ಗ್ರಾಮೀಣ ಹಣ್ಣು ಮಕ್ಕಳಿಗೂ ಉನ್ನತ ಶಿಕ್ಷಣ ನೀಡಬೇಕು

| Published : Nov 03 2025, 01:45 AM IST

ಸಾರಾಂಶ

ಗ್ರಾಮೀಣ ಭಾಗದ ಹಳ್ಳಿಯ ಜನರು ತಮ್ಮ ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವಲ್ಲಿ ತುಂಬಾ ಹಿಂದೆ ಇದ್ದಾರೆ, ಯಾವಾಗ ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆದು ಉನ್ನತ ಮಟ್ಟದ ಹುದ್ದೆಗಳನ್ನು ಅಲಂಕರಿಸಿದಾಗ ಮಾತ್ರ ಸಮಾಜದಲ್ಲಿ ಆಗುತ್ತಿರುವಂತಹ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಸಾಧ್ಯ. ಪೋಷಕರು ಹೆಣ್ಣು ಮಕ್ಕಳಿಗೂ ಗಂಡು ಮಕ್ಕಳಂತೆ ಉನ್ನತ ಶಿಕ್ಷಣ ಕೊಡಬೇಕು.

ಕನ್ನಡಪ್ರಭ ವಾರ್ತೆ ಬೇತಮಂಗಲಸಮಾಜದಲ್ಲಿ ಪ್ರತಿಯೊಬ್ಬ ಹೆಣ್ಣು ಮಗು ಸಹ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿ ಎಲ್ಲ ರಂಗದಲ್ಲೂ ಮೇಲುಗೈ ಸಾಧಿಸಿದಾಗ ಮಾತ್ರ ಹೆಣ್ಣು ಮಕ್ಕಳು ದೌರ್ಜನ್ಯಗಳಿಂದ ಮುಕ್ತರಾಗಲು ಸಾಧ್ಯವಾಗುತ್ತದೆ ಎಂದು ಕೆಜಿಎಫ್ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮುಜಾಫರ್ ಎ.ಮಂಜರಿ ತಿಳಿಸಿದರು.ಸರ್ಕಾರಿ ಸಂಯುಕ್ತ ಪ್ರೌಢಶಾಲಾ ಆವರಣದಲ್ಲಿ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ಕಾನೂನಿನ ಅರಿವು ಮತ್ತು ಪ್ರೋತ್ಸಾಹ ಕಾಯ್ದೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಗ್ರಾಮೀಣ ಹೆಣ್ಣು ಮಕ್ಕಳಿಗೆ ಶಿಕ್ಷಣ

ಗ್ರಾಮೀಣ ಭಾಗದ ಹಳ್ಳಿಯ ಜನರು ತಮ್ಮ ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವಲ್ಲಿ ತುಂಬಾ ಹಿಂದೆ ಇದ್ದಾರೆ, ಯಾವಾಗ ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆದು ಉನ್ನತ ಮಟ್ಟದ ಹುದ್ದೆಗಳನ್ನು ಅಲಂಕರಿಸಿದಾಗ ಮಾತ್ರ ಸಮಾಜದಲ್ಲಿ ಆಗುತ್ತಿರುವಂತಹ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಸಾಧ್ಯ. ಪೋಷಕರು ಹೆಣ್ಣು ಮಕ್ಕಳಿಗೂ ಗಂಡು ಮಕ್ಕಳಂತೆ ಉನ್ನತ ಶಿಕ್ಷಣ ಕೊಡಬೇಕು ಎಂದರು.

ಹೆಣ್ಣುಮಕ್ಕಳು ನಿರ್ಧಾರ ಕೈಗೊಳ್ಳಿ

ಕೆಜಿಎಫ್ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿನೋದ್‌ಕುಮಾರ್ ಮಾತನಾಡಿ, ಹೆಣ್ಣು ಮಕ್ಕಳು ತಮಗೆ ತಾವೇ ಸೂಕ್ತವಾದ ನಿರ್ಧಾರ ಕೈಗೊಂಡು ಯಾವುದೇ ರೀತಿಯ ಆಕರ್ಷಣೆಗಳಿಗೆ ಬಲೆಯಾಗದೆ ಶಿಕ್ಷಣದಲ್ಲಿ ಮುಂದೆ ಬಂದು ತಮ್ಮ ಜೀವನ ತಾವೇ ಉತ್ತಮ ಪಡಿಸಿಕೊಳ್ಳಬೇಕು ಎಂದು ಕಿವಿಮಾತು ನುಡಿದರು.ಹಣ್ಣು ಮಕ್ಕಳು ಜಾಗೃತರಾಗಬೇಕು

ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಹಾಗೂ ದಬ್ಬಾಳಿಕೆ ಅಪಹರಣಗಳಿಂದ ಹೆಣ್ಣು ಮಕ್ಕಳೇ ಜಾಗೃತರಾಗಿ ತಮ್ಮ ರಕ್ಷಣೆ ಮಾಡಿಕೊಳ್ಳಬೇಕು. ಅನಿವಾರ್ಯದ ಸಮಯದಲ್ಲಿ ಸಂಬಂಧಪಟ್ಟ ಇಲಾಖೆ ಸಂಪರ್ಕಿಸಿ ರಕ್ಷಣೆ ಪಡೆಯಬೇಕು. ಪ್ರತಿನಿತ್ಯ ಪೋಷಕರು ತಮ್ಮ ಮಕ್ಕಳು ಮೊಬೈಲ್‌ನಲ್ಲಿ ಯಾವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂಬುದರ ಬಗ್ಗೆ ಗಮನ ಕೊಡಬೇಕು ಆಗ ಮಾತ್ರ ಮಕ್ಕಳು ದಾರಿ ತಪ್ಪಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಅಪರ ಸಿವಿಲ್ ನ್ಯಾಯಾಧೀಶರಾದ ಶೆಮಿದ, ಸ್ಕೂಲ್ ಆಫ್ ಲಾ ಪ್ರಾಂಶುಪಾಲ ಕೌಶಿಕ್, ವಕೀಲರ ಸಂಘದ ಅಧ್ಯಕ್ಷ ರಾಜಗೋಪಾಲ್ ಗೌಡ, ಉಪಾಧ್ಯಕ್ಷ ಮಣಿವಣ್ಣನ್, ಪ್ರಧಾನ ಕಾರ್ಯದರ್ಶಿ ಕೆ.ಸಿ.ನಾಗರಾಜ್, ಬೇತಮಂಗಲ ವೃತ್ತ ನಿರೀಕ್ಷಕ ರಂಗಶಾಮಯ್ಯ, ಪಿಎಸ್‌ಐ ಗುರುರಾಜ್ ಚಿಂತಕಲ್, ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ರಾಜೇಶ್, ವಿದ್ಯಾರ್ಥಿ ಕ್ಷೇಮಫಲನ ಅಧಿಕಾರಿ ಅಂಜುಮ್ ಮಹಮದ್, ಕಾನೂನು ನೆರವು ಸಂಯೋಜಕಿ ವಿದ್ಯಾ ಮತ್ತಿತರರು ಇದ್ದರು.