ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ಇತಿಹಾಸ ಇರುವಂತಹ ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಿಷೇಧ ಮಾಡಬೇಕೆನ್ನುವ ವಾದ ಸಮಂಜಸವಲ್ಲ. ಈ ರಾಜ್ಯ, ದೇಶ ಉಳಿಯಬೇಕೆಂದರೆ ಆರ್‌ಎಸ್‌ಎಸ್ ಇರಲೇಬೇಕು ಎಂದು ಹಾಸನ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹೇಳಿದರು.ಹಾಸನಾಂಬೆ ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿ ತಾಯಿ ದರ್ಶನ ಪಡೆದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾನು ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರಾಗಿದ್ದ ಸಮಯದಲ್ಲಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ. ಇಂದು ಹಾಸನಾಂಬೆ ದೇವಿ ಹಾಗೂ ಶ್ರೀ ಸಿದ್ದೇಶ್ವರ ದೇವರ ದರ್ಶನ ಮಾಡಿಕೊಂಡಿದ್ದೇನೆ. ಪ್ರತಿ ವರ್ಷ ಭಕ್ತರ ಸಂಖ್ಯೆ ಏರಿಕೆಯಾಗುತ್ತಿದೆ, ಬೇರೆ ರಾಜ್ಯಗಳಿಂದಲೂ ಜನರು ದರ್ಶನಕ್ಕಾಗಿ ಬರುತ್ತಿದ್ದಾರೆ. ಇದು ಪುಣ್ಯ ಸ್ಥಳವಾಗಿದ್ದು ಪ್ರತಿಯೊಬ್ಬರೂ ನೋಡುವಂತ ಕ್ಷೇತ್ರ ಎಂದರು.ಆರ್‌ಎಸ್‌ಎಸ್ ನಿಷೇಧ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆ ಸಂಸ್ಥೆ ದೇಶಪ್ರೇಮ, ಸೇವಾ ಮನೋಭಾವ ಮತ್ತು ಶಿಸ್ತಿನ ಆಧಾರದ ಮೇಲೆ ನಿರ್ಮಿತವಾಗಿದೆ. ಇತಿಹಾಸ ಇರುವಂತಹ ಸಂಘಟನೆಯನ್ನು ನಿಷೇಧಿಸುವುದು ಅರ್ಥಪೂರ್ಣ ಕ್ರಮವಲ್ಲ. ನಾವು ಈ ರಾಜ್ಯದಲ್ಲೇ ಹುಟ್ಟಿ ಬೆಳೆದವರು ರಾಷ್ಟ್ರದ ಹಿತವನ್ನು ಕಾಪಾಡುವ ಕೆಲಸ ಮಾಡುತ್ತಿದ್ದೇವೆ. ಆರ್‌ಎಸ್‌ಎಸ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದು ಸೂಕ್ತವಲ್ಲ ಎಂದು ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿದರು. ಅಂತೆಯೇ, ಅವರು ರಾಜ್ಯದ ಜನತೆಗೆ ಒಳ್ಳೆಯ ಮಳೆ, ಬೆಳೆ ಮತ್ತು ಶಾಂತಿಯ ಜೀವನಕ್ಕಾಗಿ ಹಾಸನಾಂಬೆ ದೇವಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು