ಸಾರಾಂಶ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರ ಪಾಲಿಗೆ ವರವಾಗಿದೆ ಎಂದು ನಗರಸಭೆ ಸದಸ್ಯೆ ಸಾಬೇರಾ ಬೇಗಂ ಹೇಳಿದರು.
ಕನ್ನಡಪ್ರಭ ವಾರ್ತೆ ಶಹಾಬಾದ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರ ಪಾಲಿಗೆ ವರವಾಗಿದೆ ಎಂದು ನಗರಸಭೆ ಸದಸ್ಯೆ ಸಾಬೇರಾ ಬೇಗಂ ಹೇಳಿದರು. ನಗರದ ಹನುಮಾನ ನಗರದ ವಸತಿ ನಿಲಯದ ಸಭಾಂಗಣದಲ್ಲಿ ನಡೆದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾಯಕ್ರಮದಲ್ಲಿ ಮಾತನಾಡಿದ ಅವರು ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡಲು ಸಾಲ ಸೌಲಭ್ಯ ನೀಡುವುದರ ಜತೆಗೆ ಸಮಾಜದ ಬಗ್ಗೆ ಕಾಳಜಿಯನ್ನು ಹೊಂದಿ ಪರಿಸರ ಸ್ವಚ್ಛತೆ, ಕೃಷಿ ತರಬೇತಿ, ಪರಿಕರಗಳ ವಿತರಣೆ, ವಿದ್ಯಾರ್ಥಿ ವೇತನ, ಮದ್ಯಪಾನ ವರ್ಜನ ಶಿಬಿರ, ಪರಿಸರ ಕಾಳಜಿ, ಅಂಗವಿಲಕರಿಗೆ ತ್ರಿಚಕ್ರ ವಾಹನಕಗಳ ವಿತರಣೆ, ಬಡವರಿಗೆ ಆರ್ಥಿಕ ಸಹಾಯ, ವೃದ್ಧರಿಗೆ ವಾತ್ಸಲ್ಯ ಮನೆ, ವೃದ್ಧರಿಗೆ ಪಿಂಚಣಿ, ಹೀಗೇ ಹತ್ತು ಹಲವು ಜನಪರ ಕಾರ್ಯಗಳನ್ನು ನಿರಂತರ ನಡೆಸುತ್ತಾ ಗ್ರಾಮೀಣಾ ಪ್ರದೇಶ, ನಗರ ಪ್ರದೇಶದ ಜನರಿಗೆ ಗ್ರಾಮಾಭಿವೃದ್ಧಿ ಯೋಜನೆ ಸಂಜೀವಿನಿಯಾಗಿದೆ ಎಂದು ಹೇಳಿದರು.ಜ್ಞಾನ ವಿಕಾಸ ಪ್ರಾದೇಶಕ ವಿಭಾಗದ ಅಧಿಕಾರಿ ಜ್ಯೋತಿ ಮಾತನಾಡಿ, ಮಹಿಳಾ ಸಬಲೀಕರಣಕ್ಕಾಗಿ ಜ್ಞಾನ ವಿಕಾಸ ಕೇಂದ್ರವನ್ನು ಪ್ರಾರಂಭಿಸಿ ಮಹಿಳೆಯರ ಆರ್ಥಿಕ, ಬೌದ್ಧಿಕ, ಸಾಮಾಜಿಕ, ಬಡತನ ದೂರ ಮಾಡಲು ಜ್ಞಾನ ವಿಕಾಸ ಕೇಂದ್ರ ತೆರೆಯಲಾಗಿದೆ, ಮಹಿಳೆಯರಿಗೆ ಶಿಕ್ಷಣ, ಆರ್ಥಿಕ ನೆರವು ನೀಡಿ ನಿರಂತರ ಬದಲಾವಣೆಗೆ ಪ್ರಯತ್ನಿಸಿ ಸ್ವಾವಲಂಬಿಯಾಗಿ ಮಾಡುತ್ತಿದೆ ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ ಮೇಲ್ವಿಚಾರಕ ರವಿಕುಮಾರ ಮುತ್ತಗಿ ಮಾತನಾಡಿದರು.ಜ್ಞಾನ ವಿಕಾಸ ಸಮನ್ವಯಧಿಕಾರಿ ಅರ್ಚನಾ, ವಲಯ ಮೇಲ್ವಿಚಾರಕ ವಿಕಾಸ, ವಿಶ್ವ ಹಿಂದೂ ಪರಿಷತ್ತಿನ ಗೌರವ ಅಧ್ಯಕ್ಷ ಬಸವರಾಜ ಸಾತ್ಯಾಳ, ಜನ ಜಾಗೃತಿ ವೇದಿಕೆಯ ಸದಸ್ಯ ವಾಸುದೇವ ಚವ್ಹಾಣ್ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದರು.
ಮಹಿಳೆಯವರಿಗೆ ವಿವಿಧ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಣೆ ಮಾಡಿದರು. ಅಂಬಿಕಾ ಸ್ವಾಗತ, ಗುರುಬಾಯಿ ನಿರೂಪಿಸಿದರು.