ದೇಶ ಸೇವೆಯ ಮಾದರಿ ಸಂಘಟನೆ ಆರ್‌ಎಸ್ಎಸ್: ರೂಪಾಲಿ

| Published : Oct 10 2025, 01:01 AM IST

ಸಾರಾಂಶ

ದೇಶಕ್ಕಾಗಿ ಮಿಡಿಯುವ, ದೇಶ ಭಕ್ತ ಸಂಘಟನೆಯಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ 100 ವರ್ಷಗಳು ಕಳೆದಿದ್ದು, ಸಂಘದ ಪಥ ಸಂಚಲನ ಯಶಸ್ವಿಗೊಳಿಸೋಣ.

ಕನ್ನಡಪ್ರಭ ವಾರ್ತೆ ಕಾರವಾರ

ದೇಶಕ್ಕಾಗಿ ಮಿಡಿಯುವ, ದೇಶ ಭಕ್ತ ಸಂಘಟನೆಯಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ 100 ವರ್ಷಗಳು ಕಳೆದಿದ್ದು, ಸಂಘದ ಪಥ ಸಂಚಲನ ಯಶಸ್ವಿಗೊಳಿಸೋಣ ಹಾಗೂ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮನಿರ್ಭರ ಕಾರ್ಯಕ್ರಮ ಮನೆ ಮನೆಗೆ ತಲುಪಿಸಿ ಮೋದಿ ಅವರ ಕೈ ಬಲಪಡಿಸೋಣ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ 100 ವರ್ಷಗಳು ಸಂದ ಹಿನ್ನೆಲೆ ಹಾಗೂ ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷೆಯ ಆತ್ಮ ನಿರ್ಭರ ಭಾರತ ಮಂಡಲದ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶಸೇವೆ ಮಾಡುವ ಅತಿದೊಡ್ಡ ಸಂಘಟನೆಯಾಗಿದೆ. ಸಂಘಟನೆಯ ಶಿಸ್ತು, ಸೇವೆ, ಕಾರ್ಯಗಳು ಶ್ಲಾಘನೀಯವಾಗಿದೆ. ಅಂತಹ ಸಂಘ ನೂರು ವರ್ಷಗಳನ್ನು ಪೂರೈಸಿ ಮುನ್ನೆಡೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಪ್ರಧಾನಿ ನರೇಂದ್ರ ಮೋದಿ ನಮ್ಮೆಲ್ಲರಿಗೆ ಆದರ್ಶ. ದೇಶ ಸೇವೆಯಲ್ಲಿ ನಿರಂತರವಾಗಿ ತೊಡಗಿಕೊಂಡು ವಿಶ್ವದಲ್ಲಿ ಭಾರತಕ್ಕೆ ಮಹತ್ವದ ಸ್ಥಾನಮಾನವನ್ನು ದೊರಕಿಸಿಕೊಟ್ಟಿದ್ದಾರೆ. ಅವರ ಆಶಯಗಳನ್ನು ಈಡೇರಿಸುವ ಮೂಲಕ ಅವರ ಕೈಯನ್ನು ಇನ್ನಷ್ಟು ಬಲಪಡಿಸಬೇಕು ಎಂದು ಹೇಳಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ನಾಯ್ಕ್ ಮಾತನಾಡಿ, ನರೇಂದ್ರ ಮೋದಿ ಅವರ ಮನ ಕಿ ಬಾತ್ ಕಾರ್ಯಕ್ರಮ ಪ್ರತಿಯೊಂದು ಬೂತ್ ಮಟ್ಟದಲ್ಲಿ ವೀಕ್ಷಣೆ ಮಾಡಲು ತಿಳಿಸಿದರು.

ನಂತರ ಆತ್ಮ ನಿರ್ಭರ್ ಭಾರತದ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಗ್ರಾಮೀಣ ಪ್ರಭಾರಿ ಗಜಾನನ್ ಗುನಗಾ, ಗ್ರಾಮೀಣ ಮಂಡಲ ಅಧ್ಯಕ್ಷ ಸುಭಾಷ್ ಗುನಗಿ, ನಗರ ಮಂಡಲ ಅಧ್ಯಕ್ಷ ನಾಗೇಶ್ ಕುರಡೇಕರ್, ಜಿಲ್ಲಾ ಉಪಾಧ್ಯಕ್ಷ ಸಂಜಯ್ ಸಾಳುಂಕೆ, ರಾಜ್ಯ ಪ್ರಕೋಸ್ಟದ ಸುನೀಲ್ ಸೋನಿ, ಮಾಧ್ಯಮ ಸಹ ಸಂಚಾಲಕ ಕಿಶನ್ ಕಾಂಬಳೆ, ವಿಶೇಷ ಆಹ್ವಾನಿತರಾದ ಮನೋಜ್ ಭಟ್, ಗ್ರಾಮೀಣ ಪ್ರಧಾನ ಕಾರ್ಯದರ್ಶಿ ಉದಯ್ ನಾಯ್ಕ್, ಸೂರಜ್, ನಗರ ಪ್ರಧಾನ ಕಾರ್ಯದರ್ಶಿ ದೇವಿದಾಸ್ ಕಂತ್ರಿಕರ್, ಅಶೋಕ ಗೌಡ ಇದ್ದರು.