ಸಾರಾಂಶ
ಅಂತಾರಾಷ್ಟ್ರೀಯ ರೋಟರಿ ಸಂಸ್ಥೆ ಉತ್ತಮ ನಾಯಕರನ್ನು ಬೆಳೆಸುವ ಉದ್ದೇಶದಿಂದ ಶಾಲಾ ಮಟ್ಟದಲ್ಲಿ ಇಂಟರಾಕ್ಟ್ ಕ್ಲಬ್‌ಗಳನ್ನು ತೆರೆಯುತ್ತಿದೆ ಎಂದು ರತನ್ ತಮ್ಮಯ್ಯ ಹೇಳಿದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಅಂತಾರಾಷ್ಟ್ರೀಯ ರೋಟರಿ ಸಂಸ್ಥೆ ಉತ್ತಮ ನಾಯಕರನ್ನು ಬೆಳೆಸುವ ಉದ್ದೇಶದಿಂದ ಶಾಲಾ ಮಟ್ಟದಲ್ಲಿ ಇಂಟರಾಕ್ಟ್ ಕ್ಲಬ್ ಗಳನ್ನು ತೆರೆಯುತ್ತಿದೆ ಎಂದು ರೋಟರಿ ಜಿಲ್ಲಾ ಕಾರ್ಯದರ್ಶಿ ರತನ್ ತಮ್ಮಯ್ಯ ಹೇಳಿದರು.ಇಲ್ಲಿಗೆ ಸಮೀಪದ ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ನಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆರಂಭಿಸಲಾದ ಇಂಟರಾಕ್ಟ್ ಕ್ಲಬ್ ನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಅವರು ಮಾತನಾಡಿದರು.
ರೋಟರಿ ಮಿಸ್ಟಿ ಹಿಲ್ಸ್ ಸ್ಥಾಪಕ ಅಧ್ಯಕ್ಷ ಬಿ.ಜಿ ಅನಂತಶಯನ ಮಾತನಾಡಿ ಇಂಟರಾಕ್ಟ್ ಕ್ಲಬ್ ಸದಸ್ಯರಾಗುವ ಮೂಲಕ ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುವ, ಗುರುತಿಸಿಕೊಳ್ಳುವ ಅವಕಾಶ ಇದೆ ಎಂದರು. ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ನೂತನ ತಂಡಕ್ಕೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು.ಈ ಸಂದರ್ಭ ಶಾಲಾ ಸ್ಥಾಪಕ ಅಧ್ಯಕ್ಷ ಕುಟ್ಟಂಜೆಟ್ಟೀರ ಮಾದಪ್ಪ, ಶಾಲಾ ಮುಖ್ಯಶಿಕ್ಷಕ ಚೋಕಿರ ತಮ್ಮಯ್ಯ ಮಿಸ್ಟಿ ಹಿಲ್ಸ್ ಕಾರ್ಯದರ್ಶಿ ಬಿ.ಕೆ ಕಾರ್ಯಪ್ಪ , ಪದಾಧಿಕಾರಿಗಳಾದ ಮೋಹನ್ ಪ್ರಭು, ಹೂವಯ್ಯ, ಶಂಕರ್ ಪೂಜಾರಿ, ಕುಲ್ಲೇಟಿರ ಅಜಿತ್ ನಾಣಯ್ಯ, ವಿದ್ಯಾ ಸುರೇಶ್ ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಇಂಟರಾಕ್ಟ್ ಕ್ಲಬ್ ನ ಅಧ್ಯಕ್ಷೆಯಾಗಿ ದುಂಧುಬಿ, ಕಾರ್ಯದರ್ಶಿಯಾಗಿ ದರ್ಶದೇಚಮ್ಮ, ಉಪಾಧ್ಯಕ್ಷರಾಗಿ ಅಲ್ಫಾರಾಜ್, ಖಜಾಂಚಿಯಾಗಿ ನಿಶಾಂತ್ ಅಧಿಕಾರ ಸ್ವೀಕರಿಸಿದರು.