ಭಾನುವಾರ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಅಕ್ಕಪಕ್ಕದಲ್ಲಿ ಇಬ್ಬರೂ ಕುಳಿತಿದ್ದರು. ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮುಂದುವರಿಯಲಿದೆಯೆ ಅಥವಾ ಪರಸ್ಪರ ವಾಗ್ದಾಳಿ ನಡೆಸಲಿದ್ದಾರೆಯೇ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.

ಕಾರವಾರ: ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹಾಗೂ ಮಾಜಿ ಸಚಿವ ಆನಂದ ಅಸ್ನೋಟಿಕರ್ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿದ್ದು ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳ ಕಾರ್ಯಕರ್ತರ ಅಚ್ಚರಿಗೆ ಕಾರಣವಾಯಿತು.

ರಾಜ್ಯ ಮಟ್ಟದಲ್ಲಿ ಉಭಯ ಪಕ್ಷಗಳ ನಡುವೆ ಹೊಂದಾಣಿಕೆ ಇದ್ದರೂ ಸ್ಥಳೀಯವಾಗಿ ಜೆಡಿಎಸ್‌ನ ಆನಂದ ಹಾಗೂ ರೂಪಾಲಿ ನಾಯ್ಕ ನಡುವೆ ಆಗಾಗ ವಾಗ್ಯುದ್ಧ ನಡೆಯುತ್ತಲೆ ಇತ್ತು.

ಭಾನುವಾರ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಅಕ್ಕಪಕ್ಕದಲ್ಲಿ ಇಬ್ಬರೂ ಕುಳಿತಿದ್ದರು. ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮುಂದುವರಿಯಲಿದೆಯೆ ಅಥವಾ ಪರಸ್ಪರ ವಾಗ್ದಾಳಿ ನಡೆಸಲಿದ್ದಾರೆಯೇ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ದೇಶದಲ್ಲಿ ಅರಾಜಕತೆ ಸೃಷ್ಟಿಸುವುದು ಕಾಂಗ್ರೆಸ್ಸಿನ ಹುನ್ನಾರ: ಪ್ರಹ್ಲಾದ ಜೋಶಿ

ಕಾರವಾರ: ದೇಶದಲ್ಲಿ ಬಾಂಗ್ಲಾದೇಶ ಮತ್ತು ನೇಪಾಳ ಮಾದರಿಯಲ್ಲಿ ಹೋರಾಟ ನಡೆಸುತ್ತೇವೆ ಎನ್ನುವ ಕಾಂಗ್ರೆಸ್ ನಾಯಕರ ಹೇಳಿಕೆಗಳು ಅರಾಜಕತೆ ಸೃಷ್ಟಿಸುವ ಪ್ರಯತ್ನದ ಭಾಗವಾಗಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ನಾಲ್ಕು ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂಬ ಸಂಪೂರ್ಣ ವಿಶ್ವಾಸವಿದೆ. ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ಬರ ನಿರ್ವಹಣೆಯಲ್ಲಿನ ಎಡವಟ್ಟು ಸೇರಿದಂತೆ ಹಲವು ವಿದ್ಯಮಾನಗಳು ಸರ್ಕಾರದ ವೈಫಲ್ಯವನ್ನು ಎತ್ತಿತೋರಿಸುತ್ತಿವೆ. ಇವೆಲ್ಲವನ್ನೂ ಪದವೀಧರ ಮತದಾರರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.2.76 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ರಾಜ್ಯದಲ್ಲಿ ಒಟ್ಟು 7.72 ಲಕ್ಷ ಸರ್ಕಾರಿ ಹುದ್ದೆಗಳ ಪೈಕಿ 2.76 ಲಕ್ಷ ಹುದ್ದೆಗಳು ಖಾಲಿ ಇವೆ. ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಕಾಂಗ್ರೆಸ್, ಏಳೆಂಟು ತಿಂಗಳ ಹಿಂದೆ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಹೋರಾಟ ನಡೆಸಿದ ಯುವಕರನ್ನು ಜೈಲಿಗೆ ಕಳುಹಿಸಿತ್ತು ಎಂದು ಟೀಕಿಸಿದರು.

56 ಸಾವಿರ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ಆರಂಭಿಸಿದ್ದರೂ ಅದು ಇನ್ನೂ ಪೂರ್ಣಗೊಂಡಿಲ್ಲ. ಅನೇಕ ನಿಗಮ- ಮಂಡಳಿಗಳಲ್ಲಿ ನೌಕರರಿಗೆ ವೇತನ ಬಿಡುಗಡೆ ಮಾಡುತ್ತಿಲ್ಲ. ರಾಜ್ಯದ 11 ವಿಶ್ವವಿದ್ಯಾಲಯಗಳಲ್ಲಿ ಒಬ್ಬರೂ ಕಾಯಂ ಉಪನ್ಯಾಸಕರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ದುಸ್ಥಿತಿಗೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಆರೋಪಿಸಿದರು.

ಬರ ಪರಿಹಾರ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಬರ ಎದುರಾದಾಗ ಎನ್‌ಡಿಆರ್‌ಎಫ್ ಪರಿಹಾರದ ಜತೆಗೆ ಹೆಚ್ಚುವರಿ ಪರಿಹಾರವನ್ನೂ ನೀಡಲಾಗಿತ್ತು. ಆದರೆ, ಈಗಿನ ಸರ್ಕಾರ ರೈತರಿಗೆ ಸೂಕ್ತ ಪರಿಹಾರ ನೀಡಲೂ ಸಾಧ್ಯವಾಗದ ದಿವಾಳಿ ಸ್ಥಿತಿಗೆ ತಲುಪಿದೆ ಎಂದು ವಾಗ್ದಾಳಿ ನಡೆಸಿದರು.ನನ್ನ ಟಾರ್ಗೆಟ್ ಮಾಡಿದ್ದಾರೆ: ಸಚಿವ ಜೋಶಿ

ಕಬ್ಬು ಬೆಳೆಗಾರರ ಹೋರಾಟದ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಕಬ್ಬು ಬೆಳೆಗಾರರು ಯಾರದೋ ತಪ್ಪು ತಿಳಿವಳಿಕೆಯಿಂದ ನನ್ನ ಟಾರ್ಗೆಟ್ ಮಾಡಿದ್ದಾರೆ ಎಂದರು.

ಅವರು ನಮ್ಮವರೇ. ದೇವರು ಅವರಿಗೆ ಒಳ್ಳೆದು ಮಾಡಲಿ ಎಂದ ಅವರು, ರೈತರಿಗೆ ಕೃಷಿ ಉತ್ಪನ್ನಗಳ ತೂಕ ಮತ್ತು ರಿಕವರಿ ಲೆಕ್ಕಾಚಾರದಲ್ಲಿ ಮೋಸವಾಗುತ್ತಿರುವ ದೂರುಗಳಿವೆ. ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.