ಭವಿಷ್ಯ ರೂಪಿಸಿಕೊಳ್ಳಲು ಹೆಚ್ಚು ಕಲಿಕೆಯಲ್ಲಿ ತೊಡಗಿ

| Published : Oct 30 2025, 01:02 AM IST

ಸಾರಾಂಶ

ವಿದ್ಯಾರ್ಥಿಗಳು ತಮ್ಮ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ತಮ್ಮ ಜೀವನವನ್ನು ಉತ್ತಮ ರೀತಿಯಲ್ಲಿ ನಡೆಸಿಕೊಳ್ಳಲು ಸರ್ಕಾರಗಳ ವಸತಿ ಶಾಲೆ

ಕನ್ನಡಪ್ರಭ ವಾರ್ತೆ ಸುತ್ತೂರುಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿಗಳು ಹೆಚ್ಚು ಕಲಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.ವರುಣ ಕ್ಷೇತ್ರಕ್ಕೆ ಸೇರಿರುವ ಎಸ್. ಹೊಸಕೋಟೆ ಮುರಾರ್ಜಿ ವಸತಿ ಶಾಲೆಯಲ್ಲಿ ವರಕೊಡು ಅಟಲ್ ಬಿಹಾರಿ ವಾಜಪೇಯಿ ಶಾಲೆ, ತಗಡೂರು ಅಟಲ್ ಬಿಹಾರಿ ವಾಜಪೇಯಿ ಶಾಲೆಯಲ್ಲಿ ಕಳೆದ ಸಾಲಿನ ಪಿಯುಸಿ ತರಗತಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಗದು ಬಹುಮಾನವನ್ನು ವಿತರಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ತಮ್ಮ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ತಮ್ಮ ಜೀವನವನ್ನು ಉತ್ತಮ ರೀತಿಯಲ್ಲಿ ನಡೆಸಿಕೊಳ್ಳಲು ಸರ್ಕಾರಗಳ ವಸತಿ ಶಾಲೆಗಳಲ್ಲಿ ತಮ್ಮ ಕಲಿಕೆಯನ್ನು ಮುಂದುವರಿಸಿಕೊಂಡು ಹೆಚ್ಚು ಹೆಚ್ಚು ಅಂಕ ಪಡೆದು ಸರ್ಕಾರಿ ಹುದ್ದೆಗಳಲ್ಲಿ ಪಡೆಯಬಹುದು. ಆದ್ದರಿಂದ ಪ್ರತಿ ಕುಟುಂಬದಲ್ಲೂ ಪ್ರತಿಒಂದು ಮಕ್ಕಳು ಹೆಚ್ಚು ವಿದ್ಯಾಭ್ಯಾಸ ಕಡೆ ಗಮನಹರಿಸಲು. ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಳ್ಳಲು ಸಲಹೆಗಳನ್ನು ನೀಡಿದರು.10 ಸಾವಿರ ರು. ಗಳಪ್ರತಿಭಾ ಪುರಸ್ಕಾರದ ಚೆಕ್ ಗಳನ್ನು ಅರ್ಹ ವಿದ್ಯಾರ್ಥಿಗಳಿಗೆ ಯತೀಂದ್ರ ವಿತರಿಸಿ, ಮುಂದಿನ ಭವಿಷ್ಯ ಉತ್ತಮವಾಗಿರಲೆಂದು ಹಾರೈಸಿದರು.ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡ, ಉಪವಿಭಾಗಾಧಿಕಾರಿ ಅಶಪ್ಪ ಪೂಜಾರಿ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ, ಹೊಸಕೋಟೆ ಗ್ರಾಪಂ ಅಧ್ಯಕ್ಷ ಇಂದ್ರಾಣಿ ಕುಮಾರ್, ಉಪಾಧ್ಯಕ್ಷ ಮಹದೇವಿ, ಶ್ರೀಕಂಠ, ಕಾಲೇಜಿನ ಪ್ರಾಂಶುಪಾಲರಾದ ಮಹೇಂದ್ರ, ಪುಟ್ಟಸ್ವಾಮಿ, ಕಾಲೇಜಿನ ಸಿಬ್ಬಂದಿ ವರ್ಗದವರು, ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.