ಎಲಿಯಂಗಾಡು ಶಾಲೆಯಲ್ಲಿ ಗ್ರಾಮೀಣ ಕ್ರೀಡಾಕೂಟ

| Published : Jan 31 2024, 02:17 AM IST

ಸಾರಾಂಶ

ಕೊಂಡಂಗೇರಿ ಸಮೀಪದ ಎಲಿಯಂಗಾಡು ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟವನ್ನು ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಎಲಿಯಂಗಾಡು ಫ್ರೆಂಡ್ಸ್ ಯುವಕ ಸಂಘದ ಅಧ್ಯಕ್ಷರಾದ ಕೆ.ಎಚ್. ಅಬ್ದುಲ್ ರಹಿಮಾನ್ (ಅಂದಾಯಿ) ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿಯ ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ ಮತ್ತು ವಿರಾಜಪೇಟೆ ತಾಲೂಕು ಯುವ ಒಕ್ಕೂಟದ ಆಶ್ರಯದಲ್ಲಿ ಎಲಿಯಂಗಾಡು ಫ್ರೆಂಡ್ಸ್ ಯುವಕ ಸಂಘದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗಿತ್ತು.

ಕೊಂಡಂಗೇರಿ ಸಮೀಪದ ಎಲಿಯಂಗಾಡು ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಈ ಕ್ರೀಡಾಕೂಟವನ್ನು ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಎಲಿಯಂಗಾಡು ಫ್ರೆಂಡ್ಸ್ ಯುವಕ ಸಂಘದ ಅಧ್ಯಕ್ಷರಾದ ಕೆ.ಎಚ್. ಅಬ್ದುಲ್ ರಹಿಮಾನ್ (ಅಂದಾಯಿ)ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಹಾಲುಗುಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಂದಿಕಂಡ ದಿನೇಶ್ (ಕುಶ) ಮಾತನಾಡಿ, ಆಧುನಿಕ ಕಾಲಘಟ್ಟದಲ್ಲಿ ಮರೆಯಾಗುತ್ತಿರುವ ಗ್ರಾಮೀಣ ಕ್ರೀಡಾಕೂಟಗಳಿಗೆ ಪುನಶ್ಚೇತನ ನೀಡುವ ಅಗತ್ಯವಿದೆ. ಪ್ರತಿ ಗ್ರಾಮಗಳಲ್ಲೂ ಗ್ರಾಮೀಣ ಕ್ರೀಡಾಕೂಟಕ್ಕೆ ಉತ್ತೇಜನ ನೀಡಬೇಕಿದೆ. ಹೀಗಾದರೆ ಮಾತ್ರ ಗ್ರಾಮೀಣ ಕ್ರೀಡೆಗಳ ಮಹತ್ವವನ್ನು ಮುಂದಿನ ಪೀಳಿಗೆಗೆ ತಿಳಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಹಾಲುಗುಂದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಆಮೀನ, ಎಲಿಯಂಗಾಡು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಡಿ.ಎ. ಕಮರುನ್ನಿಸ, ಯಮುನಾ ಮೊದಲಾದವರು ಪಾಲ್ಗೊಂಡಿದ್ದರು. ಕೊನೆಯಲ್ಲಿ ಗ್ರಾಮೀಣ ಕ್ರೀಡಾ ಕೂಟದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಆಡಳಿತ ಮಂಡಳಿ ಸಭೆ:

ಕೊಡಗು ಜಿಲ್ಲಾ ಕಿವುಡರ ಸಂಘದ ಆಡಳಿತ ಮಂಡಳಿಯ ಸಭೆಯು ಸಂಘದ ಅಧ್ಯಕ್ಷೆ ಗೌರಮ್ಮ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ವಿರಾಜಪೇಟೆಯ ಪುರಭವನದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘದ ಕಾರ್ಯ ಚಟುವಟಿಕೆಗಳನ್ನು ನಡೆಸುವ ಮೂಲಕ ಎಲ್ಲರಿಗೂ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಚರ್ಚಿಸಲಾಯಿತು.ಗ್ರಾಮ ಪುನರ್ವಸತಿ ಕಾರ್ಯಕರ್ತೆ ಮತ್ತು ಸೌಭಾಗ್ಯ ವಿಕಲಚೇತನ ಸೇವಾ ಟ್ರಸ್ಟ್‌ನ ವಿಆರ್‌ಡಬ್ಲ್ಯು ಆಯಿಷಾ, ಕರ್ನಾಟಕ ರಾಜ್ಯ ಕಿವುಡರ ಕಲ್ಯಾಣ ಸಂಘದ ಉಪಾಧ್ಯಕ್ಷ ಎ.ಗಣೇಶ್ ರಾವ್, ಮೈಸೂರು ಕಿವುಡರ ಕಲ್ಯಾಣ ಸಂಘದ ಅಧ್ಯಕ್ಷ ಮೂರ್ತಿ, ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟದ ಜೆ.ವಿ.ಮಹೇಶ್ ವರ್ಮ, ಕೆಡಿಡಿಎ ಚೇರ್ಮನ್‌ ಜೋಸೆಫ್ ಸ್ಯಾಮ್, ಉಪಾಧ್ಯಕ್ಷ ಶಂಕರ ನಾರಾಯಣ, ಪ್ರಧಾನ ಕಾರ್ಯದರ್ಶಿ ರಂಜಿತ್, ಸಹ ಕಾರ್ಯದರ್ಶಿ ನಾಗೇಶ್, ಖಜಾಂಚಿ ಕೆ.ಎ.ಸುರೇಶ್, ಕ್ರೀಡಾ ಕಾರ್ಯದರ್ಶಿ ಎಂ.ಎ.ರಂಶಾದ್, ಸದಸ್ಯರಾದ ಬಿ.ಎ.ಚಾಯಾದೇವಿ, ಎಚ್.ಪಿ.ಪ್ರಭಾಕರ್, ಟಿ.ಎಸ್.ಸುನೀಲ್, ಎಚ್.ವಿ.ವೆಂಕಟೇಶ್, ಅಮಿನ್ ಪಾಷ, ಅಸ್ಲಂ, ತೇಜವರ್ಮ ಸೇರಿದಂತೆ ಇತರರು ಹಾಜರಿದ್ದರು.

ಸಭೆಯಲ್ಲಿ ಸಂಘದ ಅಧ್ಯಕ್ಷೆ ಗೌರಮ್ಮ ಸೋಮಣ್ಣ ಅವರನ್ನು ಗಣ್ಯರು ಸನ್ಮಾನಿಸಿ ಗೌರವಿಸಿದರು.