ಸಾರಾಂಶ
ವಿದ್ಯಾರ್ಥಿಗಳಿಗೆ ಬ್ಯಾಡ್ಜ್ ಗಳನ್ನು ನೀಡಿ ಗೌರವಿಸಲಾಯಿತು.
ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಸರಸ್ವತಿಪುರಂ ನಲ್ಲಿರುವ ರೋಟರಿ ವೆಸ್ಟ್ ಸ್ಕೂಲ್ ನಲ್ಲಿ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭ ನೆರವೇರಿತು. ಕಾರ್ಯಕ್ರಮದಲ್ಲಿ ಎಸಿಪಿ ಶಾಂತಮಲ್ಲಪ್ಪ ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಬ್ಯಾಡ್ಜ್ ಗಳನ್ನು ನೀಡಿ ಗೌರವಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಡಾ.ಬಿ. ಚಂದ್ರು, ಖಜಾಂಚಿ ಡಾ.ಎಸ್.ಎ. ಮೋಹನ್ ಕೃಷ್ಣ, ಪಿ. ಗಂಗಾಧರ ಗೌಡ, ಅಧ್ಯಕ್ಷರಾಗಿ ಆಯ್ಕೆಯಾದ ಡಾ. ರಾಘವೇಂದ್ರ ಪ್ರಸಾದ್, ಡಾ.ಸಿ.ಜಿ. ರಾಮಚಂದ್ರ. ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಶಶಿಕಲಾ ಕಾರ್ಯದರ್ಶಿ ಭವಾನಿ ಚಂದ್ರ, ಎಂ.ಸಿ. ಛಾಯಾ ವೆಂಕಟೇಶ್, ನೂತನ್ ಅಜಿತ್, ರೋಟರಿಯ ಪ್ರಾಂಶುಪಾಲೆ ಕೆ.ಎಸ್. ಪೂರ್ಣಿಮಾ, ಎಂ. ಮಂಜುನಾಥ್, ಶಾಲಾ ಶಿಕ್ಷಕರು, ಸಿಬ್ಬಂದಿ ಭಾಗವಹಿಸಿದ್ದರು.