ದಾವಣಗೆರೆ: ಶಾಸಕ ಲಿಂಗೈಕ್ಯ ಡಾ.ಶಾಮನೂರು ಶಿವಶಂಕರಪ್ಪ ಆಶಯದಂತೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರು ಹೆಚ್ಚಿಗೆ ವಾಸಿಸುತ್ತಿರುವ ವಿವಿಧ ಭಾಗಗಳ ಮೂಲಸೌಕರ್ಯ ಅಭಿವೃದ್ಧಿಗೆ ₹100.00 ಕೋಟಿ ಅನುದಾನವನ್ನು ಒದಗಿಸಿರುವುದಕ್ಕೆ ಸಿಎಂಗೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.
ತಾಲೂಕಿನ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಣ, ಚನ್ನಗಿರಿ ತಾ. ಕಗ್ಗತ್ತೂರು ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ, ಆನಗೋಡುನಲ್ಲಿ ಹೊಸ ಪೊಲೀಸ್ ಠಾಣೆ ಸ್ಥಾಪನೆ, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ, ಮಾಯಕೊಂಡ, ಜಗಳೂರು ಕ್ಷೇತ್ರದಲ್ಲಿ ಶ್ರಮಿಕ ವಸತಿ ಶಾಲೆ ನಿರ್ಮಾಣ, 2ನೇ ಹಂತದಲ್ಲಿ ಚನ್ನಗಿರಿ ವ್ಯಾಪಿಯಲ್ಲಿ ಶ್ರಮಿಕ ವಸತಿ ಶಾಲೆಗಳ ನಿರ್ಮಾಣ, ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗಾಗಿ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಒಟ್ಟು 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಶೀಥಲಗೃಹ ₹32 ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಘೋಷಣೆ ಮಾಡಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.- - -
* ಅಭಿವೃದ್ಧಿಗೆ ದಾರಿ ತೋರಿದ ಬಜೆಟ್: ಶಾಸಕ ಬಸವಂತಪ್ಪದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2026–27ನೇ ಸಾಲಿನ ಸುಮಾರು ₹4.48 ಲಕ್ಷ ಕೋಟಿ ಮೊತ್ತದ ಬಜೆಟ್‌ನಲ್ಲಿ ಮೂಲಸೌಕರ್ಯ ಅಭಿವೃದ್ಧಿ, ರಸ್ತೆ, ನಗರಾಭಿವೃದ್ಧಿ ಮತ್ತು ಮೆಟ್ರೋ ವಿಸ್ತರಣೆ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಇದರಿಂದ ಉದ್ಯೋಗ ಅವಕಾಶಗಳು ಹೆಚ್ಚುವ ಸಾಧ್ಯತೆ ಇದೆ ಮತ್ತು ರಾಜ್ಯದ ಆರ್ಥಿಕ ಬೆಳವಣಿಗಿಗೆ ಸಹಕಾರಿಯಾಗಬಹುದು ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಬಣ್ಣಿಸಿದ್ದಾರೆ.ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಆನಗೋಡಿನಲ್ಲಿ ಹೊಸ ಪೊಲೀಸ್ ಠಾಣೆ ಸೇರಿದಂತೆ ಕೆರೆಗಳ ಅಭಿವೃದ್ಧಿ, ನೀರಾವರಿ, ರಸ್ತೆ, ಮೂಲಸೌಕರ್ಯ ಕಲ್ಪಿಸಲು ಆದ್ಯತೆ ನೀಡಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ತುಮಕೂರು- ದಾವಣಗೆರೆ ರೈಲ್ವೆ ಮಾರ್ಗಗಳಿಗೆ ಭೂಸ್ವಾಧೀನ ಹಾಗೂ ನಿರ್ಮಾಣ ಕಾಮಗಾರಿಗೆ ಅನುದಾನ ಮೀಸಲಿಡಲಾಗಿದೆ. ಚನ್ನಗಿರಿ ತಾಲ್ಲೂಕಿನ 41 ಕೆರೆಗಳನ್ನು ತುಂಬುವ ಯೋಜನೆ, ಹೊನ್ನನಾಯಕನಹಳ್ಳಿ ಕೆರೆ ಹಾಗೂ ಹಳ್ಳ ಅಭಿವೃದ್ಧಿಗೆ ಅನುಮೋದನೆ ಮಾಡಲಾಗಿದೆ. ಒಟ್ಟಾರೆ, ಈ ಬಜೆಟ್ ಕಲ್ಯಾಣ ಮತ್ತು ಅಭಿವೃದ್ಧಿಯ ನಡುವೆ ಸಮತೋಲನ ಸಾಧಿಸುವ ಪ್ರಯತ್ನವಾಗಿದೆ ಎಂದು ತಿಳಿಸಿದ್ದಾರೆ.
- - --6ಕೆಡಿವಿಜಿ49: ಕೆ.ಎಸ್.ಬಸವಂತಪ್ಪ- - -
-6ಕೆಡಿವಿಜಿ46: ದಿನೇಶ ಕೆ. ಶೆಟ್ಟಿ