ತುಮಕೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹಜರ್ ಮಾಡಲು ಕರೆದೊಯ್ಯುವ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿದ ಘಟನೆ ನಗರದ ದಿಬ್ಬೂರು ಬಳಿ ನಡೆದಿದೆ. ರೌಡಿ ಶೀಟರ್ ಮನು ಎಂಬಾತನನ್ನು ಪ್ರಕರಣವೊಂದರ ಮಹಜರ್ ಗಾಗಿ ಕರೆದೊಯ್ಯುವಾಗ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಶರಣಾಗುವಂತೆ ಎರಡು ಬಾರಿ ಸಿಪಿಐ ದಿನೇಶ ಕುಮಾರ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೆ ಪೊಲೀಸರಿಗೆ ಶರಣಾಗದೇ ಪರಾರಿಯಾಗುವ ವೇಳೆ ಸಿಪಿಐ ದಿನೇಶ ಕುಮಾರ್ ರೌಡಿಶೀಟರ್ ಮನು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಗಾಯಾಳು ಪೊಲೀಸ್ ಸಿಬ್ಬಂದಿ ಹಾಗೂ ರೌಡಿಶೀಟರ್ ಮನುಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರೌಡಿಶೀಟರ್ ಮನು ಮೂಲತಃ ಪುಟ್ಟಪರ್ತಿಯಾತ. ತುಮಕೂರಿನಲ್ಲಿ ವಾಸವಾಗಿದ್ದ ಮನು ರೌಡಿಶೀಟರ್ ಗ್ಯಾಂಗ್ ಜೊತೆ ಗುರುತಿಸಿಕೊಂಡಿದ್ದ.
ರೌಡಿಶೀಟರ್ ಕಾಲಿಗೆ ಗುಂಡು
ಆರೋಪಿ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿದ ಘಟನೆ ನಗರದ ದಿಬ್ಬೂರು ಬಳಿ ನಡೆದಿದೆ
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.