ಬೆಳ್ತಂಗಡಿ: ರಾಷ್ಟ್ರೀಯ ರುಡ್‌ಸೆಟಿ ಅಕಾಡೆಮಿ ವತಿಯಿಂದ ಆಯೋಜಿಸಲಾದ ತರಬೇತಿ ಕಾರ್ಯಕ್ರಮದ ಭಾಗವಾಗಿ ದೇಶದ ವಿವಿಧ ರಾಜ್ಯಗಳು ಹಾಗೂ ಬ್ಯಾಂಕುಗಳನ್ನು ಪ್ರತಿನಿಧಿಸಿದ 32 ನಿರ್ದೇಶಕರು ಮತ್ತು ಅಧ್ಯಾಪಕರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಸಂವಾದ ನಡೆಸಿದರು.
ಜು. 20 ರಿಂದ ಆ. 1, 2026ರ ವರೆಗೆ ನಡೆಯುತ್ತಿರುವ ಈ ರಾಷ್ಟ್ರೀಯ ಮಟ್ಟದ ತರಬೇತಿ ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಗುಜರಾತ್, ಹಿಮಾಚಲ ಪ್ರದೇಶ, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ಪಂಜಾಬ್, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಿಂದ ಪ್ರತಿನಿಧಿಗಳು ಭಾಗವಹಿಸಿದ್ದರು. ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಯುಕೋ ಬ್ಯಾಂಕ್‌ನ ಅಧಿಕಾರಿಗಳು ತರಬೇತಿಯಲ್ಲಿ ಪಾಲ್ಗೊಂಡಿದ್ದರು.ಸಂವಾದದ ಸಂದರ್ಭದಲ್ಲಿ ಡಾ. ಹೆಗ್ಗಡೆ ಅವರು ಧರ್ಮಸ್ಥಳದ ಸೇವಾ ಪರಂಪರೆ, ಗ್ರಾಮೀಣಾಭಿವೃದ್ಧಿ, ಸ್ವ-ಉದ್ಯೋಗ ತರಬೇತಿ, ಮಹಿಳಾ ಸಬಲೀಕರಣ, ಪರಿಸರ ಸಂರಕ್ಷಣೆ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿಯ ವಿವಿಧ ಕಾರ್ಯಕ್ರಮಗಳ ಕುರಿತು ವಿವರಿಸಿದರು. ರುಡ್‌ಸೆಟ್ ಮತ್ತು ಆರ್‌ಸೆಟಿ ಸಂಸ್ಥೆಗಳು ದೇಶದ ನಿರುದ್ಯೋಗಿ ಯುವಜನರಿಗೆ ಕೌಶಲ್ಯಾಭಿವೃದ್ಧಿ ಮತ್ತು ಸ್ವಾವಲಂಬನೆಯ ಮಾರ್ಗವನ್ನು ತೋರಿಸುತ್ತಿರುವ ಕುರಿತು ಅವರು ತಮ್ಮ ಅನುಭವಗಳನ್ನು ಹಂಚಿಕೊಂಡರು.ರುಡ್‌ಸೆಟಿ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ..ವಿಜಯ ಕುಮಾರ್, ಉಪನ್ಯಾಸರಾದ ಲೋಹಿತ್ ಜೈನ್, ಅಬ್ರಹಾಂ ಜೇಮ್ಸ್, ಮತ್ತು ಸುರೇಶ್ ಗೌಡ ಉಪಸ್ಥಿತರಿದ್ದರು. ಹಾಗೂ ರಾಷ್ಟ್ರೀಯ ರುಡ್‌ಸೆಟಿ ಅಕಾಡೆಮಿಯ ಅಧಿಕಾರಿಗಳು ಹಾಗೂ ತರಬೇತಿ ಕಾರ್ಯಕ್ರಮದ ಸಂಯೋಜಕರು ಉಪಸ್ಥಿತರಿದ್ದರುಧರ್ಮಸ್ಥಳ ಕ್ಷೇತ್ರಕ್ಕೆ ರುಡ್‌ಸೆಟಿ ನಿರ್ದೇಶಕ, ಅಧ್ಯಾಪಕರ ಭೇಟಿ
ರಾಷ್ಟ್ರೀಯ ರುಡ್‌ಸೆಟಿ ಅಕಾಡೆಮಿ ವತಿಯಿಂದ ಆಯೋಜಿಸಲಾದ ತರಬೇತಿ ಕಾರ್ಯಕ್ರಮದ ಭಾಗವಾಗಿ ದೇಶದ ವಿವಿಧ ರಾಜ್ಯಗಳು ಹಾಗೂ ಬ್ಯಾಂಕುಗಳನ್ನು ಪ್ರತಿನಿಧಿಸಿದ 32 ನಿರ್ದೇಶಕರು ಮತ್ತು ಅಧ್ಯಾಪಕರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಸಂವಾದ ನಡೆಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.