ಕನ್ನಡಪ್ರಭ ವಾರ್ತೆ ಗುಬ್ಬಿ
ಹಸುಗಳ ಹಾಲು ಕರೆಯುವುದರಿಂದ ಆರೋಗ್ಯವಂತಾಗಿ ಇರುತ್ತವೆ ಎಂದು ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್ ತಿಳಿಸಿದರು. ತಾಲೂಕಿನ ನಲ್ಲೂರಿನಲ್ಲಿ ಹಮ್ಮಿಕೊಂಡಿದ್ದ ಹಾಲು ಕರೆಯುವ ಸ್ವರ್ಧೆ ಉದ್ಘಾಟಿಸಿ ಮಾತನಾಡಿದ ಅವರು ಪ್ರಸ್ತುತ ಕೃಷಿಯಲ್ಲಿ ನಿಶ್ಚಿತ ಆದಾಯ ನಿರೀಕ್ಷಿಸುವುದು ಸಾಧ್ಯವಿಲ್ಲ. ಆದರೆ, ಹೈನುಗಾರಿಕೆಯಲ್ಲಿ ಸ್ಪಷ್ಟವಾದ ನಿಯಮಗಳನ್ನು ಅನುಸರಿಸಿದರೆ ಉತ್ತಮ ಲಾಭ ಗಳಿಸಬಹುದು. ಹೈನುಗಾರರು ಒಕ್ಕೂಟದಿಂದ ಸಿಗುವ ಸವಲತ್ತುಗಳಾದ ರಾಸು ವಿಮೆ, ಸೇರಿದಂತೆ ಹಲವು ಸೌಲಭ್ಯಗಳನ್ನು ಪಡೆದು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು. ಉತ್ತಮ ತಳಿಯ ಹಸುಗಳು ಹಾಲು ಕರೆಯುವ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.ರೈತರು ಹೆಚ್ಚಿನ ಜೀವನೋಪಾಯಕ್ಕಾಗಿ ಹೈನುಗಾರಿಕೆಯನ್ನು ಅವಲಂಬಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ರೈತರು ಹಸುಗಳನ್ನು ಕಟ್ಟಿಕೊಂಡು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ರೈತರಿಗೆ ಹಾಲು ಕರೆಯುವ ಸ್ಪರ್ಧೆ ಯನ್ನು ಏರ್ಪಡಿಸಲಾಗಿದೆ.ಹಾಲು ಕರೆಯುವ ಸ್ಪರ್ಧೆಯಲ್ಲಿ ಸುಮಾರು 30 ರಾಸುಗಳು ಭಾಗವಹಿಸಿದ್ದವು. ರಾಜ್ಯದ ರೈತರು ಇತ್ತೀಚಿನ ದಿನಗಳಲ್ಲಿ ಹೈನುಗಾರಿಕೆ ಹೆಚ್ಷು ಆಸಕ್ತಿ ತೋರುತ್ತಿದ್ದಾರೆ. ಇದರಿಂದ ಹಾಲು ಉತ್ಪಾದನೆ ಹೆಚ್ಚಾಗುತ್ತಿದು ಹಾಲಿನ ಪ್ರಮಾಣ ದಿನೇ ದಿನೇ ಗ್ರಾಮೀಣ ಭಾಗದಲ್ಲಿ ಹೆಚ್ಚಾಗುತ್ತಿದೆ. ರಾಜ್ಯ ಸರ್ಕಾರ ಸಾಕಷ್ಟು ಯೋಜನೆಗಳನ್ನು ಹಾಲು ಉತ್ಪಾದಕರಿಗೆ ಕೊಡುತ್ತಿದೆ. ರೈತರು ಇದರ ಉಪಯೋಗವನ್ನು ಪಡೆದುಕೊಳಬೇಕು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಮೇಲ್ವಿಚಾರಕರಾದ ಶಂಕರನಾಗ್ ,ರಾಜು ,ಮಹೇಶ್ , ವ್ಯವಸ್ಥಕಾದ ಚಂದ್ರಶೇಖರ್ , ಶ್ರೀನಿವಾಸ್ , ಡಾ.ದಿಕ್ಷೀತ್ , ಡಾ.ಪ್ರಜ್ವಲ್ , ಪವನ್ ಸುದೀಪ್ , ಯೋಗೀಶ್, ನಟರಾಜು , ಹೇಮಂತ್ , ಗ್ರಾಮಸ್ಥರು ಭಾಗವಹಿಸಿದ್ದರು.ಹೈನುಗಾರಿಕೆಯಲ್ಲಿ ನಿಯಮ ಪಾಲನೆ ಅಗತ್ಯ
ಹಸುಗಳ ಹಾಲು ಕರೆಯುವುದರಿಂದ ಆರೋಗ್ಯವಂತಾಗಿ ಇರುತ್ತವೆ ಎಂದು ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್ ತಿಳಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.