಿದ್ಯಾರ್ಥಿನಿ ಎ.ಜಿ. ಪರ್ಲಿನ್ ಪೊನ್ನಮ್ಮ ಅವರನ್ನು ಸನ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ರೋಟರಿ ಮಡಿಕೇರಿ ವತಿಯಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜ್ ನ ಪ್ರಾಂಶುಪಾಲ ಪಿ.ಆರ್.ವಿಜಯ್ ಹಾಗೂ ಸಂತ ಜೋಸೆಫರ ಶಾಲೆಯ ಶಿಕ್ಷಕಿ ಮಂಡೇಟಿರ ಡೈಜಿ಼ ಸೋಮಯ್ಯ ಅವರಿಗೆ ನೆಷನ್ ಬಿರ್ಲ್ಡ್ಸ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಇದೇ ಸಂದರ್ಭ ಹಾಕಿ ಕ್ರೀಡೆಯಲ್ಲಿ ಸಾಧನೆ ತೋರಿದ ಕೊಡಗು ವಿದ್ಯಾಲಯದ ವಿದ್ಯಾರ್ಥಿನಿ ಎ.ಜಿ.ಪರ್ಲಿನ್ ಪೊನ್ನಮ್ಮ ಅವರನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು. ರೋಟರಿ ಅಧ್ಯಕ್ಷ ಸುದಯ್ ನಾಣಯ್ಯ, ಕಾರ್ಯದರ್ಶಿ ಪ್ರಿನ್ಸ್ ಪೊನ್ನಣ್ಣ ಮತ್ತಿತರ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.--------------------------------
ಗುಂಡು ಎಸೆತದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಸುಂಟಿಕೊಪ್ಪ: ಕೊಡಗರ ಹಳ್ಳಿ ನಾಡು ಪ್ರೌಢಶಾಲೆಯ ವಿದ್ಯಾರ್ಥಿ ಕಾರ್ತಿಕ್ ಎಚ್. ಎ.( ಶಾಟ್ ಪುಟ್) ಭಾರದ ಗುಂಡು ಎಸೆತದಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎಸ್ಬಿ ಶಂಕರ್, ಆಡಳಿತ ಮಂಡಳಿ ಉಪಾಧ್ಯಕ್ಷ ಕುಟ್ಟಪ್ಪ, ಕಾರ್ಯದರ್ಶಿ ಕೆ.ಎಸ್.ಮಂಜುನಾಥ್, ಶಾಲಾ ಮುಖ್ಯ ಶಿಕ್ಷಕಿ ಕೆ. ಇಂದಿರಾ, ಶಿಕ್ಷಕರು, ಶಿಕ್ಷಕಿಯರು ಬಾಲಕ ಸಾಧನೆಯನ್ನು ಅಭಿನಂದಿಸಿ ಪ್ರಶಂಸಿಸಿದ್ದಾರೆ.