ಇಲ್ಲಿನ ರುಡ್‌ಸೆಟ್ ಸಂಸ್ಥೆಯಲ್ಲಿ ಕೆನರಾ ಬ್ಯಾಂಕಿನ ಸಂಸ್ಥಾಪಕ ದಿ. ಅಮ್ಮೆಂಬಳ ಸುಬ್ಬರಾವ್ ಪೈ ಅವರ 174ನೇ ಜನ್ಮದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಬ್ರಹ್ಮಾವರ: ಇಲ್ಲಿನ ರುಡ್‌ಸೆಟ್ ಸಂಸ್ಥೆಯಲ್ಲಿ ಕೆನರಾ ಬ್ಯಾಂಕಿನ ಸಂಸ್ಥಾಪಕ ದಿ. ಅಮ್ಮೆಂಬಳ ಸುಬ್ಬರಾವ್ ಪೈ ಅವರ 174ನೇ ಜನ್ಮದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ವಿಶೇಷ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಸಿಸಿಟಿವಿ ಅಳವಡಿಕೆ, ದುರಸ್ತಿ ಮತ್ತು ಸೇವಾ ತರಬೇತಿ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಹರಾಡಿ ಶಾಖೆಯ ಹಿರಿಯ ಪ್ರಬಂಧಕ ಮಹೇಂದ್ರ ಬಾಬು ಅವರು ಮುಖ್ಯ ಅತಿಥಿಗಳಾಗಿದ್ದರು. ಬ್ರಹ್ಮಾವರದ ರೂಪ್ಫ್ಲಾಸ್ಟ್ ಕನ್ಸ್ಟ್ರಕ್ಷನ್ ಕಂಪನಿಯ ಮಾಲೀಕ ಕೆ. ಸಿ. ಅಮೀನ್ ಹಾಗೂ ವ್ಯವಸ್ಥಾಪಕಿ ಕಮಲಾ ಕೆ. ಸಿ. ಅಮೀನ್ ಅತಿಥಿಗಳಾಗಿದ್ದರು. ಅತಿಥಿಗಳು ಶ್ರೀ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರುಡ್‌ಸೆಟ್ ಸಂಸ್ಥೆ ನಿರ್ದೇಶಕ ಡಾ. ಬೊಮ್ಮಯ್ಯ ಎಂ. ಅವರು ದಿನದ ಮಹತ್ವವನ್ನು ವಿವರಿಸಿದರು. ಸಂಸ್ಥೆಯ ಸಿಬ್ಬಂದಿ ವರ್ಗದವರು, ಪ್ರಸ್ತುತ ನಡೆಯುತ್ತಿರುವ ಜೂನಿಯರ್ ಬ್ಯೂಟಿ ಪ್ರಾಕ್ಟೀಷನರ್ ತರಬೇತಿ ಶಿಬಿರದ ಅಭ್ಯರ್ಥಿಗಳು ಹಾಗೂ ಸಿಸಿಟಿವಿ ಅಳವಡಿಕೆ, ದುರಸ್ತಿ ಮತ್ತು ಸೇವಾ ತರಬೇತಿಯ ಅಭ್ಯರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಚೈತ್ರ ಹರೀಶ್ ನಿರೂಪಿಸಿ, ಕಚೇರಿ ಸಹಾಯಕ ಶಾಂತಪ್ಪ ಸ್ವಾಗತಿಸಿ, ಹಿರಿಯ ಉಪನ್ಯಾಸಕ ಸಂತೋಷ್ ಶೆಟ್ಟಿ ವಂದಿಸಿದರು.