ಧರ್ಮವೆಂಬುದು ಜೀವನ ಕ್ರಮವಾಗಿದ್ದು, ಭಾರತೀಯ ಪರಂಪರೆಯಲ್ಲಿ ವಿವಿಧ ಮತಪಂಥಗಳಿಗೆ ಸ್ಥಾನವಿದೆ ಎಂದು ತಿಳಿಸಿದ ಅವರು, ಭಾರತ ಆರ್ಥಿಕವಾಗಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಬೇಕಾದರೆ ಸ್ವದೇಶಿ ವಸ್ತುಗಳ ಉತ್ಪಾದನೆ ಮತ್ತು ಖರೀದಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು. ಕುಟುಂಬ ವ್ಯವಸ್ಥೆಯ ಮಹತ್ವದ ಕುರಿತು ಮಾತನಾಡಿದ ಅವರು, ಕುಟುಂಬಗಳಲ್ಲಿ ಹಿರಿಯರ ಮಾರ್ಗದರ್ಶನದ ಕೊರತೆ ಹಾಗೂ ಮೊಬೈಲ್ ಬಳಕೆಯ ಅತಿಯಾದ ಅವಲಂಬನೆ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತಿವೆ ಎಂದು ಅಭಿಪ್ರಾಯಪಟ್ಟರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ವಿಜಯದಶಮಿ ಅಂಗವಾಗಿ ನಗರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಆಯೋಜಿಸಿದ್ದ ಪಥಸಂಚಲನ ಗಮನ ಸೆಳೆಯಿತು. ಗಣವೇಷ ಧರಿಸಿದ್ದ 500ಕ್ಕೂ ಹೆಚ್ಚು ಸ್ವಯಂಸೇವಕರು ಘೋಷ ವಾದ್ಯಗಳ ನಿನಾದದೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಶಿಸ್ತುಬದ್ಧವಾಗಿ ಹೆಜ್ಜೆ ಹಾಕಿದರು. ಬಳಿಕ ಶ್ರೀ ಗುರುಸಿದ್ದರಾಮೇಶ್ವರ ಸಮುದಾಯ ಭವನದ ಆವರಣದಲ್ಲಿ ಸಮಾವೇಶಗೊಂಡು ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಶ್ರೀ ಗುರುಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಸ್ವದೇಶಿ ಜಾಗರಣ ಮಂಚ್ನ ಪ್ರಚಾರಕ ಕೆ. ಜಗದೀಶ್ ಮಾತನಾಡಿ, ದೇಶದ ಗಡಿ ಪ್ರದೇಶಗಳು ಸೇರಿದಂತೆ ವಿವಿಧೆಡೆ ಭಾಷೆ ಮತ್ತು ಜಾತಿಯ ಆಧಾರದ ಮೇಲೆ ವೈಷಮ್ಯ ಹೆಚ್ಚುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು. ಪ್ರಶ್ನಿಸುವ ನೆಪದಲ್ಲಿ ದೇಶದೊಳಗೆ ಅರಾಜಕತೆ ಸೃಷ್ಟಿಸಲು ಶತ್ರು ರಾಷ್ಟ್ರಗಳು ಸಂಚು ರೂಪಿಸುತ್ತಿವೆ. ರಾಷ್ಟ್ರೀಯ ಸ್ವಯಂಸೇವಕ ಸಂಘವು ಜಾತಿ ಮತ್ತು ಧರ್ಮದ್ವೇಷ ಹಾಗೂ ರಾಷ್ಟ್ರವಿರೋಧಿ ಚಟುವಟಿಕೆಗಳನ್ನು ಬೆಂಬಲಿಸುವುದಿಲ್ಲ ಎಂದು ತಿಳಿಸಿದ ಅವರು, ಭಾರತೀಯ ಮೂಲದವರು ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದು, ಭಾರತೀಯ ಸಂಸ್ಕೃತಿ ಮತ್ತು ಹಿಂದುತ್ವದ ಪರಿಚಯವನ್ನು ಜಾಗತಿಕ ಮಟ್ಟದಲ್ಲಿ ಮೂಡಿಸಿದ್ದಾರೆ. ಹಿಂದುಗಳು ಭಯಪಡುವ ಬದಲು ಜಾಗೃತರಾಗಿರಬೇಕು ಎಂದು ಕರೆ ನೀಡಿದರು.
ಧರ್ಮವೆಂಬುದು ಜೀವನ ಕ್ರಮವಾಗಿದ್ದು, ಭಾರತೀಯ ಪರಂಪರೆಯಲ್ಲಿ ವಿವಿಧ ಮತಪಂಥಗಳಿಗೆ ಸ್ಥಾನವಿದೆ ಎಂದು ತಿಳಿಸಿದ ಅವರು, ಭಾರತ ಆರ್ಥಿಕವಾಗಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಬೇಕಾದರೆ ಸ್ವದೇಶಿ ವಸ್ತುಗಳ ಉತ್ಪಾದನೆ ಮತ್ತು ಖರೀದಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು. ಕುಟುಂಬ ವ್ಯವಸ್ಥೆಯ ಮಹತ್ವದ ಕುರಿತು ಮಾತನಾಡಿದ ಅವರು, ಕುಟುಂಬಗಳಲ್ಲಿ ಹಿರಿಯರ ಮಾರ್ಗದರ್ಶನದ ಕೊರತೆ ಹಾಗೂ ಮೊಬೈಲ್ ಬಳಕೆಯ ಅತಿಯಾದ ಅವಲಂಬನೆ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತಿವೆ ಎಂದು ಅಭಿಪ್ರಾಯಪಟ್ಟರು.ಮೊಬೈಲ್ಗಳು ದೂರದಲ್ಲಿರುವವರೊಂದಿಗೆ ಸಂಪರ್ಕ ಸಾಧಿಸುವ ಸಾಧನಗಳಾಗಿಯೇ ಉಳಿಯಬೇಕು. ಕುಟುಂಬದ ಸದಸ್ಯರ ನಡುವಿನ ಆತ್ಮೀಯತೆ ಮತ್ತು ಬಾಂಧವ್ಯಕ್ಕೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ದೇಶದಲ್ಲಿ ನಡೆಯುತ್ತಿರುವ ಮತಾಂತರ ಮತ್ತು ಲವ್ ಜಿಹಾದ್ಗೆ ಸಂಬಂಧಿಸಿದ ಪ್ರಕರಣಗಳ ಕುರಿತು ಪೋಷಕರು ಜಾಗೃತರಾಗಿರಬೇಕು ಎಂದು ಕರೆ ನೀಡಿದ ಅವರು, ಸೇವಾ ಚಟುವಟಿಕೆಗಳ ಹೆಸರಿನಲ್ಲಿ ನಡೆಯುವ ಮತೀಯ ದೌರ್ಜನ್ಯಗಳ ಬಗ್ಗೆ ಎಚ್ಚರಿಕೆ ಅಗತ್ಯವೆಂದರು.ಸಮಾಜ ಸಂಘಟಿತವಾಗಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿದಾಗ ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ. ವಿಜಯದಶಮಿ ಕೇವಲ ಹಬ್ಬವಲ್ಲ, ಅದು ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹತ್ವದ ಸಂಕೇತವಾಗಿದೆ ಎಂದು ತಿಳಿಸಿದರು.
ಸಂಘವು ಸ್ಥಾಪನೆಯಾಗಿ 101ನೇ ವರ್ಷಕ್ಕೆ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ವಿವಿಧ ಸೇವಾ ಚಟುವಟಿಕೆಗಳನ್ನು ವಿಸ್ತರಿಸುವುದರೊಂದಿಗೆ ಹಿಂದೂ ಸಮಾಜದ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.ನಗರದ ಗ್ರಾಮದೇವತೆ ಶ್ರೀ ಕರಿಯಮ್ಮ ದೇವಸ್ಥಾನದಿಂದ ಆರಂಭವಾದ ಪಥಸಂಚಲನವು ಘೋಷ ವಾದ್ಯಗಳೊಂದಿಗೆ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಬಳಿಕ ಶ್ರೀ ಗುರುಸಿದ್ದರಾಮೇಶ್ವರ ಸಮುದಾಯ ಭವನದ ಆವರಣದಲ್ಲಿ ಸಮಾಪನಗೊಂಡಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯವಾಹ ಚಂದನ್, ಕೋಟ್ರೇಶ್, ಗಿರೀಶ್, ಹಿತೇಶ್, ಜಿತೇಂದ್ರ, ಕಮಲೇಶ್, ಮಣಿಕಂಠ, ಎನ್. ಕೆ. ಲಖನ್ ಸೇರಿದಂತೆ ಸಂಘದ ಮುಖಂಡರು ಹಾಗೂ ಸ್ವಯಂಸೇವಕರು ಭಾಗವಹಿಸಿದ್ದರು.