ಸಾರಾಂಶ
ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡಲು ಮಹಾತ್ಮ ಗಾಂಧೀಜಿಯವರು ಸುಧೀರ್ಘಕಾಲ ಹೋರಾಟ ನಡೆಸಿದರು. ಗ್ರಾಮೀಣ ಪ್ರದೇಶದ ಅಭಿವೃದ್ಧಿಯೇ ಅವರ ಗುರಿಯಾಗಿತ್ತು. ಪ್ರಸ್ತುತ ರಾಜ್ಯ ಸರ್ಕಾರ ಮಹಾತ್ಮಗಾಂಧೀಜಿಯವರ ಆದರ್ಶಪಾಲನೆಗೆ ಬದ್ದವಾಗಿದೆ ಎಂದು ಶಾಸಕ, ಸಣ್ಣಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ. ರಘುಮೂರ್ತಿ ತಿಳಿಸಿದರು.
ಕನ್ನಡಪ್ರಭವಾರ್ತೆ ಚಳ್ಳಕೆರೆ
ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡಲು ಮಹಾತ್ಮ ಗಾಂಧೀಜಿಯವರು ಸುಧೀರ್ಘಕಾಲ ಹೋರಾಟ ನಡೆಸಿದರು. ಗ್ರಾಮೀಣ ಪ್ರದೇಶದ ಅಭಿವೃದ್ಧಿಯೇ ಅವರ ಗುರಿಯಾಗಿತ್ತು. ಪ್ರಸ್ತುತ ರಾಜ್ಯ ಸರ್ಕಾರ ಮಹಾತ್ಮಗಾಂಧೀಜಿಯವರ ಆದರ್ಶಪಾಲನೆಗೆ ಬದ್ದವಾಗಿದೆ ಎಂದು ಶಾಸಕ, ಸಣ್ಣಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ. ರಘುಮೂರ್ತಿ ತಿಳಿಸಿದರು.ಅವರು, ಬುಧವಾರ ನಗರದ ತಾಲೂಕು ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತ್ರೀ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ ಮಾತನಾಡಿದರು.
ಗಾಂಧೀಜಿಯವರ ಹೋರಾಟಗಳು ಸದಾಕಾಲ ಎಲ್ಲರಿಗೂ ಸ್ಫೂರ್ತಿಯಾಗಿವೆ. ವಿದೇಶದಲ್ಲಿ ವಿದ್ಯಾಭ್ಯಾಸವನ್ನು ಅವಮಾನದ ಮೂಲಕ ಪಡೆದರೂ ಸಹ ದೇಶದ ಸ್ವಾತಂತ್ರ್ಯಕ್ಕಾಗಿ ಎಲ್ಲವನ್ನೂ ಮರೆತು ಹೋರಾಡಿದವರು. ಹಳ್ಳಿಯಿಂದ ದಿಲ್ಲಿತನಕ ಇಂದು ಗಾಂಧೀಜಿಯವರ ನಮನ ಕಾರ್ಯಕ್ರಮ ನಡೆಯುತ್ತಿದೆ. ಮಹಾತ್ಮಗಾಂಧೀಜಿ, ಲಾಲ್‌ಬಹದ್ದೂರ್ ಶಾಸ್ತ್ರೀ ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ಯಾರೂ ಮರೆಯಲು ಸಾಧ್ಯವಿಲ್ಲವೆಂದರು.ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ತಹಸೀಲ್ದಾರ್ ರೇಹಾನ್‌ಪಾಷ, ಭಾರತೀಯರೆಲ್ಲರೂ ಹೆಮ್ಮೆಪಡಬೇಕಾದ ಸುದಿನ ಇದಾಗಿದೆ. ಮಹಾತ್ಮಗಾಂಧೀಜಿ ಮತ್ತು ಲಾಲ್‌ಬಹದ್ದೂರ್ ಶಾಸ್ತ್ರೀ ಅವರ ಜನ್ಮದಿನಾಚರಣೆ ಕಾರ್ಯಕ್ರಮ ಎಲ್ಲರಿಗೂ ಆತ್ಮವಿಶ್ವಾಸ ಹೆಚ್ಚಿಸುವ ದಿನವಾಗಲಿ. ನಮ್ಮ ನಾಡು, ನುಡಿಗೆ ಸೇವೆ ಸಲ್ಲಿಸಿದ ಮಹಾನೀಯರ ಕಾರ್ಯಕ್ರಮಗಳು ನಮಗೆ ವಿಶೇಷವಾದ ಶಕ್ತಿ ಹಾಗೂ ಸಂತಸ ತಂದು ಕೊಡುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕೃಷಿ ಅಧಿಕಾರಿ ಅಶೋಕ್, ಪಶು ವೈದ್ಯಾಧಿಕಾರಿ ರೇವಣ್ಣ, ತೋಟಗಾರಿಕೆ ಅಧಿಕಾರಿ ವಿರೂಪಾಕ್ಷಪ್ಪ, ಬಿಇಒ ಕೆ.ಎಸ್. ಸುರೇಶ್, ಎಸ್ಟಿ ಅಧಿಕಾರಿ ಶಿವರಾಜ್, ಬಿಸಿಎಂ ಅಧಿಕಾರಿ ರಮೇಶ್, ಸಮಾಜ ಕಲ್ಯಾಣಾಧಿಕಾರಿ ದೇವ್ಲಾನಾಯ್ಕ, ಡಿವೈಎಸ್ಪಿ ಬಿ.ಟಿ. ರಾಜಣ್ಣ, ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಜಾತ, ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಆನಂದಕುಮಾರ್, ನಿವೃತ್ತ ಪ್ರಾಧ್ಯಾಪಕ ಶ್ರೀರಾಮರೆಡ್ಡಿ ಮುಂತಾದವರು ಭಾಗವಹಿಸಿದ್ದರು.