ಜಿಲ್ಲೆಯ ಚುನಾವಣಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ ರೂಪಾಲಿ ನಾಯ್ಕ ಅವರು ಪ್ರತಿ ತಾಲೂಕಿಗೂ ಭೇಟಿ ನೀಡಿ ಪದವೀಧರ ಮತದಾರರನ್ನು ಭೇಟಿಯಾಗಿ ಸಂಕನೂರ ಅವರ ಪರವಾಗಿ ಮತಯಾಚಿಸಿದ್ದರು.

ಕಾರವಾರ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಪರವಾಗಿ ಮಾಜಿ ಶಾಸಕಿ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಅವರು ಶುಕ್ರವಾರ ಮತಗಟ್ಟೆಯ ಹೊರಗೆ ನಿಗದಿತ ಸ್ಥಳದಲ್ಲಿ ಸ್ಥಾಪಿಸಲಾಗಿದ್ದ ಬಿಜೆಪಿ ಚುನಾವಣಾ ಸಹಾಯಕೇಂದ್ರದಲ್ಲಿ ಸ್ವತಃ ಉಪಸ್ಥಿತರಿದ್ದು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದರು.ಚುನಾವಣಾ ಪ್ರಕ್ರಿಯೆ ಆರಂಭವಾದಾಗಿನಿಂದಲೇ ಅಭ್ಯರ್ಥಿ ಸಂಕನೂರ ಅವರ ಪರವಾಗಿ ಸಕ್ರಿಯವಾಗಿ ಪ್ರಚಾರ ನಡೆಸಿದ್ದ ರೂಪಾಲಿ ನಾಯ್ಕ ಅವರು, ಮತದಾನದ ದಿನವೂ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಿಗೆ ಚುರುಕು ನೀಡುವುದರ ಜತೆಗೆ ಕಾರ್ಯಕರ್ತರಿಗೆ ಮಾರ್ಗದರ್ಶನ ಮಾಡಿದರು.ಜಿಲ್ಲೆಯ ಚುನಾವಣಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ ರೂಪಾಲಿ ನಾಯ್ಕ ಅವರು ಪ್ರತಿ ತಾಲೂಕಿಗೂ ಭೇಟಿ ನೀಡಿ ಪದವೀಧರ ಮತದಾರರನ್ನು ಭೇಟಿಯಾಗಿ ಸಂಕನೂರ ಅವರ ಪರವಾಗಿ ಮತಯಾಚಿಸಿದ್ದರು. ಶಿಕ್ಷಣ ಸಂಸ್ಥೆಗಳು, ಬ್ಯಾಂಕ್‌ಗಳು ಸೇರಿದಂತೆ ವಿವಿಧೆಡೆ ಮತದಾರರನ್ನು ಸಂಪರ್ಕಿಸಿ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದರು.ಜಿಲ್ಲೆಯ ವಿವಿಧ ಭಾಗಗಳಲ್ಲಿ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟಿತವಾಗಿ ಕಾರ್ಯನಿರ್ವಹಿಸುವ ಮೂಲಕ ಚುನಾವಣಾ ಪ್ರಚಾರಕ್ಕೆ ಬಲ ತುಂಬಿದ್ದರು.ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ, ಪ್ರಮುಖರಾದ ನಾಗೇಶ ಕುರ್ಡೇಕರ, ರವಿರಾಜ ಅಂಕೋಲೆಕರ, ಸಂಜಯ ಸಾಳುಂಕೆ, ಸುನೀಲ ಸೋನಿ, ಕಿಶನ್ ಕಾಂಬ್ಳೆ ಹಾಗೂ ವೈಶಾಲಿ ತಾಂಡೇಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕರ್ತರ ಪರಿಶ್ರಮ: ಪಕ್ಷದ ಪ್ರತಿಯೊಬ್ಬ ಪದಾಧಿಕಾರಿ ಹಾಗೂ ಕಾರ್ಯಕರ್ತರ ಪರಿಶ್ರಮವೇ ಸಂಘಟನೆಯ ಶಕ್ತಿ. ಪದವೀಧರ ಮತದಾರರನ್ನು ನೇರವಾಗಿ ಭೇಟಿಯಾಗಿ ಸಂಕನೂರ ಅವರ ಪರವಾಗಿ ಬೆಂಬಲ ಕೋರಿದ್ದೇವೆ. ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಪಕ್ಷ ಗೆಲುವು ಸಾಧಿಸುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ತಿಳಿಸಿದರು.