ರುಡ್‌ಸೆಟ್ ಸಂಸ್ಥೆಯ ವಾರ್ಷಿಕ ಚಟುವಟಿಕೆಗಳ ವರದಿ ಬಿಡುಗಡೆ

| Published : Apr 20 2025, 01:46 AM IST

ರುಡ್‌ಸೆಟ್ ಸಂಸ್ಥೆಯ ವಾರ್ಷಿಕ ಚಟುವಟಿಕೆಗಳ ವರದಿ ಬಿಡುಗಡೆ
Share this Article
  • FB
  • TW
  • Linkdin
  • Email

ಸಾರಾಂಶ

ಉಜಿರೆ ರುಡ್‌ಸೆಟ್ ಸಂಸ್ಥೆಯ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು.

ರುಡ್ಸೆಟ್ ಸಂಸ್ಥೆ ಉಜಿರೆಯ ಚಟುವಟಿಕೆಗಳ ವರದಿ 2024-25ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಶನ್ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಪ್ರಾಯೋಜಕತ್ವದಲ್ಲಿ ಕೇಂದ್ರ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದ ಸಹಕಾರದೊಂದಿಗೆ ನಡೆಯುವ ಉಜಿರೆ ರುಡ್‌ಸೆಟ್ ಸಂಸ್ಥೆಯ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿಯನ್ನು ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು.ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ವರ್ಷದ ಚಟುವಟಿಕೆಗಳಿಗೆ ಶುಭ ಹಾರೈಸಿದರು.ಈ ಸಂದರ್ಭ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ವಿಜಯ ಕುಮಾರ್ ಬಿ.ಪಿ. ಹಾಗೂ ಉಜಿರೆ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಮತ್ತು ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್, ಕೆ.ಕರುಣಾಕರ ಜೈನ್, ಪ್ರವೀಣ್, ಕಾಶ್ಮೀರ ಡಿಸೋಜಾ, ಸುರೇಶ್ ಗೌಡ ಜೊತೆಗೆ ಇದ್ದರು.ಈ ವರ್ಷ 33 ಸ್ವ-ಉದ್ಯೋಗ ತರಬೇತಿಗಳನ್ನು ನಡೆಸಿ, 1012 ಜನ ನಿರುದ್ಯೋಗಿಗಳಿಗೆ ಕೌಶಲ್ಯ ತರಬೇತಿಯನ್ನು ನೀಡಲಾಗಿದೆ. 730 ಜನ ಸ್ವಉದ್ಯೋಗ ಆರಂಭಿಸಿ ಸ್ವಂತ ಬದುಕು ನಡೆಸುವ ಮೂಲಕ ಯಶಸ್ಸಿನ ಪ್ರಮಾಣ ಶೇ.72ರಷ್ಟಾಗಿದೆ.