ನಗರದ ವಿವಿಧೆಡೆ ಆರ್‌ಎಸ್‌ಎಸ್ ಪಥ ಸಂಚಲನ

| Published : Oct 13 2025, 02:01 AM IST

ನಗರದ ವಿವಿಧೆಡೆ ಆರ್‌ಎಸ್‌ಎಸ್ ಪಥ ಸಂಚಲನ
Share this Article
  • FB
  • TW
  • Linkdin
  • Email

ಸಾರಾಂಶ

ಸಂಘ ಶತಾಬ್ದಿ ಹಾಗೂ ವಿಜಯ ದಶಮಿ ಪ್ರಯುಕ್ತ ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ (ಆರ್‌ಎಸ್‌ಎಸ್‌) ಭಾನುವಾರ ನಗರದ ನೂರಕ್ಕೂ ಹೆಚ್ಚು ಸ್ಥಳಗಳಲ್ಲಿ ಪಥ ಸಂಚಲನ ಏರ್ಪಡಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಸಂಘ ಶತಾಬ್ದಿ ಹಾಗೂ ವಿಜಯ ದಶಮಿ ಪ್ರಯುಕ್ತ ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ (ಆರ್‌ಎಸ್‌ಎಸ್‌) ಭಾನುವಾರ ನಗರದ ನೂರಕ್ಕೂ ಹೆಚ್ಚು ಸ್ಥಳಗಳಲ್ಲಿ ಪಥ ಸಂಚಲನ ಏರ್ಪಡಿಸಲಾಗಿತ್ತು.

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪಥ ಸಂಚಲನದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಸೇರಿದಂತೆ ಆರ್‌ಎಸ್‌ಎಸ್ ಮುಖಂಡರು ಹಾಗೂ ಕಾರ್ಯಕರ್ತರು ಆರ್‌ಎಸ್‌ಎಸ್ ಸಮವಸ್ತ್ರದಲ್ಲಿ ಹೆಜ್ಜೆ ಹಾಕಿದರು. ಪಥ ಸಂಚಲನದ ಮಾರ್ಗದಲ್ಲಿ ನೆರೆದಿದ್ದ ಸಾರ್ವಜನಿಕರು ಸ್ವಯಂಸೇವಕರ ಮೇಲೆ ಹೂಮಳೆ ಸುರಿಸಿದರು.

ಗೋವಿಂದರಾಜನಗರದಲ್ಲಿ ಸಂಸದ ತೇಜಸ್ವಿ ಸೂರ್ಯ, ಮಲ್ಲೇಶ್ವರದಲ್ಲಿ ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಮಹಾಲಕ್ಷ್ಮೀ ಲೇಔಟ್‌ನಲ್ಲಿ ಶಾಸಕ ಕೆ.ಗೋಪಾಲಯ್ಯ ಸೇರಿದಂತೆ ನಗರದ ವಿವಿಧ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಿಜೆಪಿ ಮುಖಂಡರು ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಶಂಕರಪುರ, ಯಲಹಂಕ, ರಾಜಾನಕುಂಟೆ ಸೇರಿದಂತೆ ನಗರದ ಅನೇಕ ಕಡೆಗಳಲ್ಲಿ ಸಮವಸ್ತ್ರದೊಂದಿಗೆ ಲಾಠಿ ಹಿಡಿದು ಪಥ ಸಂಚಲನದಲ್ಲಿ ಸಾವಿರಾರು ಸ್ವಯಂಸೇವಕರು ಭಾಗವಹಿಸಿದ್ದರು.

ಪಥ ಸಂಚಲನದಲ್ಲಿ ಭಾಗವಹಿಸಿದ್ದ ಸ್ವಯಂಸೇವಕರಿಗೆ ಸಂಘದ ಹಿರಿಯರು ದೇಶಭಕ್ತಿ, ಸಮಾಜ ಸೇವೆ, ಕರ್ತವ್ಯದ ಪಾಠ, ಬೋಧನೆ ಮಾಡಿದರು.