ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಉತ್ತೇಜನ ಅವಶ್ಯ :ಶಾಸಕ ಸಿ. ಪುಟ್ಟರಂಗಶೆಟ್ಟಿ

| Published : Feb 22 2025, 12:47 AM IST

ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಉತ್ತೇಜನ ಅವಶ್ಯ :ಶಾಸಕ ಸಿ. ಪುಟ್ಟರಂಗಶೆಟ್ಟಿ
Share this Article
  • FB
  • TW
  • Linkdin
  • Email

ಸಾರಾಂಶ

ಕ್ರೀಡೆಗೆ ಹೆಸರುವಾಸಿಯಾಗಿರುವ ಚಾಮರಾಜನಗರ ಜಿಲ್ಲೆ, ಖೋಖೋ, ಕಬ್ಬಡಿ, ವಾಲಿಬಾಲ್, ಹಗ್ಗಜಗ್ಗಾಟ ಈ ಎಲ್ಲಾ ಕ್ರೀಡೆಗಳಲ್ಲಿಯು ಜಿಲ್ಲೆಯು ಹೆಸರು ಮಾಡಿದೆ. ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಪ್ರೋತ್ಸಾಹಿಸುವ ಅಗತ್ಯವಿದೆ. ಇಂತಹ ಗ್ರಾಮೀಣ ಕ್ರೀಡಾಕೂಟಗಳು ಹೆಚ್ಚು ನಡೆಯುವಂತಾಗಲಿ ಎಂದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಉತ್ತೇಜನ ನೀಡುವ ಮೂಲಕ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡಬೇಕೆಂದು ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸವಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ, ಜಿಲ್ಲಾಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡೆಗೆ ಹೆಸರುವಾಸಿಯಾಗಿರುವ ಚಾಮರಾಜನಗರ ಜಿಲ್ಲೆ, ಖೋಖೋ, ಕಬ್ಬಡಿ, ವಾಲಿಬಾಲ್, ಹಗ್ಗಜಗ್ಗಾಟ ಈ ಎಲ್ಲಾ ಕ್ರೀಡೆಗಳಲ್ಲಿಯು ಜಿಲ್ಲೆಯು ಹೆಸರು ಮಾಡಿದೆ. ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಪ್ರೋತ್ಸಾಹಿಸುವ ಅಗತ್ಯವಿದೆ. ಇಂತಹ ಗ್ರಾಮೀಣ ಕ್ರೀಡಾಕೂಟಗಳು ಹೆಚ್ಚು ನಡೆಯುವಂತಾಗಲಿ ಎಂದರು.

ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ಕ್ರಮ ತೆಗೆದುಕೊಳ್ಳಲಾಗುವುದು. ಬ್ಯಾಸ್ಕೆಟ್ ಬಾಲ್ ಕೋರ್ಟ್‌ , ಜಿಮ್ ಸೌಲಭ್ಯಕ್ಕಾಗಿ ಅನುದಾನ ಬಿಡುಗಡೆಯಾಗಿದೆ. ಕ್ರೀಡಾಪಟುಗಳು ಉತ್ತಮ ಸಾಧನೆ ಮೂಲಕ ರಾಜ್ಯಮಟ್ಟದಲ್ಲಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ. ಸುರೇಶ್ ಅವರು ಮಾತನಾಡಿ, ತಾಲೂಕು ಗ್ರಾಮೀಣ ಕ್ರೀಡಾಕೂಟದಲ್ಲಿ ವಿಜೇತರಾದವರನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ತಾಲೂಕು ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.

ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಚೂಡ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಹಿರಿಯ ಕ್ರೀಡಾಪಟು ವಿ. ಶ್ರೀನಿವಾಸ್ ಪ್ರಸಾದ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.