ಸಾರಾಂಶ
ದಾವಣಗೆರೆ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆ ನಂತರ ಅಯೋಧ್ಯೆಗೆ ಪ್ರತಿದಿನ ಭೇಟಿ ನೀಡುವ ಭಕ್ತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದಾವಣಗೆರೆ ಮೂಲಕ ಅಯೋಧ್ಯೆಗೆ ವಿಶೇಷ ರೈಲು ಓಡಿಸಲು ಸಂಸದ ಜಿ.ಎಂ.ಸಿದ್ದೇಶ್ವರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಮಂಡಳಿ ಅಧ್ಯಕ್ಷೆ ಜಯವರ್ಮ ಸಿನ್ಹಾರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ರಾಜ್ಯದಿಂದ ಈಗಾಗಲೇ ಘೋಷಿಸಿರುವ ಅಯೋಧ್ಯೆ ವಿಶೇಷ ರೈಲುಗಳು ಬೆಳಗಾವಿ, ಹುಬ್ಬಳ್ಳಿ, ಹೊಸಪೇಟೆ ಹಾಗೂ ಬೆಂಗಳೂರು, ಮೈಸೂರು ಕಡೆಯಿಂದ ಹೊರಡುವ ರೈಲುಗಳು ಚಿತ್ರದುರ್ಗದವರೆಗೆ ಬಂದು ಚಿತ್ರದುರ್ಗ-ರಾಯದುರ್ಗ ಮುಖಾಂತರ ಹೊಸಪೇಟೆ ತಲುಪಿ ಅಲ್ಲಿಂದ ಅಯೋಧ್ಯೆ ಕಡೆ ಪ್ರಯಾಣ ಬೆಳೆಸಲಿವೆ. ಮಧ್ಯ ಕರ್ನಾಟಕದಲ್ಲಿರುವ ದಾವಣಗೆರೆ ಮೂಲಕ ವಿಶೇಷ ರೈಲುಗಳು ಇಲ್ಲದಿರುವುದರಿಂದ ಈ ಭಾಗದ ಭಕ್ತರಿಗೆ ಅನಾನುಕೂಲವಾಗಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ. ಬೆಂಗಳೂರು ಅಥವಾ ಮೈಸೂರು ಕಡೆಯಿಂದ ಹೊರಡುವ ವಿಶೇಷ ರೈಲುಗಳು ಅರಸೀಕರೆ-ಚಿಕ್ಕಜಾಜೂರು-ದಾವಣಗೆರೆ-ಹರಪನಹಳ್ಳಿ-ಕೊಟ್ಟೂರು ಮೂಲಕ ಹೊಸಪೇಟೆ ತಲುಪಿ ಅಯೋಧ್ಯೆ ಕಡೆ ಪ್ರಯಾಣ ಬೆಳೆಸಬಹುದು ಎಂದು ಸಂಸದ ಸಿದ್ದೇಶ್ವರ ರೈಲ್ವೆ ಸಚಿವರ ಗಮನಕ್ಕೆ ತಂದಿದ್ದಾರೆ........
ಕ್ಯಾಪ್ಷನಃ27ಕೆಡಿವಿಜಿ31ಃ ಸಂಸದ ಡಾ.ಜಿ.ಎಂ.ಸಿದ್ದೇಶ್ವರ