ಬಿಜೆಪಿ ಅಧಿಕಾರಕ್ಕೆ ಬಂದರೆ ಮಾತ್ರ ದೇಶ ಅಭಿವೃದ್ಧಿ

| Published : Apr 23 2024, 12:47 AM IST / Updated: Apr 23 2024, 12:48 AM IST

ಸಾರಾಂಶ

ಕೇಂದ್ರದಲ್ಲಿ ಬಿಜೆಪಿ ಸರ್ಕಾರ 10 ವರ್ಷದಲ್ಲಿ ಉತ್ತಮ ಆಡಳಿತ ನೀಡಿದೆ. ಕಿಸಾನ್ ಯೋಜನೆಯಲ್ಲಿ ರೈತರಿಗೆ 6 ಸಾವಿರ ನೀಡಲಾಗಿದೆ. ಪ್ರತಿ ಗ್ರಾಮಗಳಿಗೆ ಜನ್ ಧನ್ ಯೋಜನೆ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ರಾಮಮಂದಿರ ನಿರ್ಮಾಣ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದು ಜನಪರ ಕೆಲಸ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಮಲ್ಕುಂಡಿ

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಮಾತ್ರ ದೇಶ ಹಾಗೂ ರಾಜ್ಯ ಅಭಿವೃದ್ಧಿ ಕಾಣಲು ಸಾಧ್ಯ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಹೇಳಿದರು.

ತಾಲೂಕಿನ ಕಸುವಿನಹಳ್ಳಿ, ನವಿಲೂರು ಗ್ರಾಪಂ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್ ಪರ ಮತಯಾಚಿಸಿ ಅವರು ಮಾತನಾಡಿದರು.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ 10 ವರ್ಷದಲ್ಲಿ ಉತ್ತಮ ಆಡಳಿತ ನೀಡಿದೆ. ಕಿಸಾನ್ ಯೋಜನೆಯಲ್ಲಿ ರೈತರಿಗೆ 6 ಸಾವಿರ ನೀಡಲಾಗಿದೆ. ಪ್ರತಿ ಗ್ರಾಮಗಳಿಗೆ ಜನ್ ಧನ್ ಯೋಜನೆ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ರಾಮಮಂದಿರ ನಿರ್ಮಾಣ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದು ಜನಪರ ಕೆಲಸ ಮಾಡಿದ್ದಾರೆ. ರಾಜ್ಯ ಸರ್ಕಾರ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದು ರಾಜ್ಯದ ಜನತೆಯ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದರು.

ಜಿಪಂ ಮಾಜಿ ಸದಸ್ಯ ಚಿಕ್ಕರಂಗನಾಯಕ, ಬಿಜೆಪಿ ತಾಲೂಕು ಅಧ್ಯಕ್ಷ ಕೆಂಡಗಣ್ಣಪ್ಪ, ಪಿ. ಮಹೇಶ್, ಪ್ರಧಾನ ಕಾರ್ಯದರ್ಶಿ ಪುಟ್ಟಸ್ವಾಮಿ, ಸೋಮಣ್ಣ, ನಗರಸಭಾ ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಶಿವಣ್ಣ, ಗ್ರಾಪಂ ಮಾಜಿ ಅಧ್ಯಕ್ಷ ಕುಮಾರ್, ಗಿರೀಶ್, ಸಿದ್ದರಾಜು, ಶಿವನಂಜಪ್ಪ, ರಾಜಪ್ಪ, ನವೀನ ಇದ್ದರು.