ಸಾರಾಂಶ
ಗಣೇಶೋತ್ಸವ ಎಂದರೆ ಅದೊಂದು ಊರಿಗೆ ಊರೇ ಸಂಭ್ರಮಿಸುವ ಹಬ್ಬ.
ಕಾರವಾರ: ಗಣೇಶ ಚತುರ್ಥಿ ಸಂದರ್ಭದಲ್ಲಿ ಧ್ವನಿವರ್ಧಕ ಬಳಕೆಗೆ ಅವಕಾಶ ಮಾಡಿಕೊಡುವಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಜಿಲ್ಲಾಧಿಕಾರಿ ಅವರೊಂದಿಗೆ ಮಾತನಾಡಿದ ರೂಪಾಲಿ ಎಸ್.ನಾಯ್ಕ, ರಾಜ್ಯ ಸರ್ಕಾರ ಹಿಂದೂಗಳ ಪವಿತ್ರ ಹಬ್ಬವಾದ ಗಣೇಶ ಚತುರ್ಥಿ ಸಂದರ್ಭದಲ್ಲಿ ಡಿಜೆ ಬಳಕೆಗೆ ನಿರ್ಬಂಧ ವಿಧಿಸಿರುವುದು ಸರಿಯಲ್ಲ ಎಂದು ತಿಳಿಸಿದರು.ಗಣೇಶೋತ್ಸವ ಎಂದರೆ ಅದೊಂದು ಊರಿಗೆ ಊರೇ ಸಂಭ್ರಮಿಸುವ ಹಬ್ಬ. ಹಿಂದೂಗಳು ವರ್ಷದಲ್ಲಿ 11 ದಿನಗಳ ಕಾಲ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುತ್ತಾರೆ. ಈ ಅವಧಿಯಲ್ಲಿ ಡಿಜೆ ಬಳಕೆಗೆ ಸಮಯದ ಮಿತಿ ಹಾಕುವುದು ಸರಿಯಲ್ಲ. ನಮ್ಮ ಜಿಲ್ಲೆಯಲ್ಲಿ ಡಿಜೆ ಬಳಕೆಗೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ಅವರನ್ನು ವಿನಂತಿಸಿದರು. ಹಾಗೆಯೇ ರಾಜ್ಯ ಸರ್ಕಾರ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿದರು.
ಹಿಂದೂ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.