ಹಳಿಯಾಳ ಮತ್ತು ದಾಂಡೇಲಿಯಲ್ಲಿನ ಕೆಡಿಸಿಸಿ ಬ್ಯಾಂಕ್, ಛತ್ರಪತಿ ಶಿವಾಜಿ ಸಹಕಾರಿ ಬ್ಯಾಂಕಿನ ಶಾಖೆಗಳಿಗೆ ಭೇಟಿ ನೀಡಿ ಸಿಬ್ಬಂದಿಗಳನ್ನು ಭೇಟಿಯಾಗಿ ಅಭಿವೃದ್ಧಿ ಮತ್ತು ಜನಪರ ವಿಚಾರಧಾರೆಯ ಎಸ್.ವಿ. ಸಂಕನೂರ ಅವರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.

ಹಳಿಯಾಳ: ಪಶ್ಚಿಮ ಪದವೀಧರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಸ್.ವಿ. ಸಂಕನೂರ ಅವರ ಪರವಾಗಿ ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಎಲ್. ಘೋಟ್ನೇಕರ ಅವರು ಮಂಗಳವಾರ ಹಳಿಯಾಳ ಮತ್ತು ದಾಂಡೇಲಿಯಲ್ಲಿ ಪ್ರಚಾರ ನಡೆಸಿ ಮತಯಾಚಿಸಿದರು.

ಹಳಿಯಾಳ ಮತ್ತು ದಾಂಡೇಲಿಯಲ್ಲಿನ ಕೆಡಿಸಿಸಿ ಬ್ಯಾಂಕ್, ಛತ್ರಪತಿ ಶಿವಾಜಿ ಸಹಕಾರಿ ಬ್ಯಾಂಕಿನ ಶಾಖೆಗಳಿಗೆ ಭೇಟಿ ನೀಡಿ ಸಿಬ್ಬಂದಿಗಳನ್ನು ಭೇಟಿಯಾಗಿ ಅಭಿವೃದ್ಧಿ ಮತ್ತು ಜನಪರ ವಿಚಾರಧಾರೆಯ ಎಸ್.ವಿ. ಸಂಕನೂರ ಅವರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.

ಈ ವೇಳೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾಜಿ ನರಸಾನಿ, ಮುಖಂಡರಾದ ನಾರಾಯಣ ಬೆಳಗಾಂವಕರ, ಜ್ಯೋತಿಬಾ ಪರಸನ್ನವರ ಮೊದಲಾದವರು ಇದ್ದರು.ಮೋಹನ ಲಿಂಬಿಕಾಯಿ ಪರ ಎಂ. ಕುಬೇರಪ್ಪ ಪ್ರಚಾರ

ಕಾರವಾರ: ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ಹಿನ್ನೆಲೆಯಲ್ಲಿ ಪಶ್ಚಿಮ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಕೆಪಿಸಿಸಿ ಶಿಕ್ಷಕರ ಮತ್ತು ಪದವೀಧರರ ಘಟಕದ ಮಾಜಿ ರಾಜ್ಯಾಧ್ಯಕ್ಷ ಡಾ. ಆರ್.ಎಂ ಕುಬೇರಪ್ಪ ತಿಳಿಸಿದರು.ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಅಹಿಂದ ವಲಯದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದೆ. ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹಾಗೂ ಶಾಸಕ ರುದ್ರಪ್ಪ ಲಮಾಣಿ ಅವರು ಮಾತುಕತೆ ನಡೆಸಿ, ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ್ದಾರೆ. ಹೀಗಾಗಿ ಪಕ್ಷದ ಅಧಿಕೃತ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುತ್ತಿದ್ದೇನೆ ಎಂದರು.

ಯಾವ ಸ್ಥಾನಮಾನ ನೀಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಶಿಕ್ಷಕರು ಮತ್ತು ಪದವೀಧರರ ಅಭಿವೃದ್ಧಿಗಾಗಿ ದೀರ್ಘಕಾಲದಿಂದ ಶ್ರಮಿಸಿದ್ದೇನೆ. ತಮ್ಮೊಂದಿಗೆ ಹೆಚ್ಚಿನ ಸಂಖ್ಯೆಯ ಪದವೀಧರರು ಹಾಗೂ ಪದವೀಧರ ಶಿಕ್ಷಕರ ಬೆಂಬಲವಿದ್ದು, ಪಕ್ಷದ ವರಿಷ್ಠರು ಪರಿಶೀಲಿಸಿ ಸೂಕ್ತ ಅವಕಾಶ ಕಲ್ಪಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

ತಮ್ಮ ನಿಲುವು ಬದಲಾವಣೆಯಿಂದ ಬೆಂಬಲಿಗರಿಗೆ ಅಸಮಾಧಾನವಾಗುವುದಿಲ್ಲವೇ ಎಂಬ ಪ್ರಶ್ನೆಗೆ, ಬೆಂಬಲಿಗರು ತಮ್ಮ ನಿರ್ಧಾರಕ್ಕೆ ಸಹಮತ ವ್ಯಕ್ತಪಡಿಸಿದ್ದು, ವರಿಷ್ಠರ ಸೂಚನೆಯಂತೆ ಮುಂದುವರಿಯುತ್ತಿದ್ದೇನೆ ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಕಲ್ಗುಟ್ಕರ್, ಬಾಬು ಶೇಖ್, ಕಾರ್ಯದರ್ಶಿ ಸೂರಜ್ ಕುರುಮಕರ್, ಡಿ.ಡಿ. ರಾಣೆ ಮತ್ತಿತರರು ಉಪಸ್ಥಿತರಿದ್ದರು.