ಸಾರಾಂಶ
ಮೇಕೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಜರ್ಕಿನ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಮಡಿಕೇರಿ ರೋಟರಿ ವುಡ್ಸ್ ಸಂಸ್ಥೆ ವತಿಯಿಂದ ಮೇಕೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಜರ್ಕಿನ್ ಗಳನ್ನು ಕೊಡುಗೆಯಾಗಿ ನೀಡಲಾಯಿತು,ಮಳೆ ಮತ್ತು ಚಳಿ ಯಿಂದ ಮಕ್ಕಳಿಗೆ ರಕ್ಷಣೆಯನ್ನು ನೀಡುವ ಉದ್ದೇಶದಿಂದ ರೋಟರಿ ವುಡ್ಸ್ ವತಿಯಿಂದ ಈ ಯೋಜನೆ ಹಮ್ಮಿಕೊಳ್ಳಲಾಗಿತ್ತು. ಒಟ್ಟು 47 ವಿದ್ಯಾರ್ಥಿಗಳು ಈ ಯೋಜನೆಯ ಉಪಯೋಗ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಮಾತನಾಡಿದ ರೋಟರಿ ವುಡ್ಸ್ ಅಧ್ಯಕ್ಷ ಕಿಗ್ಗಾಲು ಹರೀಶ್ ವಿದ್ಯಾರ್ಥಿಗಳು ಈ ಕೊಡುಗೆಯ ಸದುಪಯೋಗ ಪಡೆದುಕೊಳ್ಳುವಂತೆಯೂ, ಮಕ್ಕಳು ಆರೋಗ್ಯವನ್ನು ಕಾಪಾಡಿಕೊಂಡು ಭವಿಷ್ಯದಲ್ಲಿ ಆರೋಗ್ಯವಂತ ಪ್ರಜೆಗಳಾಗುವಂತೆ ಕರೆ ನೀಡಿದರು.ಜರ್ಕೀನ್ ಗಳನ್ನು ಕೊಡುಗೆಯಾಗಿ ನೀಡಿದ ರೋಟರಿ ವುಡ್ಸ್ ಸಂಸ್ಥೆಯ ನಿರ್ದೇಶಕ ಬಾಲಸುಬ್ರಹ್ಮಣ್ಯ ಮಕ್ಕಳನ್ನು ಉತ್ತಮ ಪ್ರಜೆಗಳಾಗಿ ರೂಪಿಸುವಲ್ಲಿ ಶಿಕ್ಷಣ ಬಹಳ ಮುಖ್ಯ. ಭವಿಷ್ಯದಲ್ಲೂ ಶಾಲೆಗೆ ಕೊಡುಗೆಗಳನ್ನು ನೀಡಲು ತಾನು ಸಿದ್ಧ ಎಂದು ಘೋಷಿಸಿದರು.
ಶಾಲೆ ಪ್ರಭಾರ ಮುಖ್ಯಶಿಕ್ಷಕಿ ಸವಿತ, ರೋಟರಿ ಮಡಿಕೇರಿ ವುಡ್ಸ್ ನಿರ್ದೇಶಕರಾದ ಭಗತ್ ರಾಜ್, ರಂಜಿತ್ ಕಿಗ್ಗಾಲ್, ರವಿ ಪಿ, ಲೋಕೇಶ್, ಕಶ್ಯಪ್, ರಾಜೇಶ್ ಚೌಧರಿ ಪ್ರವೀಣ್, ಶಾಲೆಯ ಶಿಕ್ಷಕ ವೃಂದದವರು, ಶಾಲಾ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಈ ಸಂದರ್ಭ ಹಾಜರಿದ್ದರು.